Param Bir Singh ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಅಮಾನತು
ಡಿಜಿಪಿ ಸಂಜಯ್ ಪಾಂಡೆ ಅವರು ಪರಮ್ ಬೀರ್ ಸಿಂಗ್ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ ಭಾಗಿಯಾಗಿರುವ ಮತ್ತು ಹೆಸರಿಸಿರುವ ಎಲ್ಲರನ್ನು ಅಮಾನತುಗೊಳಿಸಲು ಪ್ರಸ್ತಾವನೆಯನ್ನು ಕಳುಹಿಸಿದ್ದರು.
ಮುಂಬೈ: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ (Param Bir Singh )ಅವರನ್ನು ಮಹಾರಾಷ್ಟ್ರ(Maharashtra) ಸರ್ಕಾರ ಗುರುವಾರ ಅಮಾನತುಗೊಳಿಸಿದೆ. ಪರಮ್ ಬೀರ್ ಸಿಂಗ್ ಮತ್ತು ಮತ್ತೊಬ್ಬ ಡಿಸಿಪಿ ಶ್ರೇಣಿಯ ಅಧಿಕಾರಿಯ ಅಮಾನತು ಶಿಕ್ಷೆಯನ್ನು ಜಾರಿಗೊಳಿಸಲು ಮಹಾರಾಷ್ಟ್ರದ ಡಿಜಿಪಿಗೆ ಆದೇಶವನ್ನು ಕಳುಹಿಸಲಾಗಿದೆ ಎಂದು ದಿ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ. ಮೂರು ವಾರಗಳ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಹಿಂತಿರುಗಿದ ನಂತರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ(Uddhav Thackeray) ಅವರು ಸಿಂಗ್ ಅವರ ಅಮಾನತು ನಿರ್ಧಾರ ಕೈಗೊಂಡಿದ್ದಾರೆ. ಆಂಟಿಲಿಯಾ (Antilia )ಹೊರಗೆ ಸ್ಫೋಟಕಗಳನ್ನು ವಶಪಡಿಸಿಕೊಂಡ ನಂತರ ಮತ್ತು ಥಾಣೆ ಉದ್ಯಮಿ ಮನ್ಸುಖ್ ಹಿರೇನ್ (Mansukh Hiren) ಹತ್ಯೆಯ ನಂತರ ಸಿಂಗ್ ಮುಂಬೈ ಮತ್ತು ಸ್ಯಾಟಲೈಟ್ ಪಟ್ಟಣಗಳಲ್ಲಿ ಎಫ್‌ಐಆರ್‌ಗಳನ್ನು ಎದುರಿಸುತ್ತಿದ್ದಾರೆ. ಪ್ರಕರಣದಲ್ಲಿ ಹಿರಿಯ ಇನ್ಸ್‌ಪೆಕ್ಟರ್ ಪ್ರದೀಪ್ ಶರ್ಮಾ ಮತ್ತು ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ (Sachin Waze )ಅವರನ್ನು ಬಂಧಿಸಲಾಗಿದ್ದು, ನಂತರ ಸರ್ಕಾರ ಮತ್ತು ಗೃಹ ಸಚಿವ ಅನಿಲ್ ದೇಶಮುಖ್ ಅವರು 100 ಕೋಟಿ ರೂಪಾಯಿ ವಸೂಲಿ ಮಾಡಲು ಕೇಳಿದ್ದಾರೆ ಎಂದು ಪರಮ್ ಬೀರ್ ಸಿಂಗ್ ಆರೋಪಿಸಿದ್ದಾರೆ. ಡಿಜಿಪಿ ಸಂಜಯ್ ಪಾಂಡೆ ಅವರು ಪರಮ್ ಬೀರ್ ಸಿಂಗ್ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್‌ಗಳಲ್ಲಿ ಭಾಗಿಯಾಗಿರುವ ಮತ್ತು ಹೆಸರಿಸಿರುವ ಎಲ್ಲರನ್ನು ಅಮಾನತುಗೊಳಿಸಲು ಪ್ರಸ್ತಾವನೆಯನ್ನು ಕಳುಹಿಸಿದ್ದರು. ಆದರೆ ನಿರ್ದಿಷ್ಟ ಪಾತ್ರಗಳನ್ನು ವ್ಯಾಖ್ಯಾನಿಸಲು ಬಯಸುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ಮನುಕುಮಾರ್ ಶ್ರೀವಾಸ್ತವ ಅದನ್ನು ಹಿಂದಕ್ಕೆ ಕಳುಹಿಸಿದ್ದಾರೆ.
ಇದಾದ ನಂತರ ಸಿಂಗ್ ಮತ್ತು ಡಿಸಿಪಿಯನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಲಾಯಿತು. ಇದನ್ನು ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಅವರು ಹಲವು ದಿನಗಳ ಹಿಂದೆ ಕ್ಲಿಯರ್ ಮಾಡಿದ್ದರು. ಆದರೆ ಮುಖ್ಯಮಂತ್ರಿ ಅಂತಿಮ ಒಪ್ಪಿಗೆಗಾಗಿ ಕಾಯುತ್ತಿದ್ದರು.
ಇದನ್ನೂ ಓದಿ: ಸುಲಿಗೆ ಪ್ರಕರಣದಲ್ಲಿ ಪರಮ್ ಬೀರ್ ಸಿಂಗ್ ವಿರುದ್ಧದ ಜಾಮೀನು ರಹಿತ ವಾರಂಟ್ ರದ್ದು ಮಾಡಿದ ಮ್ಯಾಜಿಸ್ಟ್ರೇಟ್ ಕೋರ್ಟ್
Published On - 5:27 pm, Thu, 2 December 21