Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ; ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧನ

ಕಳೆದ ತಿಂಗಳು 31 ವರ್ಷದ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಇಂದು ಬಂಧಿಸಿದೆ.

ಭ್ರಷ್ಟಾಚಾರ ಆರೋಪ; ಕೊಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಬಂಧನ
ಡಾ. ಸಂದೀಪ್ ಘೋಷ್
Follow us
ಸುಷ್ಮಾ ಚಕ್ರೆ
|

Updated on: Sep 02, 2024 | 9:37 PM

ಕೊಲ್ಕತ್ತಾ: ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನು ಸಿಬಿಐ ಇಂದು (ಸೆಪ್ಟೆಂಬರ್ 2) ಬಂಧಿಸಿದೆ. ಕೊಲ್ಕತ್ತಾ ಹೈಕೋರ್ಟ್‌ನ ಆದೇಶದ ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ಎರಡು ಸಮಾನಾಂತರ ತನಿಖೆಗಳನ್ನು ನಡೆಸುತ್ತಿದೆ. ಮೊದಲನೆಯದು ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮೇಲೆ ಮತ್ತು ಎರಡನೆಯದು ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಪಾದಿತ ಆರ್ಥಿಕ ಅಕ್ರಮಗಳ ಮೇಲೆ. ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ನಡೆದಿತ್ತು.

ಸಿಬಿಐ ಪ್ರಸ್ತುತ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸುತ್ತಿದೆ. ಈ ಅಪರಾಧಕ್ಕೆ ಸಂಬಂಧಿಸಿದಂತೆ ಸಂಜಯ್ ರಾಯ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂದೀಪ್ ಘೋಷ್ ಮತ್ತು ಈ ಪ್ರಕರಣದಲ್ಲಿ ಭಾಗಿಯಾಗಿರುವ ಇತರ ನಾಲ್ವರು ವೈದ್ಯರ ಪಾಲಿಗ್ರಾಫ್ ಪರೀಕ್ಷೆಯನ್ನೂ ಸಿಬಿಐ ನಡೆಸಿದೆ. ಸಾಮಾನ್ಯವಾಗಿ ಸುಳ್ಳು ಪತ್ತೆ ಪರೀಕ್ಷೆ ಎಂದು ಕರೆಯಲ್ಪಡುವ ಪಾಲಿಗ್ರಾಫ್ ಪರೀಕ್ಷೆಯು ತನಿಖೆಯ ಕುರಿತು ಹೆಚ್ಚಿನ ಒಳನೋಟಗಳನ್ನು ಒದಗಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Crime News: ಅಪ್ಪನ ರೋಗ ಗುಣಪಡಿಸುತ್ತೇನೆಂದು ಕರೆಸಿ ಸ್ಮಶಾನದಲ್ಲೇ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಮಂತ್ರವಾದಿ

ರಾಜ್ಯ ಆರೋಗ್ಯ ಇಲಾಖೆಯ ವಿಶೇಷ ಕಾರ್ಯದರ್ಶಿ ದೇಬಲ್ ಕುಮಾರ್ ಘೋಷ್ ಅವರ ದೂರಿನ ಆಧಾರದ ಮೇಲೆ ಸಿಬಿಐ ಘೋಷ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಹಕ್ಕು ಪಡೆಯದ ದೇಹಗಳ ಅಕ್ರಮ ಮಾರಾಟ, ಬಯೋಮೆಡಿಕಲ್ ತ್ಯಾಜ್ಯದ ಸಾಗಣೆ ಮತ್ತು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು ಲಂಚಕ್ಕಾಗಿ ವಿದ್ಯಾರ್ಥಿಗಳಿಗೆ ಒತ್ತಡ ಹೇರುವುದು ಮುಂತಾದ ಆರೋಪಗಳನ್ನು ಸಂದೀಪ್ ಘೋಷ್ ಎದುರಿಸುತ್ತಿದ್ದಾರೆ.

ಸಂದೀಪ್ ಘೋಷ್ ಅವರು ಫೆಬ್ರವರಿ 2021ರಿಂದ ಸೆಪ್ಟೆಂಬರ್ 2023ರವರೆಗೆ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದರು. ಅಕ್ಟೋಬರ್ 2023ರಲ್ಲಿ ವರ್ಗಾವಣೆಯಾಗಿದ್ದರೂ ಅವರು ಅನಿರೀಕ್ಷಿತವಾಗಿ ಒಂದು ತಿಂಗಳೊಳಗೆ ಆಸ್ಪತ್ರೆಯಲ್ಲಿ ತಮ್ಮ ಹುದ್ದೆಗೆ ಮತ್ತೆ ಮರಳಿದರು.

ಇದನ್ನೂ ಓದಿ: Shocking News: ಯುವಕನಿಂದ ಮೇಕೆ ಮರಿಯ ಮೇಲೆ ಅತ್ಯಾಚಾರ; ರಕ್ತಸ್ರಾವದಿಂದ ಒದ್ದಾಡಿದ ಪ್ರಾಣಿ

ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಟ್ರೈನಿ ವೈದ್ಯರನ್ನು ಬರ್ಬರವಾಗಿ ಅತ್ಯಾಚಾರ ಮತ್ತು ಕೊಲೆ ಮಾಡುವ ದಿನದವರೆಗೂ ಅವರು ಹುದ್ದೆಯಲ್ಲಿ ಮುಂದುವರಿದರು. ಆಕೆಯ ಅರೆ-ನಗ್ನ ದೇಹವು ಆಗಸ್ಟ್ 9ರಂದು ಪತ್ತೆಯಾಗಿದ್ದು, ಇದು ರಾಷ್ಟ್ರವ್ಯಾಪಿ ಪ್ರತಿಭಟನೆಗಳು ಮತ್ತು ಪಶ್ಚಿಮ ಬಂಗಾಳದಲ್ಲಿ ಸರಣಿ ಹಿಂಸಾಚಾರಕ್ಕೆ ಕಾರಣವಾಯಿತು.

ವೈದ್ಯಕೀಯ ಸಂಸ್ಥೆಯ ಶಿಸ್ತು ಸಮಿತಿಯು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯನ್ನು ಗಮನಿಸಿದ ನಂತರ ಭಾರತೀಯ ವೈದ್ಯಕೀಯ ಸಂಘವು ಡಾ. ಸಂದೀಪ್ ಘೋಷ್ ಅವರ ಸದಸ್ಯತ್ವವನ್ನು ಅಮಾನತುಗೊಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ