ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: WFI ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೋಷಾರೋಪ

2023 ರಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳು ಎರಡು ಬಾರಿ ಬೀದಿಗಿಳಿದಿದ್ದರು. ದೆಹಲಿ ಪೊಲೀಸರು ಜೂನ್ 15 ರಂದು ಬ್ರಿಜ್ ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 (ಎ), 354 (ಡಿ) ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ.

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ: WFI ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೋಷಾರೋಪ
ಬ್ರಿಜ್ ಭೂಷಣ್ ಸಿಂಗ್
Follow us
ರಶ್ಮಿ ಕಲ್ಲಕಟ್ಟ
|

Updated on:May 10, 2024 | 6:34 PM

ದೆಹಲಿ ಮಾರ್ಚ್ 10: ಭಾರತೀಯ ಕುಸ್ತಿ ಒಕ್ಕೂಟದ (Wrestling Federation of India) ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ (Brij Bhushan Singh) ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದ್ದು, ಮಹಿಳಾ ಕುಸ್ತಿಪಟುಗಳ (wrestlers) ಮೇಲೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅವರ ವಿರುದ್ಧ ದೋಷಾರೋಪ ದಾಖಲಿಸಲು ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ. ಬಿಜೆಪಿ ನಾಯಕನ ವಿರುದ್ಧ ಮಹಿಳೆಯರ ಘನತೆಗೆ ಧಕ್ಕೆ ತಂದ ಆರೋಪವನ್ನೂ ಹೊರಿಸಲಾಗಿದೆ.

2023 ರಲ್ಲಿ ಬ್ರಿಜ್ ಭೂಷಣ್ ವಿರುದ್ಧ ಕುಸ್ತಿಪಟುಗಳು ಎರಡು ಬಾರಿ ಬೀದಿಗಿಳಿದಿದ್ದರು. ದೆಹಲಿ ಪೊಲೀಸರು ಜೂನ್ 15 ರಂದು ಬ್ರಿಜ್ ಭೂಷಣ್ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 354, 354 (ಎ), 354 (ಡಿ) ಅಡಿಯಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ. ಈ ಗಂಭೀರ ಆರೋಪಗಳ ನಡುವೆ, ಬ್ರಿಜ್ ಭೂಷಣ್ ಅವರು ತಮ್ಮ ಕೈಸರ್‌ಗಂಜ್ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆಯಲಿಲ್ಲ ಆದರೆ ಅವರ ಮಗ ಕರಣ್ ಭೂಷಣ್ ಸಿಂಗ್​​ಗೆ ಟಿಕೆಟ್ ನೀಡಲಾಗಿದೆ.

ಆರು ಕುಸ್ತಿಪಟುಗಳ ದೂರುಗಳ ಆಧಾರದ ಮೇಲೆ ದೆಹಲಿ ಪೊಲೀಸ್ ಚಾರ್ಜ್‌ಶೀಟ್‌ನಲ್ಲಿ ಬ್ರಿಜ್ ಭೂಷಣ್ “ಲೈಂಗಿಕ ಕಿರುಕುಳ, ಕಿರುಕುಳ ಮತ್ತು ಹಿಂಬಾಲಿಸಿದ ಅಪರಾಧಗಳಿಗಾಗಿ ಕಾನೂನು ಕ್ರಮ ಜರುಗಿಸಲು ಮತ್ತು ಶಿಕ್ಷೆಗೆ ಗುರಿಯಾಗುತ್ತಾರೆ” ಎಂದು ಹೇಳಿದೆ. ಈ ಪ್ರಕರಣದ ಸಾಕ್ಷಿಗಳು ಅಂದಿನ ಡಬ್ಲ್ಯುಎಫ್‌ಐ ಅಧ್ಯಕ್ಷರ “ದೈಹಿಕವಾಗಿ ಕೆಟ್ಟ ವರ್ತನೆ” ಮಾಡಿದ್ದನ್ನು ಸಹ ನೋಡಿದ್ದಾರೆ ಎಂದು ಉಲ್ಲೇಖಿಸಿದ್ದಾರೆ ಎಂದು ಆರೋಪಪಟ್ಟಿ ಹೇಳಿದೆ.

ಕುಸ್ತಿಪಟುಗಳ ವಿಷಯದಲ್ಲಿ, ಕುಸ್ತಿಪಟುಗಳ ದೂರಿನ ಆಧಾರದ ಮೇಲೆ ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್ಐಆರ್ ಗಳನ್ನು ದಾಖಲಿಸಲಾಗಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಒಂದು ಮತ್ತು ಅಪ್ರಾಪ್ತ ಕುಸ್ತಿಪಟುವಿನ ಈ ಪ್ರಕರಣದಲ್ಲಿ ರದ್ದತಿ ವರದಿಯನ್ನು ಸಲ್ಲಿಸಲಾಗಿದೆ.

ಇದನ್ನೂ ಓದಿ: ಕೆ ಕವಿತಾ ಆರೋಪಿ; ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಹೊಸ ಚಾರ್ಜ್ ಶೀಟ್ ಸಲ್ಲಿಸಿದ ಇಡಿ

ಕುಸ್ತಿಪಟುಗಳು ದಾಖಲಿಸಿರುವ ಎಫ್‌ಐಆರ್‌ನಲ್ಲಿ, ” ತನಿಖೆ ಪೂರ್ಣಗೊಂಡ ನಂತರ, ನಾವು ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿಯ ಸೆಕ್ಷನ್ 354, 354 ಎ, 354 ಡಿ ಅಡಿಯಲ್ಲಿ ಮತ್ತು ಆರೋಪಿ ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ವಿರುದ್ಧ ಐಪಿಸಿಯ ಸೆಕ್ಷನ್ 109, 354, 354 ಎ ಮತ್ತು 506 ರ ಅಡಿಯಲ್ಲಿ ಅಪರಾಧಗಳಿಗೆ ಚಾರ್ಜ್ ಶೀಟ್ ಸಲ್ಲಿಸುತ್ತಿದ್ದೇವೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:33 pm, Fri, 10 May 24