Manmohan Singh: ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು

Manmohan Singh: ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನ್‌ಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಕೂಡಲೇ ಅವರು ದೆಹಲಿಯಲ್ಲಿರುವ ಏಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಆರೋಗ್ಯ ಸಮಸ್ಯೆಗಳನ್ನು ಎದುರಿಸಿದ್ದ 92 ವರ್ಷದ ಮನ್‌ಮೋಹನ್‌ ಸಿಂಗ್‌ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Manmohan Singh: ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಆರೋಗ್ಯದಲ್ಲಿ ಏರುಪೇರು: ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು
ಭಾರತೀಯ ಅರ್ಥ ವ್ಯವಸ್ಥೆಯ ದಿಕ್ಕನ್ನೇ ಬದಲಿಸಿದ ಧೀಮಂತ ನಾಯಕ ಎನಿಸಿಕೊಂಡಿದ್ದಾರೆ. ಇನ್ನು ತಮ್ಮ ಆಡಳಿತವಧಿಯಲ್ಲಿ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಈ ಸಮಯದಲ್ಲಿ ನೆನೆಯಲೇಕು.
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Dec 26, 2024 | 9:56 PM

ದೆಹಲಿ, ಡಿಸೆಂಬರ್​ 26: ಮಾಜಿ ಪ್ರಧಾನಿ ಮನಮೋಹನ್​ ಸಿಂಗ್ (Manmohan Singh) ಅವರ​ ಆರೋಗ್ಯದಲ್ಲಿ ಏರುಪೇರಾಗಿದ್ದು, ಗುರುವಾರ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಮನಮೋಹನ್​ ಸಿಂಗ್​ ಅವರನ್ನು ಆಸ್ಪತ್ರೆಯ ತುರ್ತು ವಿಭಾಗಕ್ಕೆ ದಾಖಲಿಸಿರುವುದಾಗಿ ಪಿಟಿಐ ವರದಿ ಮಾಡಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿರುವುದಕ್ಕೆ ನಿಖರ ತಿಳಿದುಬಂದಿಲ್ಲ. ಆದರೆ ಮೂಲಗಳ ಪ್ರಕಾರ ತೀವ್ರ ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗುತ್ತಿದೆ.

2004 ರಿಂದ 2014 ರವರೆಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿದ ಅವರು, ಈ ವರ್ಷದ ಆರಂಭದಲ್ಲಿ ರಾಜ್ಯಸಭೆಯಿಂದ ನಿವೃತ್ತರಾಗಿದ್ದರು. 33 ವರ್ಷಗಳ ನಂತರ ಮೇಲ್ಮನೆಯಲ್ಲಿ ತಮ್ಮ ರಾಜಕೀಯ ಇನ್ನಿಂಗ್ಸ್ ಅನ್ನು ಕೊನೆಗೊಳಿಸಿದ್ದರು. ಪಿವಿ ನರಸಿಂಹ ರಾವ್ ನೇತೃತ್ವದ ಸರ್ಕಾರದಲ್ಲಿ ಜೂನ್ 1991 ರಲ್ಲಿ ಹಣಕಾಸು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕು ತಿಂಗಳ ನಂತರ, 1991 ರಲ್ಲಿ ಭಾರತದ ಏಕೈಕ ಸಿಖ್ ಪ್ರಧಾನಿ ರಾಜ್ಯಸಭೆಗೆ ಪ್ರವೇಶಿಸಿದ್ದರು.

ಅವರು ಮೇಲ್ಮನೆಯಲ್ಲಿ ಐದು ಬಾರಿ ಅಸ್ಸಾಂ ಅನ್ನು ಪ್ರತಿನಿಧಿಸಿದರು. 2019 ರಲ್ಲಿ ರಾಜಸ್ಥಾನಕ್ಕೆ ಸ್ಥಳಾಂತರಗೊಂಡರು. ಬಿಜೆಪಿ ಸರ್ಕಾರದ ನೋಟು ಅಮಾನ್ಯೀಕರಣದ ವಿರುದ್ಧ ಧ್ವನಿ ಎತ್ತಿದ್ದ ಮನಮೋಹನ್​ ಸಿಂಗ್ ಅವರು ಅದು ಸಂಘಟಿತ ಲೂಟಿ ಮತ್ತು ಕಾನೂನುಬದ್ಧ ಲೂಟಿ ಎಂದು ಸಂಸತ್ತಿನಲ್ಲಿ ಗುಡುಗಿದ್ದರು. ಇದು ಅವರ ಕೊನೆಯ ಸಂಸತ್ತಾಗಿತ್ತು.

ಜನನ ಮತ್ತು ಶಿಕ್ಷಣ

1932 ಸೆಪ್ಟೆಂಬರ್ 26ರಂದು ಪಂಜಾಬ್‌ನಲ್ಲಿ ಮನಮೋಹನ್​ ಸಿಂಗ್ ಅವರು ಜನಿಸುತ್ತಾರೆ. ಪಂಜಾಬ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳನ್ನು ಕ್ರಮವಾಗಿ 1952 ಮತ್ತು 1954 ರಲ್ಲಿ ಪಡೆಯುತ್ತಾರೆ.

ಇದನ್ನೂ ಓದಿ: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಡಿ.ಎಂ.ಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸಲ್ಲ ಎಂದು ಅಣ್ಣಾಮಲೈ ಪ್ರತಿಜ್ಞೆ

ಡಾ. ಮನಮೋಹನ್ ಸಿಂಗ್ ಅವರು 1957ರಲ್ಲಿ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಿಂದ ತಮ್ಮ ಎಕನಾಮಿಕ್ ಟ್ರಿಪೋಸ್​​ನ್ನು ಪೂರ್ಣಗೊಳಿಸಿದರು. ಬಳಿಕ 1962 ರಲ್ಲಿ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದಿಂದ ಅರ್ಥಶಾಸ್ತ್ರದಲ್ಲಿ ಪಿಹೆಚ್​ಡಿ ಪಡೆದುಕೊಂಡರು. ಬಳಿಕ ರಾಜಕೀಯ ಪ್ರವೇಶ ಮಾಡಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:24 pm, Thu, 26 December 24

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ