ಭೂ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್

ಜೈಲಿನಿಂದ ಬಿಡುಗಡೆಯಾದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಹೇಮಂತ್ ಸೊರೇನ್, ನನ್ನನ್ನು 5 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ನ್ಯಾಯಾಂಗ ಪ್ರಕ್ರಿಯೆಯು ಕೇವಲ ದಿನಗಳು ಅಥವಾ ತಿಂಗಳುಗಳಲ್ಲ ಹೇಗೆ ವರ್ಷಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇಂದು, ಇದು ನಮ್ಮ ವಿರುದ್ಧ ಹೇಗೆ ಸಂಚು ರೂಪಿಸಲಾಯಿತು ಎಂಬುದು ಇಡೀ ದೇಶಕ್ಕೆ ಸಂದೇಶವಾಗಿದೆ ಎಂದು ಹೇಳಿದ್ದಾರೆ.

ಭೂ ಹಗರಣ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ಹೇಮಂತ್ ಸೊರೇನ್
ಹೇಮಂತ್ ಸೊರೇನ್
Follow us
|

Updated on: Jun 28, 2024 | 7:38 PM

ದೆಹಲಿ ಜೂನ್ 28: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (Jharkhand Mukti Morcha) ನಾಯಕ ಹೇಮಂತ್ ಸೊರೇನ್ (Hemant Soren) ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (money laundering case) ಪ್ರಕರಣದಲ್ಲಿ ಹೈಕೋರ್ಟ್‌ನಿಂದ ಜಾಮೀನು ಪಡೆದ ನಂತರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ನನ್ನನ್ನು 5 ತಿಂಗಳ ಕಾಲ ಜೈಲಿನಲ್ಲಿ ಇರಿಸಲಾಗಿತ್ತು. ನ್ಯಾಯಾಂಗ ಪ್ರಕ್ರಿಯೆಯು ಕೇವಲ ದಿನಗಳು ಅಥವಾ ತಿಂಗಳುಗಳಲ್ಲ ಹೇಗೆ ವರ್ಷಗಳನ್ನು ತೆಗೆದುಕೊಳ್ಳುತ್ತಿದೆ ಎಂಬುದನ್ನು ನಾವು ನೋಡುತ್ತಿದ್ದೇವೆ. ಇಂದು, ಇದು ನಮ್ಮ ವಿರುದ್ಧ ಹೇಗೆ ಸಂಚು ರೂಪಿಸಲಾಯಿತು ಎಂಬುದು ಇಡೀ ದೇಶಕ್ಕೆ ಸಂದೇಶವಾಗಿದೆ. ನಾವು ಪ್ರಾರಂಭಿಸಿದ ಹೋರಾಟ ಮತ್ತು ನಾವು ಮಾಡಿದ ನಿರ್ಣಯಗಳನ್ನು ಈಡೇರಿಸಲು ನಾವು ಕೆಲಸ ಮಾಡುತ್ತೇವೆ ಎಂದು ಮಾಧ್ಯಮದವರೊಂದಿಗೆ ಮಾತನಾಡಿದ ಸೊರೇನ್ ಹೇಳಿದ್ದಾರೆ.

ನ್ಯಾಯಾಲಯವು ಅರ್ಜಿಯ ಆದೇಶವನ್ನು ಕಾಯ್ದಿರಿಸಿದ ಎರಡು ವಾರಗಳ ನಂತರ ನ್ಯಾಯಾಲಯವು ಪ್ರಕರಣದಲ್ಲಿ ಸೊರೇನ್ ಅವರಿಗೆ ಜಾಮೀನು ನೀಡಿತು.

ನ್ಯಾಯಮೂರ್ತಿ ರೊಂಗೋನ್ ಮುಖೋಪಾಧ್ಯಾಯ ಅವರ ಏಕ ಪೀಠವು ₹ 50,000 ಜಾಮೀನು ಬಾಂಡ್ ಮತ್ತು ಅದೇ ಮೊತ್ತದ ಇಬ್ಬರು ಶ್ಯೂರಿಟಿಗಳ ಮೇಲೆ ಸೊರೇನ್ ಅವರಿಗೆ ಜಾಮೀನು ನೀಡಿತು.

ಮಾಜಿ ಮುಖ್ಯಮಂತ್ರಿ ಮೇಲ್ನೋಟಕ್ಕೆ ಅಪರಾಧದಲ್ಲಿ ತಪ್ಪಿತಸ್ಥರಲ್ಲ ಎಂದು ನ್ಯಾಯಾಲಯ ಹೇಳಿರುವುದಾಗಿ ಸೊರೇನ್ ಅವರ ವಕೀಲರು ಪಿಟಿಐಗೆ ತಿಳಿಸಿದ್ದಾರೆ.

“ಮೇಲ್ನೋಟಕ್ಕೆ ಅಪರಾಧದಲ್ಲಿ ತಪ್ಪಿತಸ್ಥರಲ್ಲ ಮತ್ತು ಜಾಮೀನಿನ ಮೇಲೆ ಅರ್ಜಿದಾರರು ಅಪರಾಧ ಮಾಡುವ ಸಾಧ್ಯತೆಯಿಲ್ಲ” ಎಂದು ಹಿರಿಯ ವಕೀಲ ಅರುಣಾಭ್ ಚೌಧರಿ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ಜಾರ್ಖಂಡ್ ಮುಕ್ತಿ ಮೋರ್ಚಾದ (ಜೆಎಂಎಂ) ಕಾರ್ಯನಿರ್ವಾಹಕ ಅಧ್ಯಕ್ಷ ಸೊರೇನ್ ಅವರನ್ನು ಜನವರಿ 31 ರಂದು ಜಾರಿ ನಿರ್ದೇಶನಾಲಯ (ಇಡಿ) ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬಂಧಿಸಿತ್ತು. ಅಂದಿನಿಂದ 48 ವರ್ಷದ ರಾಜಕಾರಣಿಯನ್ನು ರಾಂಚಿಯ ಬಿರ್ಸಾ ಮುಂಡಾ ಜೈಲಿನಲ್ಲಿ ಇರಿಸಲಾಗಿತ್ತು.

ಶುಕ್ರವಾರ ನಡೆದ ವಿಚಾರಣೆಯ ವೇಳೆ ಜಾರಿ ನಿರ್ದೇಶನಾಲಯ (ED)ಯನ್ನು ಪ್ರತಿನಿಧಿಸಿದ ಎಸ್‌ವಿ ರಾಜು ಅವರು ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿ, ಸೊರೇನ ಪ್ರಭಾವಿ ವ್ಯಕ್ತಿಯಾಗಿದ್ದು, ಈ ಹಿಂದೆ ರಾಜ್ಯದ ಮಿಷನರಿಯನ್ನು ಬಳಸಿಕೊಂಡು ತಮ್ಮನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ್ದರು ಎಂದು ತಿಳಿಸಿದ್ದಾರೆ. “ಜಾಮೀನು ನೀಡಿದರೆ, ಅವರು ರಾಜ್ಯದ ಅಧಿಕಾರಿಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ತನಿಖೆಗೆ ಅಡ್ಡಿಪಡಿಸಲು ಪ್ರಯತ್ನಿಸಬಹುದು ಎಂದಿದ್ದಾರೆ.

ಜಾರ್ಖಂಡ್‌ನ ಬಾರ್‌ಗೇನ್‌ನಲ್ಲಿರುವ ಜಮೀನಿನಲ್ಲಿ ಬ್ಯಾಂಕ್ವೆಟ್ ಹಾಲ್ ನಿರ್ಮಿಸುವ ಯೋಜನೆಯನ್ನು ಸೊರೇನ್ ಹೊಂದಿದ್ದರು ಮತ್ತು ಅವರ ಆರ್ಕಿಟೆಕ್ಟ್ ಸ್ನೇಹಿತ ವಿನೋದ್ ಸಿಂಗ್ ಅದರ ನಕ್ಷೆಯನ್ನು ಮೊಬೈಲ್ ಮೂಲಕ ಅವರಿಗೆ ಕಳುಹಿಸಿದ್ದಾರೆ ಎಂದು ರಾಜು ಹೇಳಿದ್ದಾರೆ. ಸಮೀಕ್ಷೆಯ ಸಮಯದಲ್ಲಿ, ಸಿಂಗ್ ಅವರು ಬಾರ್ಗೇನ್‌ನಲ್ಲಿ ಭೂಮಿಯನ್ನು ಗುರುತಿಸಿದ್ದಾರೆ ಮತ್ತು ಮುಖ್ಯಮಂತ್ರಿ ಕಚೇರಿಯಿಂದ ಸೂಚನೆಗಳ ಮೇರೆಗೆ ಜಮೀನಿನ ವಿವರಗಳನ್ನು ನೀಡಿರುವುದಾಗಿ ತಮ್ಮ ಹೇಳಿಕೆಯಲ್ಲಿ ಒಪ್ಪಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ಮೇಲ್ಛಾವಣಿ ಕುಸಿತದ ತನಿಖೆಗೆ ಸಮಿತಿ ರಚನೆ

ಸೊರೇನ್ ಪರ ವಕೀಲರಾದ ಕಪಿಲ್ ಸಿಬಲ್ ಮತ್ತು ಮೀನಾಕ್ಷಿ ಅರೋರಾ ಅವರು, ಯಾವುದೇ ಅಕ್ರಮ ಹಣ ವರ್ಗಾವಣೆ ಪ್ರಕರಣ ಇಲ್ಲ, ಆದರೆ ಇದು ರಾಜಕೀಯ ಸೇಡಿನ ಪ್ರಕರಣ. “ಇದು ಇಡಿಯನ್ನು ದುರ್ಬಳಕೆ ಮಾಡುವ ಮೂಲಕ ಕೇಂದ್ರ ಸರ್ಕಾರದ ದುರುದ್ದೇಶಪೂರಿತ ಕಾನೂನು ಕ್ರಮ ಇದಾಗಿದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ನಿಜ ಜೀವನದಲ್ಲಿ ಆ ರೀತಿ ಪಾತ್ರ ಆಗಬಾರದು’: ದರ್ಶನ್​ ಬಗ್ಗೆ ಹಂಸಲೇಖ ಮಾತು
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು