Vibhakar Shastri Resigns: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್‌ಗೆ ರಾಜೀನಾಮೆ

ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್​​​ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

Vibhakar Shastri Resigns: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಮೊಮ್ಮಗ ವಿಭಾಕರ್ ಶಾಸ್ತ್ರಿ ಕಾಂಗ್ರೆಸ್‌ಗೆ ರಾಜೀನಾಮೆ
Follow us
ಅಕ್ಷಯ್​ ಪಲ್ಲಮಜಲು​​
|

Updated on:Feb 14, 2024 | 2:00 PM

ದೆಹಲಿ, ಫೆ.14: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ( Lal Bahadur Shastri) ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ (Vibhakar Shastri ) ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.  ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, 2024ರ ಲೋಕಸಭಾ ಚುನಾವಣೆಯ ಮೊದಲು ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ವಿಭಾಕರ್ ಶಾಸ್ತ್ರಿ ಕಾಂಗ್ರೆಸ್​​​ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಿದ್ದಾರೆ. ಈ ಬಗ್ಗೆ ಎಕ್ಸ್​​ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ಯಾಗ್​​ ಮಾಡಿ ಟ್ವೀಟ್​​ ಮಾಡಿದ್ದಾರೆ. ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

ಕಾಂಗ್ರೆಸ್​​​ ಪಕ್ಷದ ಸಂಬಂಧ ಮುರಿದುಕೊಂಡ ನಂತರ ವಿಭಾಕರ್ ಶಾಸ್ತ್ರಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾನು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಸಭೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ

ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಮತ್ತು ಬಾಬಾ ಸಿದ್ದಿಕ್ ಅವರು ಕಾಂಗ್ರೆಸ್​​​ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದಿದ್ದಾರೆ. ಈ ಬೆನ್ನಲ್ಲೇ ವಿಭಾಕರ್ ಶಾಸ್ತ್ರಿ ಅವರು ಕೂಡ ಬಿಜೆಪಿಗೆ ಬಂದಿರುವುದು ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯನ್ನು ಸೃಷ್ಟಿಸಿದೆ. ಬಾಬಾ ಸಿದ್ದಿಕ್ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಅವರ ಬಣ ಸೇರಿಕೊಂಡಿದ್ದಾರೆ. ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ ಕಳೆದ ತಿಂಗಳು ಪಕ್ಷ ತೊರೆದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದರು.

ಬಿಜೆಪಿ ಜತೆ ಜಯಂತ್ ಚೌಧರಿ ಮೈತ್ರಿ

ಬಿಜೆಪಿ ಜತೆ ಆರ್​ಎಲ್​ಡಿ ಮೈತ್ರಿ ಅಂತಿಮಗೊಂಡಿದ್ದು, ಜಯಂತ್ ಚೌಧರಿಯವರ ಪಕ್ಷಕ್ಕೆ 2 ಲೋಕಸಭಾ ಸ್ಥಾನಗಳು ಪಕ್ಕಾ ಎಂದು ಹೇಳಲಾಗಿದೆ. ಬಿಹಾರದಲ್ಲಿ ನಿತೀಶ್​ ಕುಮಾರ್ ಇಂಡಿಯಾ ಮೈತ್ರಿ ತೊರೆದು ಎನ್​ಡಿಎಗೆ ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್​ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಜಯಂತ್ ಚೌಧರಿ ಕೂಡ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಊಹಾಪೋಹ ಈಗ ನಿಜವಾಗುತ್ತಿದೆ. ಜಯಂತ್ ಚೌಧರಿ 2 ಲೋಕಸಭಾ ಟಿಕೆಟ್ ಹಾಗೂ ಕೇಂದ್ರದಲ್ಲಿ ಸಚಿವ ಸ್ಥಾನದ ಒಪ್ಪಂದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:08 pm, Wed, 14 February 24

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್