ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ನಿಷೇಧಿಸಿ; ಪುದುಚೇರಿ ಲೆ. ಗವರ್ನರ್​​ಗೆ ನಾರಾಯಣಸ್ವಾಮಿ ಒತ್ತಾಯ

V Narayanasamy ತಮಿಳುನಾಡು ಸರ್ಕಾರವು ಈಗಾಗಲೇ ವಿಗ್ರಹಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸುವುದನ್ನು ಮತ್ತು ಹಬ್ಬದ ಸಂದರ್ಭದಲ್ಲಿ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಪುದುಚೇರಿ ಸರ್ಕಾರವು ಇದನ್ನು ಅನುಕರಿಸಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಅನುಮತಿಸುವ ಕುರಿತು ತನ್ನ ಪ್ರಕಟಣೆಯನ್ನು ಮರುಪರಿಶೀಲಿಸಬೇಕು ಎಂದು ನಾರಾಯಣಸ್ವಾಮಿ ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ನಿಷೇಧಿಸಿ; ಪುದುಚೇರಿ ಲೆ. ಗವರ್ನರ್​​ಗೆ ನಾರಾಯಣಸ್ವಾಮಿ ಒತ್ತಾಯ
ವಿ.ನಾರಾಯಣಸ್ವಾಮಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Sep 06, 2021 | 12:41 PM

ಪುದುಚೇರಿ: ಗಣೇಶ ಚತುರ್ಥಿಯಂದು (Vinayaka Chaturthi)  ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಸ್ಥಾಪಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪುದುಚೇರಿಯ ಮಾಜಿ ಮುಖ್ಯಮಂತ್ರಿ ವಿ ನಾರಾಯಣಸ್ವಾಮಿ (Narayanasamy) ಅವರು ಶನಿವಾರ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರ್ಯರಾಜನ್ ಅವರಿಗೆ ಒತ್ತಾಯಿಸಿದ್ದಾರೆ. ವಿಡಿಯೊ ಸಂದೇಶದಲ್ಲಿ, ಜನರು ಸಾರ್ವಜನಿಕ ಸ್ಥಳಗಳಲ್ಲಿ ಸೇರಿಕೊಂಡರೆ ಕೊವಿಡ್ ಪ್ರಕರಣಗಳು ಮತ್ತೆ ಹೆಚ್ಚಾಗುತ್ತವೆ ಎಂದು ನಾರಾಯಣಸ್ವಾಮಿ ಹೇಳಿದರು.

“ತಮಿಳುನಾಡು ಸರ್ಕಾರವು ಈಗಾಗಲೇ ವಿಗ್ರಹಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಸ್ಥಾಪಿಸುವುದನ್ನು ಮತ್ತು ಹಬ್ಬದ ಸಂದರ್ಭದಲ್ಲಿ ಮೆರವಣಿಗೆಗಳನ್ನು ನಡೆಸುವುದನ್ನು ನಿಷೇಧಿಸಿದೆ. ಪುದುಚೇರಿ ಸರ್ಕಾರವು ಇದನ್ನು ಅನುಕರಿಸಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರು ಸಾರ್ವಜನಿಕ ಸ್ಥಳಗಳಲ್ಲಿ ವಿಗ್ರಹಗಳನ್ನು ಅನುಮತಿಸುವ ಕುರಿತು ತನ್ನ ಪ್ರಕಟಣೆಯನ್ನು ಮರುಪರಿಶೀಲಿಸಬೇಕು ಎಂದು ಅವರು ಹೇಳಿದರು. ಜನರು ಮನೆಯಲ್ಲಿ ಹಬ್ಬವನ್ನು ಆಚರಿಸಬೇಕು ಮತ್ತು ವಿಗ್ರಹಗಳನ್ನು ಹತ್ತಿರದ ಜಲಮೂಲಗಳಲ್ಲಿ ವಿಸರ್ಜಿಸಬೇಕು ಎಂದು ನಾರಾಯಣಸ್ವಾಮಿ ಹೇಳಿದರು.

ವಿಗ್ರಹಗಳ ಮೆರವಣಿಗೆಗಳನ್ನು ನಡೆಸುವುದರ ಮೇಲೆ ನಿಷೇಧವೂ ಇರಬೇಕು ಎಂದು ಅವರು ಹೇಳಿದರು. ಸಾಂಕ್ರಾಮಿಕ ರೋಗದ ಉಲ್ಬಣವನ್ನು ದೂರವಿಡುವ ಹೆಚ್ಚಿನ ಹಿತದೃಷ್ಟಿಯಿಂದ ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಅವರು ಮುಖ್ಯಮಂತ್ರಿ ಎನ್ ರಂಗಸ್ವಾಮಿಗೆ ಕರೆ ನೀಡಿದರು.

ಪುದುಚೇರಿಯಲ್ಲೀಗ ಹೊಸ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗಾಗಿ ಲೆಫ್ಟಿನೆಂಟ್ ಗವರ್ನರ್ ತನ್ನ ನಿಲುವನ್ನು ಮರುಪರಿಶೀಲಿಸಬೇಕು ಮತ್ತು ಜನರು ಮನೆಯಲ್ಲಿ ಹಬ್ಬವನ್ನು ಆಚರಿಸಬೇಕು ಎಂದು ನಾರಾಯಣಸ್ವಾಮಿ ಹೇಳಿದರು.

ಇದನ್ನೂ ಓದಿ: ಕಲ್ಲಿದ್ದಲು ಕಳ್ಳ ಸಾಗಣೆ ಹಗರಣ: ಇಡಿ ಮುಂದೆ ಹಾಜರಾದ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

(former Puducherry chief minister V Narayanasamy urges ban installation of Ganesha idols in public places during Vinayaka Chaturthi)

Published On - 12:39 pm, Mon, 6 September 21

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್