AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಚಿಂತಾಜನಕ

Buddhadeb Bhattacharya: ಪಶ್ಚಿಮ ಬಂಗಾಳದಲ್ಲಿ 2000 ರಿಂದ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಬುದ್ಧದೇಬ್ ಭಟ್ಟಾಚಾರ್ಯ ಅವರು ಕೆಲವು ಸಮಯದಿಂದ COPD (chronic obstructive pulmonary disease) ಮತ್ತು ಇತರ ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಚಿಂತಾಜನಕ
ಬುದ್ಧದೇವ್ ಭಟ್ಟಾಚಾರ್ಯ
ರಶ್ಮಿ ಕಲ್ಲಕಟ್ಟ
|

Updated on: Jul 29, 2023 | 8:40 PM

Share

ಕೋಲ್ಕತ್ತಾ ಜುಲೈ 29: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharya )ಅವರನ್ನು ಶನಿವಾರ ಮಧ್ಯಾಹ್ನ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುದ್ಧದೇಬ್ ಭಟ್ಟಾಚಾರ್ಯ (79) ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಯೂನಿಟ್‌ನಲ್ಲಿ ಮೆಕ್ಯಾನಿಕಲ್ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ. ಅಸ್ವಸ್ಥರಾದ ಭಟ್ಟಾಚಾರ್ಯ ಅವರನ್ನು ಪಾಮ್ ಅವೆನ್ಯೂ ನಿವಾಸದಿಂದ ಹಸಿರು ಕಾರಿಡಾರ್ ಮೂಲಕ ಆಸ್ಪತ್ರೆಗೆ ಕರೆತರಲಾಗಿತ್ತು.

2000 ರಿಂದ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಬುದ್ಧದೇಬ್ ಭಟ್ಟಾಚಾರ್ಯ ಅವರು ಕೆಲವು ಸಮಯದಿಂದ COPD (chronic obstructive pulmonary disease) ಮತ್ತು ಇತರ ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಅವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವನನ್ನು ಪರೀಕ್ಷಿಸುತ್ತಿದ್ದೇವೆ. ಅವರ ಆಕ್ಸಿಜನ್ ಸ್ಯಾಚುರೇಷನ್ ಮಧ್ಯಾಹ್ನ 70 ಪ್ರತಿಶತಕ್ಕೆ ಹದಗೆಟ್ಟಿತು. ಅವರು ಪ್ರಜ್ಞಾಹೀನರಾದಾಗ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದರು.

ಇದನ್ನೂ ಓದಿ: Viral: ಬಾರ್ಬಿ: ಗುಲಾಬಿ ಜ್ವರ ಮೋದಿ, ಸೋನಿಯಾ, ರಾಹುಲ್, ಲಾಲೂ ಇನ್ನ್ಯಾರಿಗೆಲ್ಲ?

ಅವರ ಆರೋಗ್ಯದ ಮೇಲೆ ನಿಗಾ ಇಡಲು ಹೃದ್ರೋಗ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ಹಿರಿಯ ವೈದ್ಯರ ತಂಡವನ್ನು ರಚಿಸಲಾಗಿದೆ. ಅವರ ಪತ್ನಿ ಮೀರಾ ಭಟ್ಟಾಚಾರ್ಯ ಮತ್ತು ಪುತ್ರಿ ಸುಚೇತನಾ ಭಟ್ಟಾಚಾರ್ಯ ಇಬ್ಬರೂ ಆಸ್ಪತ್ರೆಯಲ್ಲಿದ್ದಾರೆ. ಬುದ್ಧದೇವ್ ಭಟ್ಟಾಚಾರ್ಯ ಅವರ ಆರೋಗ್ಯದ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕ ಜೀವನದಿಂದ ದೂರವಿದ್ದರು. 2015ರಲ್ಲಿ ಸಿಪಿಐ(ಎಂ)ನ ಪೊಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿಯಿಂದ ಕೆಳಗಿಳಿದಿದ್ದ ಅವರು 2018ರಲ್ಲಿ ರಾಜ್ಯ ಕಾರ್ಯದರ್ಶಿ ಸದಸ್ಯತ್ವವನ್ನು ತ್ಯಜಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ