Amarinder Singh ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​​ರನ್ನು ಭೇಟಿ ಮಾಡಿದ ಅಮರಿಂದರ್ ಸಿಂಗ್

Ajit Doval: ಹಿರಿಯ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ ಮತ್ತು ಕಮಲ್ ನಾಥ್ ಅವರು ಸಿಂಗ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

Amarinder Singh ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್​​ರನ್ನು ಭೇಟಿ ಮಾಡಿದ ಅಮರಿಂದರ್ ಸಿಂಗ್
ಅಮರಿಂದರ್ ಸಿಂಗ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 30, 2021 | 12:16 PM

ದೆಹಲಿ: ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Amarinder Singh) ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಒಂದು ದಿನದ ನಂತರ ದೆಹಲಿಯಲ್ಲಿ ಇಂದು ಬೆಳಿಗ್ಗೆ (ಗುರುವಾರ) ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajit Doval) ಅವರನ್ನು ಭೇಟಿ ಮಾಡಿದ್ದಾರೆ. ಪಂಜಾಬ್ ಮುಖ್ಯಮಂತ್ರಿಯಾಗಿದ್ದ ಸಿಂಗ್ ಅವರು ಇತ್ತೀಚೆಗೆ ರಾಜಕೀಯ ಜಟಾಪಟಿ ನಡುವೆ ರಾಜೀನಾಮೆ ನೀಡಿದ್ದರು. ರಾಜೀನಾಮೆ ನೀಡಿದ ನಂತರ ಮೊದಲ ಬಾರಿ ದೆಹಲಿಗೆ ಬಂದಿರುವ ಸಿಂಗ್ ಬುಧವಾರ ಅಮಿತ್ ಶಾ ಅವರನ್ನು ಒಂದು ಗಂಟೆ ಕಾಲ ಭೇಟಿಯಾದರು. ಅಮಿತ್ ಶಾ ನಿವಾಸದಲ್ಲಿ ಅವರನ್ನು ಭೇಟಿ ಆದ ಸಿಂಗ್ ರೈತರ ಸಮಸ್ಯೆಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ. ಅಮರಿಂದರ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ವದಂತಿಗಳ ನಡುವೆಯೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಕಾಂಗ್ರೆಸ್ ಪಕ್ಷವು ಅಮರಿಂದರ್ ಸಿಂಗ್ ಅವರನ್ನು ಸಂಪರ್ಕಿಸಿದೆ. ಹಿರಿಯ ಕಾಂಗ್ರೆಸ್ ಮುಖಂಡರಾದ ಅಂಬಿಕಾ ಸೋನಿ ಮತ್ತು ಕಮಲ್ ನಾಥ್ ಅವರು ಸಿಂಗ್ ಅವರನ್ನು ಸಮಾಧಾನಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

79 ವರ್ಷದ ಹಿರಿಯ ನಾಯಕರಾಗಿರುವ ಸಿಂಗ್ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಗೊಂದಲ ಸೃಷ್ಟಿಸಿದ್ದಾರೆ. ರಾಜ್ಯ ಚುನಾವಣೆಗೆ ನಾಲ್ಕು ತಿಂಗಳಿರುವಾಗ, ಸೆಪ್ಟೆಂಬರ್ 18 ರಂದು ಪಂಜಾಬ್ ಮುಖ್ಯಮಂತ್ರಿಯಿಂದ ನಿರ್ಗಮಿಸಬೇಕಾಗಿ ಬಂದ ನಂತರ ಅವರು ತಮ್ಮ ಆಯ್ಕೆಗಳನ್ನು ಅನ್ವೇಷಿಸುತ್ತಿರುವುದನ್ನು ದೃಢೀಕರಿಸುವುದಾದಲೀ ಅಥವಾ ನಿರಾಕರಿಸುವುದಾಗಲೀ ಮಾಡಿಲ್ಲ.

ಮಂಗಳವಾರ ದೆಹಲಿಗೆ ಬಂದಿಳಿದಾಗ ಅವರು ಬಿಜೆಪಿ ನಾಯಕರನ್ನು ಭೇಟಿ ಮಾಡುವ ಯಾವುದೇ ಯೋಜನೆಯನ್ನು ನಿರಾಕರಿಸಿದರು. ಹೊಸ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿಗಾಗಿ ಕಪುರ್ತಲಾ ಹೌಸ್ ಅನ್ನು ಖಾಲಿ ಮಾಡಲು ಬಂದಿದ್ದೇನೆ ಎಂದು ಸಿಂಗ್ ದೆಹಲಿಯಲ್ಲಿ ಹೇಳಿದ್ದರು.

ಅಮಿತ್ ಶಾ ಅವರನ್ನು ಬುಧವಾರ ಸಂಜೆ ಭೇಟಿ ಮಾಡಿದ ಸಿಂಗ್ ಒಂದು ಗಂಟೆಕಾಲ ಸಭೆ ನಡೆಸಿದ್ದಾರೆ. ಕ್ಯಾಪ್ಟನ್ ಸಿಂಗ್ ಅವರು 11 ತಿಂಗಳ ರೈತರ ಪ್ರತಿಭಟನೆಯ ಬಗ್ಗೆ ಮತ್ತು ಕೇಂದ್ರದ ಕೃಷಿ ಕಾನೂನುಗಳನ್ನು ಚರ್ಚಿಸಿದ್ದಾರೆ ಮತ್ತು ಬಿಕ್ಕಟ್ಟನ್ನು ಪರಿಹರಿಸುವ ಮಾರ್ಗಗಳ ಬಗ್ಗೆ ಹೇಳಿದರು ಎಂದು ಎನ್ ಡಿ ಟಿವಿ ವರದಿ ಮಾಡಿದೆ,

ಸಿಂಗ್ ಅವರ ತಂಡವು ಶಾ ಜತೆಗಿನ ಭೇಟಿಯನ್ನು “ಸೌಜನ್ಯದ ಭೇಟಿ” ಎಂದು ಕರೆದಿದೆ ಮತ್ತು ಅವರು ಬಿಜೆಪಿ ಸೇರುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: Amarinder Singh ದೆಹಲಿಯಲ್ಲಿ ಅಮಿತ್​ ಶಾ ಭೇಟಿ ಮಾಡಿದ ಕ್ಯಾಪ್ಟನ್ ಅಮರಿಂದರ್​ ಸಿಂಗ್

ಇದನ್ನೂ ಓದಿ: ಭಾರತದ ಡಿಜಿಟಲ್​ ಆರೋಗ್ಯ ಮಿಷನ್​​ಗೆ ಬಿಲ್​ಗೇಟ್ಸ್​​ರಿಂದ ಶ್ಲಾಘನೆ​ ​; ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿ ಟ್ವೀಟ್​​

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ