ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ

|

Updated on: Aug 31, 2020 | 6:07 PM

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ […]

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶ
Follow us on

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ವಿಧಿವಶರಾಗಿದ್ದಾರೆ. 84 ವರ್ಷದ ಪ್ರಣಬ್ ಮುಖರ್ಜಿ ಪಶ್ಚಿಮ ಬಂಗಾಳದ ಬಿರ್​ಬೂಮ್ ಜಿಲ್ಲೆಯ ಮಿರತಿಯಲ್ಲಿ ಜನಿಸಿದ್ದರು. ಕಿಂಕರ್ ಮುಖರ್ಜಿ ಹಾಗೂ ರಾಜಲಕ್ಷ್ಮೀ ದಂಪತಿಗೆ 1935ರ ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ದಾ ದೇಶದ 13ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು.

ಮಾಜಿ ರಾಷ್ಟ್ರಪತಿ ಪ್ರಣಬ್​ರಿಗೆ ಮೆದುಳಿನ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಜೊತೆಗೆ, ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಹಾಗಾಗಿ, ಪ್ರಣಬ್ ಮುಖರ್ಜಿ ವೆಂಟಿಲೇಟರ್ ಸಹಾಯದಿಂದ ಉಸಿರಾಡುತ್ತಿದ್ದರು ಎಂದು ತಿಳಿದುಬಂದಿದೆ. ಮಾಜಿ ರಾಷ್ಟ್ರಪತಿ ದೆಹಲಿಯಲ್ಲಿ ಸೇನೆಯ ಆರ್​ಆರ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ತಮ್ಮ ಶ್ವಾಸಕೋಶಗಳಲ್ಲಿ ತೀವ್ರ ಸೋಂಕು ಉಂಟಾದ ಪರಿಣಾಮ ಸೆಪ್ಟಿಕ್​ ಶಾಕ್​ಗೆ ಒಳಪಟ್ಟಿದ್ದರು ಎಂದು ತಿಳಿದುಬಂದಿದೆ.

ಭಾರತದ 13ನೇ ರಾಷ್ಟ್ರಪತಿಯಾಗಿದ್ದ ಪ್ರಣಬ್ ಮುಖರ್ಜಿ 2012ರ ಜು.25ರಿಂದ 2017ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಕಾಲೇಜು ಉಪನ್ಯಾಸಕರಾಗಿ ವೃತ್ತಿಜೀವನ ಆರಂಭಿಸಿದ್ದ ಪ್ರಣಬ್​ ನಂತರ ಪತ್ರಕರ್ತರಾಗಿ ಕೆಲಸ ಮಾಡಿದ್ದರು. 1957ರ ಜುಲೈ 13ರಂದು ಶುಭಾರನ್ನು ವರಿಸಿದ್ದ ಪ್ರಣಬ್ ಮುಖರ್ಜಿಗೆ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯಿದ್ದಾರೆ.

1969ರಲ್ಲಿ ಕಾಂಗ್ರೆಸ್​ನಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಜೊತೆಗೆ, 1975, 1981, 1993, 1999ರಲ್ಲಿ ರಾಜ್ಯಸಭೆಗೆ ಪುನಾರಾಯ್ಕೆಯಾಗಿದ್ದರು. 1982ರಿಂದ 1984ರವರೆಗೆ ಕೇಂದ್ರ ಹಣಕಾಸು ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದಲ್ಲದೆ, ರಕ್ಷಣಾ, ಹಣಕಾಸು, ಆಂತರಿಕಾ ಭದ್ರತಾ ಇಲಾಖೆ, ಸಾರಿಗೆ, ವಾಣಿಜ್ಯ ಮತ್ತು ಉದ್ದಿಮೆ ಸಚಿವರಾಗಿ ಸಹ ಕಾರ್ಯ ನಿರ್ವಹಿಸಿದ್ದರು.

2007ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ಪಡೆದಿದ್ದ ಪ್ರಣಬ್ 2019ರ ಜನವರಿಯಲ್ಲಿ ಭಾರತ ರತ್ನ ಪ್ರಶಸ್ತಿಗೂ ಭಾಜನರಾಗಿದ್ದರು.

Published On - 5:54 pm, Mon, 31 August 20