ದೆಹಲಿ: ಹೊಸ ಜಾಮೀನು ಅರ್ಜಿ ಸಲ್ಲಿಸಿದ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್

Umar Khalid: ಖಾಲಿದ್ ಅವರ ವಕೀಲ ತೃದೀಪ್ ಪಯಸ್ ಅವರು ತಮ್ಮ ಜಾಮೀನು ಅರ್ಜಿಯನ್ನು ಹಿಂಪಡೆಯುತ್ತಿದ್ದಾರೆ ಮತ್ತು ಅದನ್ನು ಹೊಸದಾಗಿ ಬದಲಾಯಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿ: ಹೊಸ ಜಾಮೀನು ಅರ್ಜಿ ಸಲ್ಲಿಸಿದ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್
ಉಮರ್ ಖಾಲಿದ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 06, 2021 | 2:35 PM

ದೆಹಲಿ: ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಈಶಾನ್ಯ ದೆಹಲಿ ಗಲಭೆ (Delhi riot) ಯುಎಪಿಎ ಪ್ರಕರಣದಲ್ಲಿ(UAPA case) ತನ್ನ ಜಾಮೀನು ಅರ್ಜಿಯನ್ನು ಹಿಂಪಡೆದು ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ದೆಹಲಿ ನ್ಯಾಯಾಲಯ ವಿಚಾರಣೆ ಪ್ರಕ್ರಿಯೆ ವಿಳಂಬ ಮಾಡುತ್ತಿದೆ ಎಂದು ಆರೋಪಿಸಿ ಅವರು ಹೊಸ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅಮಿತಾಭ್ ರಾವತ್ ಅವರು ಹೊಸ ಅರ್ಜಿಗೆ ಉತ್ತರ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿ ಪ್ರಕರಣದ ವಿಚಾರಣೆಯನ್ನು ಶುಕ್ರವಾರಕ್ಕೆ ಮುಂದೂಡಿದ್ದಾರೆ. ಮಾಜಿ ಕಾಂಗ್ರೆಸ್ ಕೌನ್ಸಿಲರ್ ಇಶ್ರತ್ ಜಹಾನ್ ಸಲ್ಲಿಸಿದ ಜಾಮೀನು ಅರ್ಜಿಯ ನಿರ್ವಹಣೆಯ ಸಮಸ್ಯೆಯನ್ನು ಪ್ರಾಸಿಕ್ಯೂಷನ್ ಎತ್ತುತ್ತಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆಯಾಗಿದೆ. ಈ ಪ್ರಕರಣದಲ್ಲಿ, ಜಹಾನ್ ಜಾಮೀನು ಅರ್ಜಿಯನ್ನು ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್‌ಪಿಸಿ) ಸೆಕ್ಷನ್ 439 ರ ಅಡಿಯಲ್ಲಿ ಸಲ್ಲಿಸಲಾಗಿದೆ ಮತ್ತು ಅದನ್ನು ವಿಶೇಷ ನ್ಯಾಯಾಲಯವು ಪರಿಗಣಿಸಲು ಸಾಧ್ಯವಿಲ್ಲ ಎಂದು ಸರ್ಕಾರಿ ವಕೀಲರು ವಾದಿಸಿದ್ದರು.

ಪ್ರಸ್ತುತ ಜಾಮೀನು ಅರ್ಜಿಯನ್ನು ಹಿಂಪಡೆಯುವುದು ಮತ್ತು ಸೆಕ್ಷನ್ 437 ಸಿಆರ್‌ಪಿಸಿ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವುದು ಜಹಾನ್‌ನ ಏಕೈಕ ಆಯ್ಕೆಯಾಗಿದೆ ಎಂದು ಅವರು ಹೇಳಿದ್ದರು. ಉಮರ್ ಜಾಮೀನು ವಿಚಾರಣೆಯ ಸಮಯದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅಮಿತ್ ಪ್ರಸಾದ್ ಅವರು ಅರ್ಜಿಗೆ ಉತ್ತರವನ್ನು ಸಲ್ಲಿಸುವುದಾಗಿ ಹೇಳಿದರು. “ಪ್ರಾಸಿಕ್ಯೂಷನ್ ಅನ್ನು ವಿಸ್ತರಿಸುವ ತಂತ್ರ ಎಂದು ಬಣ್ಣಿಸಿರುವುದಕ್ಕೆ ನಾನು ಉತ್ತರಿಸಬೇಕಾಗಿದೆ ಎಂದು ಅವರು ಹೇಳಿದರು.

ಖಾಲಿದ್ ಅವರ ವಕೀಲ ತೃದೀಪ್ ಪಯಸ್ ಅವರು ತಮ್ಮ ಜಾಮೀನು ಅರ್ಜಿಯನ್ನು ಹಿಂಪಡೆಯುತ್ತಿದ್ದಾರೆ ಮತ್ತು ಅದನ್ನು ಹೊಸದಾಗಿ ಬದಲಾಯಿಸುವುದಾಗಿ ನ್ಯಾಯಾಲಯಕ್ಕೆ ತಿಳಿಸಿದರು.

ಜಾಮೀನು ಅರ್ಜಿಯನ್ನು ಬದಲಿಸಲು ನಾನು ಅರ್ಜಿ ಸಲ್ಲಿಸಿದ್ದೇನೆ. ಲಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ನ್ಯಾಯಾಲಯವು ಪರಿಗಣಿಸಲು ಯಾವುದೇ ಅಡ್ಡಿಯಿಲ್ಲ “ಎಂದು ಪಯಸ್ ನ್ಯಾಯಾಲಯಕ್ಕೆ ತಿಳಿಸಿದರು. “ದಿನದ ಸಮಯ ವ್ಯರ್ಥವಾಗದಂತೆ” ವಾದಗಳನ್ನು ಮುಂದುವರಿಸಲು ಅವಕಾಶ ನೀಡುವಂತೆ ಪಯಸ್ ನ್ಯಾಯಾಲಯವನ್ನು ಕೇಳಿದರು. ಇದು ವಿಸ್ತರಿಸುವ ತಂತ್ರವಲ್ಲ ಎಂದು ಸರ್ಕಾರಿ ವಕೀಲರ ಲಿಖಿತ ಪ್ರತಿಕ್ರಿಯೆಯನ್ನು ಅವರು ಸಲ್ಲಿಸಿದರು.

ಆದಾಗ್ಯೂ, ಹಿಂದಿನ ಜಾಮೀನು ಅರ್ಜಿಯನ್ನು ಹಿಂಪಡೆದರೆ, ಪ್ರಕ್ರಿಯೆಯ ಪ್ರಕಾರ ಹೊಸದಾಗಿ ಉತ್ತರವನ್ನು ಸಲ್ಲಿಸಬೇಕು ಎಂದು ವಕೀಲರು ಹೇಳಿದ್ದಾರೆ.  ವಿಚಾರಣೆಯ ಕೊನೆಯ ದಿನಾಂಕದಂದು, ಯುಎಪಿಎ (UAPA) ಚಾರ್ಜ್‌ಶೀಟ್‌ನಲ್ಲಿ ಉಮರ್‌ನನ್ನು ಕೋಮುವಾದಿ ಎಂದು ಬಣ್ಣಿಸಲಾಗಿದೆ. ಚಾರ್ಜ್‌ಶೀಟ್ ಅನ್ನು ರಚಿಸಿದ ಅಧಿಕಾರಿಯು ಕೋಮುವಾದಿ ಎಂದು ಪಯಸ್ ಸುದೀರ್ಘವಾಗಿ ವಾದಿಸಿದರು.

“ನನ್ನ ವಿರುದ್ಧ ಸಾಕ್ಷಿ ಹೇಳಿಕೆಗಳನ್ನು ತಯಾರಿಸಲಾಗುತ್ತಿದೆ” ಮತ್ತು ಒಬ್ಬ ರಕ್ಷಿತ ಸಾಕ್ಷಿ “ಎರಡು ನಾಲಿಗೆಯಲ್ಲಿ ಮಾತನಾಡುತ್ತಿದ್ದಾನೆ” ಎಂದು ಪಯಸ್ ವಾದಿಸಿದ್ದರು. ಚಾರ್ಜ್‌ಶೀಟ್‌ನಲ್ಲಿ ಹ್ಯಾರಿ ಪಾಟರ್ ಖಳನಾಯಕ ವೋಲ್ಡ್‌ಮಾರ್ಟ್‌ನ ಉಲ್ಲೇಖಗಳಿಗೆ ಇತರ ಉದಾಹರಣೆಗಳ ನಡುವೆ ಅವನು ನೀಡಿದ ಹೇಳಿಕೆಗಳ ನಡುವೆ ಹೋಲಿಸಿ ದಾಖಲಿಸಿದ ಅಂತಿಮ ವರದಿಯು “ಕಳಪೆ” ಎಂದ ಪಯಸ್ “ಈ ಪ್ರಕರಣದಲ್ಲಿ ಯಾರನ್ನೂ ಬಂಧಿಸಬಾರದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

(Former JNU student Umar Khalid has withdrawn his bail application to file new bail plea)

ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಒಡೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ