Oommen Chandy: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ

ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ ಚಿಕಿತ್ಸೆ ಫಲಿಸದೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

Oommen Chandy: ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ಬೆಂಗಳೂರಿನಲ್ಲಿ ನಿಧನ
ಉಮ್ಮನ್ ಚಾಂಡಿ

Updated on: Jul 18, 2023 | 7:12 AM

ಬೆಂಗಳೂರು, (ಜುಲೈ 18): ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (79) (Oommen Chandy) ವಿಧಿವಶರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಅವರು ಫೆಬ್ರುವರಿ 12ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು. ಆದ್ರೆ,  ಚಿಕಿತ್ಸೆ ಫಲಕಾರಿಯಾಗದೇ ಇಂದು(ಜುಲೈ 18) ಕೊನೆಯುಸಿರೆಳೆದಿದ್ದಾರೆ. ಉಮ್ಮನ ಚಾಂಡಿ ಸಾವನ್ನಪ್ಪಿರುವುದನ್ನು ಕೇರಳ ಕಾಂಗ್ರೆಸ್ ರಾಜ್ಯಾಧ್ಯಕ್ಷ ಕೆ. ನಟರಾಜ್​ನ್ ಟ್ವಿಟ್ಟರ್​ ಮೂಲಕ ಖಚಿತಪಡಿಸಿದ್ದಾರೆ.  ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್‌ಎಲ್‌ಬಿ ಪದವಿ ಪೂರೈಸಿದ್ದರು.

ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್​ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್‌ನ ರಾಜ್ಯಾಧ್ಯಕ್ಷರಾದ್ದರು.

ಉಮ್ಮನ್ ಚಾಂಡಿ 2004 ರಿಂದ 2006 ಹಾಗೂ 2011 ರಿಂದ 2016ರ ವರೆಗೆ ಕೇರಳದ ಮುಖ್ಯಮಂತ್ರಿಯಾಗಿದ್ದರು. ಒಮನ್ ಚಾಂಡಿ 1970 ರಲ್ಲಿ ಪುತ್ತುಪಲ್ಲಿ ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಿದ್ದರು.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಸಾರ್ವಜನಿಕ ಸೇವೆಯಲ್ಲಿನ ಭ್ರಷ್ಟಾಚಾರವನ್ನು ತಡೆಗಟ್ಟಲು ಶ್ರಮಿಸಿದ್ದ ಒಮ್ಮನ್ ಚಾಂಡಿಗೆ 2013 ರಲ್ಲಿ ವಿಶ್ವಸಂಸ್ಥೆಯ ಸಾರ್ವಜನಿಕ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:37 am, Tue, 18 July 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us