ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕುಸಿದುಬಿದ್ದ ಜಗದೀಪ್ ಧನ್ಕರ್: ಏಮ್ಸ್​​ಗೆ ಮಾಜಿ ಉಪರಾಷ್ಟ್ರಪತಿ ದಾಖಲು

ಬೆಳಗಿನ ವಾಯುವಿಹಾರದ ವೇಳೆ ಕುಸಿದುಬಿದ್ದ ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ನವದೆಹಲಿಯ ಏಮ್ಸ್ (AIIMS) ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಕೇಂದ್ರಕ್ಕೆ ದಾಖಲಿಸಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. sದ್ಯ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಈವರೆಗೂ ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ.

ವಾಯುವಿಹಾರಕ್ಕೆ ತೆರಳಿದ್ದ ವೇಳೆ ಕುಸಿದುಬಿದ್ದ ಜಗದೀಪ್ ಧನ್ಕರ್: ಏಮ್ಸ್​​ಗೆ ಮಾಜಿ ಉಪರಾಷ್ಟ್ರಪತಿ ದಾಖಲು
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ (ಫೈಲ್​​ ಚಿತ್ರ)
Image Credit source: PTI

Updated on: Nov 11, 2026 | 6:39 PM

ನವದೆಹಲಿ, ನವೆಂಬರ್​​ 11:  ವಾಯುವಿಹಾರಕ್ಕೆ ತೆರಳಿದ್ದ ಭಾರತದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಕುಸಿದು ಬಿದ್ದಿರುವ ಘಟನೆ ಇಂದು (ನವೆಂಬರ್​​ 11) ನಡೆದಿದೆ. ಕೂಡಲೇ ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 75 ವರ್ಷದ ಧನ್ಕರ್ ಅವರು ಕುಸಿದು ಬಿದ್ದ ತಕ್ಷಣ ಅವರ ಭದ್ರತಾ ಸಿಬ್ಬಂದಿ ಪೊಲೀಸ್ ಕಂಟ್ರೋಲ್ ರೂಂ (PCR) ವಾಹನದಲ್ಲಿ ಅವರನ್ನು ಮನೆಗೆ ಕರೆದೊಯ್ದಿದ್ದರು. ಬಳಿಕ ILBS ವೈದ್ಯಕೀಯ ತಂಡ ಹಾಗೂ ಏಮ್ಸ್ ವೈದ್ಯರು ಅವರಿಗೆ ಚಿಕಿತ್ಸೆ ನೀಡಿ ವೈದ್ಯಕೀಯ ನೆರವು ಒದಗಿಸಿದರು. ಆದರೆ, ಅವರ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಆಂಬ್ಯುಲೆನ್ಸ್ ಮೂಲಕ ಏಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಕಾರ್ಡಿಯೋ-ನ್ಯೂರೋ ಕೇಂದ್ರದಲ್ಲಿ ಚಿಕಿತ್ಸೆ

ಧನ್ಕರ್ ಅವರನ್ನು ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಕೇಂದ್ರಕ್ಕೆ ದಾಖಲಿಸಲಾಗಿದ್ದು, ಹೃದ್ರೋಗ ವಿಭಾಗದ ವೈದ್ಯರು ಅವರ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಯಲ್ಲಿ ತೊಡಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಈವರೆಗೂ ಏಮ್ಸ್ ಆಸ್ಪತ್ರೆಯ ಅಧಿಕಾರಿಗಳು ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಧನ್ಕರ್ ಅವರಿಗೆ ಈ ರೀತಿ ಆರೋಗ್ಯ ಸಮಸ್ಯೆ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. 2025ರ ಮಾರ್ಚ್‌ನಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಏಮ್ಸ್‌ನ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಬಳಿಕ ಅವರಿಗೆ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.

ಇದನ್ನೂ ಓದಿ: ದೆಹಲಿಯ ಗಾಳಿಯಲ್ಲಿ ಪಟಾಕಿ ವಿಷ: ಸಿಡಿಮದ್ದುಗಳದ್ದೇ ಮಾಲಿನ್ಯದ ಶೇ. 80ಕ್ಕೂ ಹೆಚ್ಚು ಪಾಲು 

2025ರ ಜೂನ್‌ನಲ್ಲಿ ನೈನಿತಾಲ್‌ನ ಕುಮಾವೂನ್ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮದ ವೇಳೆ ಕೂಡ ಅವರು ಕುಸಿದು ಬಿದ್ದಿದ್ದರು. ಈ ವರ್ಷದ ಜನವರಿಯಲ್ಲಿ ಶೌಚಾಲಯಕ್ಕೆ ತೆರಳುತ್ತಿದ್ದ ವೇಳೆ ತಮ್ಮ ನಿವಾಸದಲ್ಲೇ ಎರಡು ಬಾರಿ ಪ್ರಜ್ಞೆ ಕಳೆದುಕೊಂಡಿದ್ದರು ಎಂದು ವರದಿಯಾಗಿತ್ತು. ಜಗದೀಪ್ ಧನ್ಕರ್ ಅವರು ಆಗಸ್ಟ್ 2022ರಿಂದ ಜುಲೈ 21, 2025ರವರೆಗೆ ದೇಶದ 14ನೇ ಉಪರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. 2025ರ ಜುಲೈ 21ರಂದು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
Loading...
Unable to load recommendations.
Follow Us