AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಕರಾವಳಿಯಲ್ಲಿ ಹೆಚ್ಚಿನ ಮಳೆಯಾಗುತ್ತಿದೆ. ಜುಲೈ 15ರಂದು ರಾಗಿಹೊಸಹಳ್ಳಿ ಗುಡ್ಡ ಕುಸಿದು 9 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ವಿಷಯವನ್ನು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ.

ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತ ಪ್ರಸ್ತಾಪಿಸಿದ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ
ಹೆಚ್​ಡಿ ದೇವೇಗೌಡ
ನಯನಾ ರಾಜೀವ್
|

Updated on: Jul 25, 2024 | 1:22 PM

Share

ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ರಾಜ್ಯಸಭೆಯಲ್ಲಿ ಅಂಕೋಲಾ ಗುಡ್ಡ ಕುಸಿತದ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ದುರಂತ ಸಂಭವಿಸಿ ಆರು ದಿನಗಳು ಕಳೆದರೂ ರಾಜ್ಯ ಸರ್ಕಾರದಿಂದ ಯಾರೊಬ್ಬರೂ ಭೇಟಿ ನೀಡಿರಲಿಲ್ಲ. ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ನೀಡಿದ ಬಳಿಕವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ದೂರಿದ್ದಾರೆ.

ಇದು ಕರ್ನಾಟಕ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎಂಬುದಕ್ಕೆ ನಿದರ್ಶನ ಎಂದರು. ಕರ್ನಾಟಕ ಸರ್ಕಾರ ರಾಜ್ಯದ ಪರಿಸ್ಥಿತಿ ಬಗ್ಗೆ ನಿರಾಸಕ್ತಿ ತೋರುತ್ತಿದೆ. ಹೆಚ್​​ಡಿ ಕುಮಾರಸ್ವಾಮಿ ಸ್ಥಳ ಪರಿಶೀಲನೆಗೆ ಹೋಗುವವರೆಗೂ ರಾಜ್ಯಸ ರ್ಕಾರ ಏನು ಮಾಡುತ್ತಿತ್ತು ಎಂದು ಪ್ರಶ್ನಿಸಿದ್ದು ರಾಜ್ಯಸಭೆಯಲ್ಲಿ ಗದ್ದಲ ಸೃಷ್ಟಿಸಿತು.

ಗೌಡರ ಹೇಳಿಕೆಗೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಘಟನೆ ಸಂಭವಿಸಿ 9 ಜನರು ಪ್ರಾಣ ಕಳೆದುಕೊಂಡಿದ್ದರೂ ಆರು ದಿನಗಳ ಕಾಲ ಯಾವುದೇ ರಾಜ್ಯ ಸಚಿವರು ಸ್ಥಳಕ್ಕೆ ಭೇಟಿ ನೀಡಲಿಲ್ಲ. ಇಡೀ ಬೆಟ್ಟವೇ ಕೆಳಗೆ ಜಾರಿತ್ತು. ನಾನು ರಾಜಕೀಯದ ಬಗ್ಗೆ ಮಾತನಾಡಲು ಬಯಸುವುದಿಲ್ಲ ಆದರೆ ಕೇಂದ್ರ ಉಕ್ಕು ಸಚಿವರು ಭೇಟಿ ನೀಡಿದ ಬಳಿಕವಷ್ಟೇ ಅಗ್ನಿಶಾಮಕ ಹಾಗೂ ಮಿಲಿಟರಿ ತಂಡವನ್ನು ಕಳುಹಿಸಲಾಗಿದೆ ಎಂದರು.

ಮತ್ತಷ್ಟು ಓದಿ: ಶಿರೂರು ಗುಡ್ಡ ಕುಸಿತ ಪ್ರಕರಣ; ಎಂಟನೇ ದಿನ, 8ನೇ ಶವ ಪತ್ತೆ

ಜುಲೈ 16 ರಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಶಿರೂರು ಗ್ರಾಮದಲ್ಲಿ ಭಾರೀ ಭೂಕುಸಿತ ಸಂಭವಿಸಿದೆ. ಇದುವರೆಗೆ 9 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಕೇರಳದ ಲಾರಿ ಚಾಲಕ ಸೇರಿದಂತೆ ಮೂವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸ್ಥಳದಲ್ಲಿ ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

ರಾಗಿಹೊಸಹಳ್ಳಿ ಗುಡ್ಡಕುಸಿದು ರಾಷ್ಟ್ರೀಯ ಹೆದ್ದಾರಿ 766ಇ ಶಿರಸಿ-ಕುಮಟಾ ಸಂಪರ್ಕ ಕೂಡ ಕಡಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿತದಲ್ಲಿ ಸಿಲುಕಿರುವ ಲಾರಿ ಚಾಲಕ ಅರ್ಜುನನಿಗಾಗಿ ಹುಡುಕಾಟ ಮುಂದುವರೆದಿದೆ. ಭಾರತೀಯ ಸೇನೆ ರಕ್ಷಣಾ ಕಾರ್ಯಾಚರಣೆಗೆ ಕೈ ಜೋಡಿಸಿದೆ. ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ತಂಡಗಳು ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಶಿರೂರು ಗುಡ್ಡ ಕುಸಿತದ ಭೀಕರತೆಯ ಬಗ್ಗೆ ತಿಳಿದ ಪ್ರಧಾನ ಮಂತ್ರಿಗಳ ಕಾರ್ಯಾಲಯವು, ಈ ಪ್ರದೇಶದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಲು ಸೇನಾ ಪಡೆಯನ್ನು ಕಳುಹಿಸಿದೆ. ಈ ಪಡೆಯು ಭಾನುವಾರ ಮಧ್ಯಾಹ್ನ ಶಿರೂರಿಗೆ ತಲುಪಲಿದೆ. ಈ ಕುರಿತು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾಹಿತಿ ನೀಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಅಂಕೋಲಾ ತಾಲೂಕಿನ ಶಿರೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಕೇರಳದ ಲಾರಿ ಚಾಲಕ ಅರ್ಜುನ ಹುಡುಕಾಟದಲ್ಲಿ ಯಾವುದೇ ವಿಳಂಬವಾಗಿಲ್ಲ. ಕಾರ್ಯಾಚರಣೆಗೆ ಭಾರೀ ಮಳೆ ಸವಾಲಾಗಿದೆ. ಕೇರಳ ಸರ್ಕಾರ ನಮ್ಮ ಸಂಪರ್ಕದಲ್ಲಿದೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಕಾಂಗ್ರೆಸ್ ಸರ್ಕಾರ ಬಾಲ್ಯವಿವಾಹಗಳ ಮೇಲೆ ಕಡಿವಾಣ ಹಾಕುತ್ತಿದೆ: ಹೆಬ್ಬಾಳ್ಕರ್
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಬೀದಿ ನಾಯಿ ಕಾಟದ ಬಗ್ಗೆ ವಿಧಾನಸಭೆಯಲ್ಲಿ ಬಿಸಿಬಿಸಿ ಚರ್ಚೆ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಎಸ್ಐಟಿ ಆದಷ್ಟು ಬೇಗ ತನಿಖೆಯನ್ನು ಪೂರ್ತಿಗೊಳಿಸಬೇಕು: ವಿಜಯೇಂದ್ರ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಬಿಜೆಪಿ ತಂಡ: ವಿಜಯೇಂದ್ರ ಹೇಳಿದ್ದೇನು ನೋಡಿ
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
ವಾಲ್ಮೀಕಿ ಸಮುದಾಯದವರಿಂದ ತುಮಕೂರುನಲ್ಲಿ ಇಂದು ಬೃಹತ್ ರ‍್ಯಾಲಿ!
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ