AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champai Soren: ಬಿಜೆಪಿ ಸೇರಿದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್

"ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟು ಬಿಜೆಪಿ ಸೇರಲು ನಿರ್ಧರಿಸಿರುವುದಾಗಿ ಹೇಳಿದ್ದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್ ಇಂದು (ಶುಕ್ರವಾರ) ಬಿಜೆಪಿ ಸೇರಿದ್ದಾರೆ. ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಮ್ಮುಖದಲ್ಲಿ ಸೊರೇನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Champai Soren: ಬಿಜೆಪಿ ಸೇರಿದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್
ಚಂಪೈ ಸೊರೇನ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Aug 30, 2024 | 5:00 PM

Share

ದೆಹಲಿ ಆಗಸ್ಟ್ 30:  ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೇನ್  (Champai Soren) ಶುಕ್ರವಾರ ರಾಂಚಿಯಲ್ಲಿ (Ranchi)  ಬಿಜೆಪಿಗೆ (BJP) ಸೇರ್ಪಡೆಗೊಂಡಿದ್ದಾರೆ. ರಾಂಚಿಯಲ್ಲಿ ನಡೆದ ಸಮಾರಂಭದಲ್ಲಿ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಸಮ್ಮುಖದಲ್ಲಿ ಸೋರೆನ್ ಮತ್ತು ಅವರ ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಬಿಜೆಪಿ ಸೇರಿದ್ದಾರೆ.

ಒಮ್ಮೆ ಜಾರ್ಖಂಡ್ ಮುಕ್ತಿ ಮೋರ್ಚಾ ಸಂಸ್ಥಾಪಕ ಶಿಬು ಸೊರೆನ್ ಅವರ ನಿಕಟ ಸಹಾಯಕರಾಗಿದ್ದ ಸೋರೆನ್ ಬುಧವಾರ ತಮ್ಮ ಪಕ್ಷವನ್ನು ತೊರೆದಿದ್ದಾರೆ. 67 ವರ್ಷದ ನಾಯಕ ಶಿಬು ಸೊರೆನ್‌ಗೆ ಬರೆದ ಪತ್ರದಲ್ಲಿ, “ನನಗೆ ಕುಟುಂಬದಂತಿರುವ ಜೆಎಂಎಂ ಪಕ್ಷವನ್ನು ನಾನು ತೊರೆಯುತ್ತೇನೆ ಎಂದು ನಾನು ನನ್ನ ಕನಸಿನಲ್ಲಿಯೂ ಊಹಿಸಿರಲಿಲ್ಲ. ಹಿಂದಿನ ಘಟನೆಗಳು ಬಹಳ ನೋವಿನಿಂದ ಈ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಮಾಡಿತು.ಪಕ್ಷವು ತನ್ನ ತತ್ವದಿಂದ ವಿಮುಖವಾಗಿದೆ ಎಂದು ಹೇಳಲು ನನಗೆ ನೋವಾಗಿದೆ ಎಂದಿದ್ದಾರೆ.

ಜಾರ್ಖಂಡ್‌ನ ಬುಡಕಟ್ಟು ಪ್ರದೇಶದಲ್ಲಿ ಬಿಜೆಪಿ ನೆಲೆಯನ್ನು ಸ್ಥಾಪಿಸಲು ನೋಡುತ್ತಿದೆ, ಅಲ್ಲಿ ಪರಿಶಿಷ್ಟ ಪಂಗಡಗಳು ಮತದಾರರಲ್ಲಿ ಸುಮಾರು 26 ಪ್ರತಿಶತವನ್ನು ಹೊಂದಿವೆ.

ಹೇಮಂತ್ ಸೊರೇನ್ ಅವರ ಅನುಪಸ್ಥಿತಿಯಲ್ಲಿ ಚಂಪೈ ಅವರು ಸಿಎಂ ಆಗಿದ್ದರು.  ಜನವರಿ 31 ರಂದು ಜಾರಿ ನಿರ್ದೇಶನಾಲಯದಿಂದ (ಇಡಿ) ಹೇಮಂತ್ ಸೊರೇನ್ ಅವರನ್ನು ಬಂಧಿಸುವ ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದಾಗ, ಚಂಪೈ ಸೊರೇನ್ ಅವರನ್ನು ಸಿಎಂ ಆಗಿ ನೇಮಿಸಲಾಯಿತು.

ಸೊರೇನ್ ಜೈಲಿನಲ್ಲಿರುವವರೆಗೂ ಅವರು ಸಿಎಂ ಆಗಿದ್ದರು. ಜೂನ್ 28 ರಂದು ಹೇಮಂತ್ ಸೊರೇನ್‌ಗೆ ಜಾಮೀನು ನೀಡಿದ ನಂತರ, ಜೆಎಂಎಂ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಸ್ಥಾನದಿಂದ ಕೆಳಗಿಳಿಯಬೇಕಾಯಿತು.

“ಇಷ್ಟು ಅವಮಾನಗಳ ನಂತರ, ನಾನು ಪರ್ಯಾಯ ಮಾರ್ಗವನ್ನು ಹುಡುಕುವ ಅನಿವಾರ್ಯತೆಗೆ ಒಳಗಾಗಿದ್ದೇನೆ. ಮುಖ್ಯಮಂತ್ರಿಗಳ ಕಾರ್ಯಕ್ರಮವನ್ನು ಇನ್ನೊಬ್ಬ ವ್ಯಕ್ತಿ ರದ್ದುಗೊಳಿಸುವುದಕ್ಕಿಂತ ಹೆಚ್ಚಿನ ಅವಮಾನ ಪ್ರಜಾಪ್ರಭುತ್ವದಲ್ಲಿ ಬೇರೇನಿದೆ? ಸಭೆಯಲ್ಲಿ (ಜುಲೈ 3 ರಂದು ಶಾಸಕಾಂಗ ಪಕ್ಷದ ಸಭೆ) ನನಗೆ ರಾಜೀನಾಮೆ ನೀಡುವಂತೆ ಕೇಳಲಾಯಿತು ಎಂದು ಚಂಪೈ ಸೊರೇನ್ ಹೇಳಿದ್ದಾರೆ.

ಇದನ್ನೂ ಓದಿ: Modi Maharashtra Visit: ಒಂದು ದಶಕದಲ್ಲಿ ಭಾರತದ ಬ್ರಾಡ್‌ಬ್ಯಾಂಡ್ ಬಳಕೆದಾರರ ಸಂಖ್ಯೆ 6 ಕೋಟಿಯಿಂದ 94 ಕೋಟಿಗೆ ಏರಿದೆ: ಪ್ರಧಾನಿ ಮೋದಿ

“ಆದರೆ ಅವರು ( ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರ ಹೆಸರು ಹೇಳದೇ) ಕುರ್ಚಿಯಲ್ಲಿ ಆಸಕ್ತಿ ತೋರುತ್ತಿದ್ದರು. ನಾನು ನನ್ನ ಇಡೀ ಜೀವನವನ್ನು ಮುಡಿಪಾಗಿಟ್ಟ ಪಕ್ಷದಲ್ಲಿ ನನಗೆ ಅಸ್ತಿತ್ವವಿಲ್ಲಎಂದು ಭಾವಿಸಿದೆ, ”ಎಂದು ಚಂಪೈ ಸೊರೇನ್ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:18 pm, Fri, 30 August 24

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!