ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅರುಣ್ ಮಿಶ್ರಾ ಅಧಿಕಾರ ಸ್ವೀಕಾರ

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಅಧ್ಯಕ್ಷರಾಗಿ ನ್ಯಾಯಮೂರ್ತಿ ಅರುಣ್ ಮಿಶ್ರಾ ಅಧಿಕಾರ ಸ್ವೀಕಾರ
ಅರುಣ್ ಮಿಶ್ರಾ

Justice Arun Kumar Mishra: ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ನ್ಯಾಯಮೂರ್ತಿ ಮಿಶ್ರಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾಗಿದ್ದರು.

TV9kannada Web Team

| Edited By: Rashmi Kallakatta

Jun 02, 2021 | 4:42 PM

ದೆಹಲಿ: ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಅರುಣ್ ಕುಮಾರ್ ಮಿಶ್ರಾ ಅವರು ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ನ್ಯಾಯಮೂರ್ತಿ ಮಿಶ್ರಾ ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸುಪ್ರೀಂ ಕೋರ್ಟ್‌ನಿಂದ ನಿವೃತ್ತರಾಗಿದ್ದರು. ಈ ಹಿಂದೆ, ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಮಹೇಶ್ ಮಿತ್ತಲ್ ಕುಮಾರ್ ಮತ್ತು ಗುಪ್ತಚರ ಇಲಾಖೆಯ ಮಾಜಿ ನಿರ್ದೇಶಕ ರಾಜೀವ್ ಜೈನ್ ಅವರನ್ನು ಎನ್‌ಎಚ್‌ಆರ್‌ಸಿ ಸದಸ್ಯರ ಸಮಿತಿ ಶಿಫಾರಸು ಮಾಡಿದೆ ಎಂದು ಸರ್ಕಾರಿ ಮೂಲಗಳನ್ನು ಉಲ್ಲೇಖಿಸಿ ದಿ ಹಿಂದೂ ವರದಿ ಮಾಡಿದೆ.

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾಯಮೂರ್ತಿ ಹೆಚ್. ಎಲ್. ದತ್ತು ಅವರು 2020 ರ ಡಿಸೆಂಬರ್‌ನಲ್ಲಿ ತಮ್ಮ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದಾಗಿನಿಂದ ಎನ್‌ಎಚ್‌ಆರ್‌ಸಿ ಮುಖ್ಯಸ್ಥರ ಹುದ್ದೆ ಖಾಲಿ ಇತ್ತು.

ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಹೊಸ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಒಬ್ಬ ಸಮಿತಿ ಸದಸ್ಯರೂ ಸೇರ್ಪಡೆಯಾಗಿದ್ದಾರೆ ಎಂದು ಪಿಟಿಐ ಮೂಲಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.

ನ್ಯಾಯಮೂರ್ತಿ ಮಿಶ್ರಾ ಬಗ್ಗೆ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು 1978 ರಲ್ಲಿ ವಕೀಲರಾಗಿ ಸೇರಿಕೊಂಡರು ಮತ್ತು 1998-99ರಲ್ಲಿ ಬಾರ್ ಕೌನ್ಸಿಲ್ ಆಫ್ ಇಂಡಿಯಾದ ಕಿರಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಅವರು ಅಕ್ಟೋಬರ್ 1999 ರಲ್ಲಿ ಮಧ್ಯಪ್ರದೇಶ ಹೈಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡರು. ಅವರು ಜುಲೈ 7, 2014 ರಂದು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರಾಗುವ ಮುನ್ನ ರಾಜಸ್ಥಾನ ಹೈಕೋರ್ಟ್ ಮತ್ತು ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದರು.

ಇದನ್ನೂ ಓದಿ: Explainer | ಸ್ವಾಭಿಮಾನದ ಬಾಳ್ವೆಯ ತಳಹದಿ ಮಾನವ ಹಕ್ಕುಗಳು

(Former Supreme Court judge, Justice Arun Kumar Mishra takes Over As NHRC Chairman)

Follow us on

Related Stories

Most Read Stories

Click on your DTH Provider to Add TV9 Kannada