ಜಾರ್ಖಂಡ್ ಸಚಿವ ಚಂಪೈ ಸೊರೆನ್ ಬೆಂಗಾವಲು ವಾಹನ ಅಪಘಾತ, ಓರ್ವ ಸಾವು, ಐವರಿಗೆ ಗಾಯ

ಜಾರ್ಖಂಡ್​ನ ಮಾಜಿ ಮುಖ್ಯಮಂತ್ರಿ ಹಾಗೂ ಸಚಿವ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಓರ್ವ ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ.

ಜಾರ್ಖಂಡ್ ಸಚಿವ ಚಂಪೈ ಸೊರೆನ್ ಬೆಂಗಾವಲು ವಾಹನ ಅಪಘಾತ, ಓರ್ವ ಸಾವು, ಐವರಿಗೆ ಗಾಯ
ಅಪಘಾತ

Updated on: Aug 21, 2024 | 12:44 PM

ಸಚಿವ ಚಂಪೈ ಸೊರೆನ್ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿ ಓರ್ವ ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಜಾರ್ಖಂಡ್​ನಲ್ಲಿ ನಡೆದಿದೆ. ಎಸ್ಕಾರ್ಟ್​ ಚಾಲಕ ಕಾನ್​​ಸ್ಟೆಬಲ್ ವಿನಯ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, ಈ ಅಪಘಾತದಲ್ಲಿ ಐವರು ಯೋಧರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಘಟನೆ ನಡೆದಿದೆ.

ಸಚಿವ ಚಂಪೈ ಸೊರೆನ್ ಅವರನ್ನು ಜಿಲ್ಲಿಂಗೋಡದಲ್ಲಿರುವ ಅವರ ನಿವಾಸಕ್ಕೆ ತಲುಪಿಸಿ ಯೋಧರು ಪೊಲೀಸ್ ಹಿಂತಿರುಗುತ್ತಿದ್ದಾಗ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವ ಬೆಂಗಾವಲು ವಾಹನದಲ್ಲಿ ಪ್ರಯಾಣಿಸುತ್ತಿದ್ದ ಇತರ ಐವರು ಯೋಧರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಅಪಘಾತದಲ್ಲಿ ಗಾಯಗೊಂಡ ಸೈನಿಕರಲ್ಲಿ ಮನೋಜ್ ಭಗತ್, ಹರೀಶ್ ಲಗುರಿ, ಸಾವನ್ ಚಂದ್ರ ಹೆಂಬ್ರಾಮ್ ಮತ್ತು ದಯಾಳ್ ಮಹತೋ ಸೇರಿದ್ದಾರೆ.

ಭೀಕರ ಅಪಘಾತದ ಬಳಿಕ ಸ್ಥಳೀಯರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸೆರೈಕೆಲಾ ಪೊಲೀಸರು ಸ್ಥಳಕ್ಕೆ ಧಾವಿಸಿ ಎಲ್ಲಾ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕರೆದೊಯ್ದರು, ಅಲ್ಲಿಂದ ಅವರನ್ನು ಉತ್ತಮ ಚಿಕಿತ್ಸೆಗಾಗಿ ಜೆಮ್ಶೆಡ್‌ಪುರಕ್ಕೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ:
ಚಿಕ್ಕಮಗಳೂರು: ಓವರ್ ಟೇಕ್ ಮಾಡಲು ಹೋಗಿ ಅಪಘಾತ, ಎದೆ ಝಲ್ ಅನಿಸುವ ಡೆಡ್ಲಿ ಆಕ್ಸಿಡೆಂಟ್ ವಿಡಿಯೋ ಇದೆ

ಈ ಭೀಕರ ಅಪಘಾತದಲ್ಲಿ ಬೆಂಗಾವಲು ವಾಹನದ ಚಾಲಕನಾಗಿದ್ದ ಓರ್ವ ಯೋಧ ಸಾವನ್ನಪ್ಪಿದ್ದು, ಇತರ ಐವರು ಯೋಧರು ಗಾಯಗೊಂಡಿದ್ದಾರೆ.

ಮುಡಿಯಾ ಗ್ರಾಮದ ಬಳಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us