ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಚಿಂತಾಜನಕ

Buddhadeb Bhattacharya: ಪಶ್ಚಿಮ ಬಂಗಾಳದಲ್ಲಿ 2000 ರಿಂದ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಬುದ್ಧದೇಬ್ ಭಟ್ಟಾಚಾರ್ಯ ಅವರು ಕೆಲವು ಸಮಯದಿಂದ COPD (chronic obstructive pulmonary disease) ಮತ್ತು ಇತರ ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿತಿ ಚಿಂತಾಜನಕ
ಬುದ್ಧದೇವ್ ಭಟ್ಟಾಚಾರ್ಯ
ರಶ್ಮಿ ಕಲ್ಲಕಟ್ಟ

Updated on: Jul 29, 2023 | 8:40 PM

ಕೋಲ್ಕತ್ತಾ ಜುಲೈ 29: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಪಶ್ಚಿಮ ಬಂಗಾಳದ (West Bengal) ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (Buddhadeb Bhattacharya )ಅವರನ್ನು ಶನಿವಾರ ಮಧ್ಯಾಹ್ನ ಕೋಲ್ಕತ್ತಾದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬುದ್ಧದೇಬ್ ಭಟ್ಟಾಚಾರ್ಯ (79) ಅವರನ್ನು ತಕ್ಷಣವೇ ಖಾಸಗಿ ಆಸ್ಪತ್ರೆಯ ಕ್ರಿಟಿಕಲ್ ಕೇರ್ ಯೂನಿಟ್‌ನಲ್ಲಿ ಮೆಕ್ಯಾನಿಕಲ್ ವೆಂಟಿಲೇಟರ್ ಬೆಂಬಲದಲ್ಲಿ ಇರಿಸಲಾಗಿದೆ. ಅಸ್ವಸ್ಥರಾದ ಭಟ್ಟಾಚಾರ್ಯ ಅವರನ್ನು ಪಾಮ್ ಅವೆನ್ಯೂ ನಿವಾಸದಿಂದ ಹಸಿರು ಕಾರಿಡಾರ್ ಮೂಲಕ ಆಸ್ಪತ್ರೆಗೆ ಕರೆತರಲಾಗಿತ್ತು.

2000 ರಿಂದ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಬುದ್ಧದೇಬ್ ಭಟ್ಟಾಚಾರ್ಯ ಅವರು ಕೆಲವು ಸಮಯದಿಂದ COPD (chronic obstructive pulmonary disease) ಮತ್ತು ಇತರ ವೃದ್ಧಾಪ್ಯ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

ಅವರ ಸ್ಥಿತಿ ಚಿಂತಾಜನಕವಾಗಿದೆ. ನಾವು ಅವನನ್ನು ಪರೀಕ್ಷಿಸುತ್ತಿದ್ದೇವೆ. ಅವರ ಆಕ್ಸಿಜನ್ ಸ್ಯಾಚುರೇಷನ್ ಮಧ್ಯಾಹ್ನ 70 ಪ್ರತಿಶತಕ್ಕೆ ಹದಗೆಟ್ಟಿತು. ಅವರು ಪ್ರಜ್ಞಾಹೀನರಾದಾಗ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿ ಪಿಟಿಐಗೆ ತಿಳಿಸಿದರು.

ಇದನ್ನೂ ಓದಿ: Viral: ಬಾರ್ಬಿ: ಗುಲಾಬಿ ಜ್ವರ ಮೋದಿ, ಸೋನಿಯಾ, ರಾಹುಲ್, ಲಾಲೂ ಇನ್ನ್ಯಾರಿಗೆಲ್ಲ?

ಅವರ ಆರೋಗ್ಯದ ಮೇಲೆ ನಿಗಾ ಇಡಲು ಹೃದ್ರೋಗ ತಜ್ಞರು ಮತ್ತು ಶ್ವಾಸಕೋಶ ತಜ್ಞರು ಸೇರಿದಂತೆ ಹಿರಿಯ ವೈದ್ಯರ ತಂಡವನ್ನು ರಚಿಸಲಾಗಿದೆ. ಅವರ ಪತ್ನಿ ಮೀರಾ ಭಟ್ಟಾಚಾರ್ಯ ಮತ್ತು ಪುತ್ರಿ ಸುಚೇತನಾ ಭಟ್ಟಾಚಾರ್ಯ ಇಬ್ಬರೂ ಆಸ್ಪತ್ರೆಯಲ್ಲಿದ್ದಾರೆ.
ಬುದ್ಧದೇವ್ ಭಟ್ಟಾಚಾರ್ಯ ಅವರ ಆರೋಗ್ಯದ ಕಾರಣದಿಂದ ಕಳೆದ ಕೆಲವು ವರ್ಷಗಳಿಂದ ಸಾರ್ವಜನಿಕ ಜೀವನದಿಂದ ದೂರವಿದ್ದರು.
2015ರಲ್ಲಿ ಸಿಪಿಐ(ಎಂ)ನ ಪೊಲಿಟ್‌ಬ್ಯೂರೊ ಮತ್ತು ಕೇಂದ್ರ ಸಮಿತಿಯಿಂದ ಕೆಳಗಿಳಿದಿದ್ದ ಅವರು 2018ರಲ್ಲಿ ರಾಜ್ಯ ಕಾರ್ಯದರ್ಶಿ ಸದಸ್ಯತ್ವವನ್ನು ತ್ಯಜಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Follow Us