Jharkhand Politics: ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆ.30ರಂದು ಬಿಜೆಪಿಗೆ ಸೇರ್ಪಡೆ

ಜಾರ್ಖಂಡ್​ನ ಮಾಜಿ ಸಿಎಂ ಚಂಪೈ ಸೊರೆನ್ ಶೀಘ್ರ ಬಿಜೆಪಿಗೆ ಸೇರಲಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅಧಿಕೃತ ಮಾಹಿತಿ ನೀಡಿದ್ದಾರೆ.

Jharkhand Politics: ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಆ.30ರಂದು ಬಿಜೆಪಿಗೆ ಸೇರ್ಪಡೆ
ಚಂಪೈ ಸೊರೆನ್

Updated on: Aug 27, 2024 | 8:05 AM

ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್(Champai Soren) ಆಗಸ್ಟ್​ 30ರಂದು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಈ ಕುರಿತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಾಹಿತಿ ನೀಡಿದ್ದು, ಆಗಸ್ಟ್​ 30ರಂದು ಸೊರೆನ್ ಬಿಜೆಪಿಗೆ ಸೇರ್ಪಡೆಯಾಗಲಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

ಅವರು ರಾಂಚಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ರಾಜಕೀಯ ನಿವೃತ್ತಿ, ಹೊಸ ಪಕ್ಷ ಕಟ್ಟುವುದು ಅಥವಾ ಇನ್ನೊಂದು ಪಕ್ಷಕ್ಕೆ ಸೇರುವುದು ಎಂಬ ಮೂರು ಆಯ್ಕೆಗಳು ನನ್ನ ಮುಂದಿವೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದರು.

ಆಗಸ್ಟ್​ 21ರಂದು ರಾಜಕೀಯ ನಿವೃತ್ತಿ ಪಡೆಯುವುದಿಲ್ಲ, ನಾನು ಹೊಸ ಸಂಘಟನೆ ಬಲಪಡಿಸುತ್ತೇನೆ ಎಂದಿದ್ದರು. ಜನವರಿ 31ರಂದು ಜಾರಿ ನಿರ್ದೇಶನಾಲಯವು ಹೇಮಂತ್ ಸೊರೆನ್​ ಅವರನ್ನು ಬಂಧಿಸಿದ ನಂತರ ಚಂಪೈ ಜಾರ್ಖಂಡ್​ ಮುಖ್ಯಮಮತ್ರಿಯಾಗಿದ್ದರು.

ಮತ್ತಷ್ಟು ಓದಿ: Champai Soren: ಹೊಸ ಪಕ್ಷ ರಚಿಸುವ ಯೋಜನೆ ಪ್ರಕಟಿಸಿದ ಜಾರ್ಖಂಡ್ ಮಾಜಿ ಸಿಎಂ ಚಂಪೈ ಸೊರೇನ್

ಹೇಮಂತ್ ಸೊರೆನ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ನಂತರ ಜುಲೈ 3 ರಂದು ಅವರು ಹುದ್ದೆಯಿಂದ ಕೆಳಗಿಳಿದಿದ್ದರು.

ನಾನು ಯಾವುದೇ ಹುದ್ದೆಯಲ್ಲಿರಲಿ ಅಥವಾ ಇಲ್ಲದಿರಲಿ, ನಾನು ಯಾವಾಗಲೂ ಸಾರ್ವಜನಿಕರಿಗೆ ಲಭ್ಯವಿದ್ದು, ಅವರ ಸಮಸ್ಯೆಗಳನ್ನು ಪರಿಹರಿಸುವೆಡೆಗೆ ಗಮನಹರಿಸುತ್ತೇನೆ ಎಂದಿದ್ದರು.
2024ರಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸರ್ಕಾರವನ್ನು ಮೂಲೆಗುಂಪು ಮಾಡಲು ಬಿಜೆಪಿ ಸಂಪೂರ್ಣ ತಯಾರಿ ನಡೆಸಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ