AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕತಾರ್ ಮಾಜಿ ದೊರೆ ಶೇಖ್ ಹಮದ್ ಬಿನ್ ಖಲೀಫ ಅಲ್ ಥಾನಿ ನಿಧನ; ಗೌರವಾರ್ಥವಾಗಿ ಭಾರತದಿಂದ ಒಂದು ದಿನ ರಾಷ್ಟ್ರೀಯ ಶೋಕಾಚರಣೆ

India declares 1 day national mourning for former Qatar Emir Sheikh Hamad bin Khalifa Al-Thani: ಕತಾರ್ ಮಾಜಿ ಎಮಿರ್ ಶೇಖ್ ಹಮದ್ ಬಿನ್ ಖಲೀಫಾ ಜುಲೈ 12, ಭಾನುವಾರ ನಿಧನರಾಗಿದ್ದಾರೆ. ಅವರ ಸಾವಿಗೆ ಭಾರತ ಶೋಕ ವ್ಯಕ್ತಪಡಿಸಿದೆ. ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ. ಶೇಖ್ ಹಮದ್ ಅವರು 1995ರಿಂದ 2013ರವರೆಗೆ ಕತಾರ್ ದೇಶದ ದೊರೆಯಾಗಿ ಆಡಳಿತ ನೀಡಿದ್ದರು.

ಕತಾರ್ ಮಾಜಿ ದೊರೆ ಶೇಖ್ ಹಮದ್ ಬಿನ್ ಖಲೀಫ ಅಲ್ ಥಾನಿ ನಿಧನ; ಗೌರವಾರ್ಥವಾಗಿ ಭಾರತದಿಂದ ಒಂದು ದಿನ ರಾಷ್ಟ್ರೀಯ ಶೋಕಾಚರಣೆ
ಭಾರತದಿಂದ ರಾಷ್ಟ್ರೀಯ ಶೋಕಾಚರಣೆImage Credit source: PTI
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 12, 2026 | 10:00 PM

Share

ನವದೆಹಲಿ, ಜುಲೈ 12: ಕತಾರ್‌ನ ಮಾಜಿ ದೊರೆ (Emir) ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ (Sheikh Hamad bin Khalifa Al-Thani) ಅವರ ನಿಧನಕ್ಕೆ ಗೌರವಾರ್ಥವಾಗಿ ಭಾರತ ಸರ್ಕಾರವು ದೇಶಾದ್ಯಂತ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು (National Mourning) ಘೋಷಿಸಿದೆ. ಕತಾರ್ ದೇಶದ ಆಧುನಿಕ ಶಿಲ್ಪಿ ಎಂದೇ ಹೆಸರಾಗಿದ್ದ ಶೇಖ್ ಹಮದ್ (74 ವರ್ಷ) ಅವರು ಇವತ್ತು ಭಾನುವಾರ ಇಹಲೋಕ ತ್ಯಜಿಸಿದರು. ಅವರ ನಿಧನಕ್ಕೆ ಸಂತಾಪ ಸೂಚಿಸಲು ಭಾರತ ಸರ್ಕಾರವು ಈ ನಿರ್ಧಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ಜುಲೈ 13, ಸೋಮವಾರದಂದು ದೇಶದಾದ್ಯಂತ ಅಧಿಕೃತವಾಗಿ ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುತ್ತಿದೆ.

ರಾಷ್ಟ್ರೀಯ ಶೋಕಾಚರಣೆಯ ದಿನದಂದು ದೇಶಾದ್ಯಂತ ನಿಯಮಿತವಾಗಿ ರಾಷ್ಟ್ರಧ್ವಜವನ್ನು ಹಾರಿಸುವ ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ವಿದೇಶಗಳಲ್ಲಿರುವ ಭಾರತೀಯ ರಾಯಭಾರ ಕಚೇರಿಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ (Half-mast) ಹಾರಿಸಲಾಗುತ್ತದೆ. ಶೋಕಾಚರಣೆಯ ದಿನದಂದು ಸರ್ಕಾರಿ ಮಟ್ಟದಲ್ಲಿ ಯಾವುದೇ ರೀತಿಯ ಅಧಿಕೃತ ಮನೋರಂಜನಾ ಅಥವಾ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ.

ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ ಯಾರು?

ಇವರು 1995 ರಿಂದ 2013 ರವರೆಗೆ ಕತಾರ್ ದೇಶದ ದೊರೆಯಾಗಿ (Emir) ಆಡಳಿತ ನಡೆಸಿದ್ದರು. ಇವರ ಆಡಳಿತಾವಧಿಯಲ್ಲಿ ಕತಾರ್ ದೇಶವು ಜಾಗತಿಕ ಮಟ್ಟದಲ್ಲಿ ಆರ್ಥಿಕವಾಗಿ ಮತ್ತು ರಾಜತಾಂತ್ರಿಕವಾಗಿ ಭಾರಿ ಬೆಳವಣಿಗೆಯನ್ನು ಕಂಡಿತು. ವಿಶೇಷವಾಗಿ ನೈಸರ್ಗಿಕ ಅನಿಲ (LNG) ಉದ್ಯಮದಲ್ಲಿ ಕತಾರ್ ಜಗತ್ತಿನ ಶ್ರೀಮಂತ ರಾಷ್ಟ್ರಗಳಲ್ಲಿ ಒಂದಾಗಲು ಇವರ ಕೊಡುಗೆ ಅಪಾರವಾಗಿತ್ತು. 2013 ರಲ್ಲಿ ಇವರು ತಮ್ಮ ಮಗ ಹಾಗೂ ಪ್ರಸ್ತುತ ದೊರೆಯಾಗಿರುವ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದರು.

ಇದನ್ನೂ ಓದಿ: ನಿನ್ನೆ ಕೆಂಪು ಕೋಟೆ, ಇವತ್ತು ತಾಜ್ ಹೋಟೆಲ್; ಎರಡು ದಿನದಲ್ಲಿ ಎರಡು ಹುಸಿ ಬಾಂಬ್ ಬೆದರಿಕೆ

ಭಾರತ ಮತ್ತು ಕತಾರ್ ಬಾಂಧವ್ಯ

ಭಾರತ ಮತ್ತು ಕತಾರ್ ದೇಶಗಳ ನಡುವೆ ಐತಿಹಾಸಿಕ ಹಾಗೂ ಆಪ್ತ ರಾಜತಾಂತ್ರಿಕ ಬಾಂಧವ್ಯವಿದೆ. ಭಾರತಕ್ಕೆ ಅತಿ ಹೆಚ್ಚು ನೈಸರ್ಗಿಕ ಅನಿಲ ಪೂರೈಸುವ ದೇಶಗಳಲ್ಲಿ ಕತಾರ್ ಪ್ರಮುಖವಾಗಿದೆ. ಅಷ್ಟೇ ಅಲ್ಲದೆ, ಲಕ್ಷಾಂತರ ಭಾರತೀಯರು ಕತಾರ್‌ನಲ್ಲಿ ನೆಲೆಸಿದ್ದು, ಅಲ್ಲಿನ ಆರ್ಥಿಕತೆಗೆ ಕೊಡುಗೆ ನೀಡುತ್ತಿದ್ದಾರೆ. ಈ ದ್ವಿಪಕ್ಷೀಯ ಸ್ನೇಹ ಮತ್ತು ಗೌರವದ ಸಂಕೇತವಾಗಿ ಭಾರತ ಸರ್ಕಾರವು ಈ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ