AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ

ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Suresh Kalmadi Death: ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ ನಿಧನ
ಸುರೇಶ್ ಕಲ್ಮಾಡಿ
ನಯನಾ ರಾಜೀವ್
|

Updated on:Jan 06, 2026 | 8:45 AM

Share

ನವದೆಹಲಿ, ಜನವರಿ 06: ಕೇಂದ್ರದ ಮಾಜಿಸ ಚಿವ, ಕಾಂಗ್ರೆಸ್​​ನ ಹಿರಿಯ ನಾಯಕ ಸುರೇಶ್ ಕಲ್ಮಾಡಿ(Suresh Kalmadi) ನಿಧನರಾಗಿದ್ದಾರೆ. ಸುರೇಶ್ ಕಲ್ಮಾಡಿ ದೀರ್ಘಕಾಲದ ಅನಾರೋಗ್ಯದಿಂದ ಮಂಗಳವಾರ ಪುಣೆಯ ದೀನನಾಥ್ ಮಂಗೇಶ್ಕರ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಪುಣೆಯ ಎರಾಂಡ್‌ವಾನೆಯಲ್ಲಿರುವ ಕಲ್ಮಾಡಿ ಹೌಸ್‌ನಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಇರಿಸಲಾಗುವುದು. ಮಧ್ಯಾಹ್ನ 3.30 ಕ್ಕೆ ವೈಕುಂಠ ಸ್ಮಶಾನಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಅವರು ಭಾರತೀಯ ಒಲಿಂಪಿಕ್ ಅಸೋಸಿಯೇಷನ್‌ನ ಮಾಜಿ ಅಧ್ಯಕ್ಷರಾಗಿದ್ದರು.ಕಳೆದ ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಸಕ್ರಿಯ ರಾಜಕೀಯದಿಂದ ಹಿಂದೆ ಸರಿದಿದ್ದರು. ಸುರೇಶ್ ಕಲ್ಮಾಡಿ ಮೇ 1, 1944 ರಂದು ಜನಿಸಿದ್ದರು.ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಅವರು ಆರು ವರ್ಷಗಳಿಗೂ ಹೆಚ್ಚು ಕಾಲ ಭಾರತೀಯ ವಾಯುಪಡೆಯಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಿದ್ದರು.

ವಾಯುಪಡೆಯಿಂದ ನಿವೃತ್ತರಾದ ನಂತರ, ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದೊಂದಿಗೆ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಅವರು ಪುಣೆಯಿಂದ ದೀರ್ಘಕಾಲ ಸಂಸತ್ ಸದಸ್ಯರಾಗಿದ್ದರು ಮತ್ತು ಪಿ.ವಿ. ನರಸಿಂಹರಾವ್ ಸರ್ಕಾರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಅವರು ರೈಲ್ವೆ ಬಜೆಟ್ ಮಂಡಿಸಿದ ಏಕೈಕ ರಾಜ್ಯ ಸಚಿವರಾಗಿದ್ದರು.

ಹಿರಿಯ ಕಾಂಗ್ರೆಸ್ ನಾಯಕ ಸುರೇಶ್ ಕಲ್ಮಾಡಿ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ವ್ಯಕ್ತಿ ಎಂದು ಪರಿಗಣಿಸಲಾಗಿತ್ತು, ಹೈಕಮಾಂಡ್ ಜೊತೆ ಉತ್ತಮ ಸಂಬಂಧ ಹೊಂದಿದ್ದರು. ಅವರು ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು ಮತ್ತು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷರೂ ಆಗಿದ್ದರು.

2010 ರ ಕಾಮನ್‌ವೆಲ್ತ್ ಕ್ರೀಡಾಕೂಟದ ಸಂದರ್ಭದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದಲ್ಲಿ ಐಒಎಯಲ್ಲಿ ಅವರನ್ನು ಪ್ರಶ್ನಿಸಲಾಗಿತ್ತು ಮತ್ತು ಹಣ ದುರುಪಯೋಗದ ಆರೋಪದ ಮೇಲೆ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಅವರ ಮೇಲೆ ಆರೋಪ ಹೊರಿಸಲಾಯಿತು. ಅವರನ್ನು ಏಪ್ರಿಲ್ 2011 ರಲ್ಲಿ ಬಂಧಿಸಲಾಯಿತು, ನಂತರ ಕಾಂಗ್ರೆಸ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:35 am, Tue, 6 January 26