ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಆರೋಗ್ಯ ಹೇಗಿದೆ? ಅಪ್ಡೇಟ್ಸ್ ಏನು?
ದೆಹಲಿ: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿನ್ನೆ ಮಧ್ಯರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಎದೆನೋವು ಕಾಣಸಿಕೊಂಡಿದೆ. 87 ವರ್ಷ ವಯಸ್ಸಿನ ಡಾ. ಮನಮೋಹನ್ ಸಿಂಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಡಾ ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ. ಇನ್ನು, ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ […]
ದೆಹಲಿ: ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿನ್ನೆ ಮಧ್ಯರಾತ್ರಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾನುವಾರ ರಾತ್ರಿ 8:45ರ ವೇಳೆಗೆ ಎದೆನೋವು ಕಾಣಸಿಕೊಂಡಿದೆ.
87 ವರ್ಷ ವಯಸ್ಸಿನ ಡಾ. ಮನಮೋಹನ್ ಸಿಂಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ. ಡಾ ನಿತೀಶ್ ನಾಯ್ಕ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೆಲ ಮೂಲಗಳಿಂದ ತಿಳಿದು ಬಂದಿದೆ.
ಇನ್ನು, ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ನ ಕೆಲ ನಾಯಕರು, ಮನಹೋಹನ್ ಸಿಂಗ್ ಅನಾರೋಗ್ಯದಿಂದ ಏಮ್ಸ್ಗೆ ದಾಖಲಾಗಿದ್ದಾರೆ ಎಂದು ಉನ್ನತ ಮೂಲಗಳು ಹೇಳುತ್ತಿವೆ. ಹಾಗಾಗಿ ಅವರ ಶೀಘ್ರ ಚೇತರಿಕೆ ಮತ್ತು ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುವುದಾಗಿ ಟ್ವೀಟ್ ಮಾಡಿದ್ದಾರೆ.
ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ: ಡಾ.ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ದೆಹಲಿ ಏಮ್ಸ್ ಆಸ್ಪತ್ರೆಯ ಮೂಲಗಳಿಂದ ಮಾಹಿತಿ ಸಿಕ್ಕಿದೆ. ಮಾಜಿ ಪ್ರಧಾನಿಗಳಿಗೆ ಮೀಸಲಾಗಿರುವ ವಿಶೇಷ ಕೊಠಡಿ ಸಂಖ್ಯೆ 4ರ ಏಮ್ಸ್ ಕಾರ್ಡಿಯೋ ಥೊರಾಸಿಕ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಹಿಂದೆ 2009 ರಲ್ಲಿಯೇ ಮನಮೋಹನ್ ಸಿಂಗ್ ಏಮ್ಸ್ ನಲ್ಲಿ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು, ಅದು ಸುಮಾರು 14 ಗಂಟೆಗಳ ಯಶಸ್ವಿ ಶಸ್ತ್ರಚಿಕಿತ್ಸೆಗೆಯಾಗಿತ್ತು.
Published On - 7:58 am, Mon, 11 May 20