ದೆಹಲಿ, ಫೆ.14: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ( Lal Bahadur Shastri) ಅವರ ಮೊಮ್ಮಗ ವಿಭಾಕರ್ ಶಾಸ್ತ್ರಿ (Vibhakar Shastri ) ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ. ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ವಿಭಾಕರ್ ಶಾಸ್ತ್ರಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದು, 2024ರ ಲೋಕಸಭಾ ಚುನಾವಣೆಯ ಮೊದಲು ಕಾಂಗ್ರೆಸ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ವಿಭಾಕರ್ ಶಾಸ್ತ್ರಿ ಕಾಂಗ್ರೆಸ್ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ನಾನು ಈ ಮೂಲಕ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಪಕ್ಷದ ಸಂಬಂಧ ಮುರಿದುಕೊಂಡ ನಂತರ ವಿಭಾಕರ್ ಶಾಸ್ತ್ರಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾನು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ‘ಜೈ ಜವಾನ್, ಜೈ ಕಿಸಾನ್’ ದೃಷ್ಟಿಕೋನವನ್ನು ಇನ್ನಷ್ಟು ಬಲಪಡಿಸುವ ಮೂಲಕ ದೇಶಕ್ಕೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ರಾಜ್ಯಸಭೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಿದ ಸೋನಿಯಾ ಗಾಂಧಿ
ಇನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಮತ್ತು ಬಾಬಾ ಸಿದ್ದಿಕ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ ಬಿಜೆಪಿಗೆ ಬಂದಿದ್ದಾರೆ. ಈ ಬೆನ್ನಲ್ಲೇ ವಿಭಾಕರ್ ಶಾಸ್ತ್ರಿ ಅವರು ಕೂಡ ಬಿಜೆಪಿಗೆ ಬಂದಿರುವುದು ದೇಶದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯನ್ನು ಸೃಷ್ಟಿಸಿದೆ. ಬಾಬಾ ಸಿದ್ದಿಕ್ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಜಿತ್ ಪವಾರ್ ಅವರ ಬಣ ಸೇರಿಕೊಂಡಿದ್ದಾರೆ. ಮತ್ತೊಬ್ಬ ಕಾಂಗ್ರೆಸ್ ಹಿರಿಯ ನಾಯಕ ಮಿಲಿಂದ್ ದಿಯೋರಾ ಕಳೆದ ತಿಂಗಳು ಪಕ್ಷ ತೊರೆದು ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸೇರಿದ್ದರು.
#WATCH | Vibhakar Shastri says, “…I think under the leadership of PM Narendra Modi, I will be able to serve the country by further strengthening Lal Bahadur Shastri’s vision of ‘Jai Jawan, Jai Kisan’…” https://t.co/6zSgwzSJhQ pic.twitter.com/nSdWwnHXIX
— ANI (@ANI) February 14, 2024
ಬಿಜೆಪಿ ಜತೆ ಆರ್ಎಲ್ಡಿ ಮೈತ್ರಿ ಅಂತಿಮಗೊಂಡಿದ್ದು, ಜಯಂತ್ ಚೌಧರಿಯವರ ಪಕ್ಷಕ್ಕೆ 2 ಲೋಕಸಭಾ ಸ್ಥಾನಗಳು ಪಕ್ಕಾ ಎಂದು ಹೇಳಲಾಗಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಇಂಡಿಯಾ ಮೈತ್ರಿ ತೊರೆದು ಎನ್ಡಿಎಗೆ ಸೇರಿದ್ದಾರೆ. ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಜಯಂತ್ ಚೌಧರಿ ಕೂಡ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲಿದ್ದಾರೆ ಎನ್ನುವ ಊಹಾಪೋಹ ಈಗ ನಿಜವಾಗುತ್ತಿದೆ. ಜಯಂತ್ ಚೌಧರಿ 2 ಲೋಕಸಭಾ ಟಿಕೆಟ್ ಹಾಗೂ ಕೇಂದ್ರದಲ್ಲಿ ಸಚಿವ ಸ್ಥಾನದ ಒಪ್ಪಂದಕ್ಕೆ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 1:08 pm, Wed, 14 February 24