AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಮೊದಲ ಬಾರಿಗೆ ಭಾರತದಲ್ಲಿ ಡಿಜಿಟಲ್ ಜನಗಣತಿ: ಲೋಕಸಭೆಗೆ ಕೇಂದ್ರ ಸರ್ಕಾರದಿಂದ ಮಾಹಿತಿ

ಈ ಬಾರಿ ಸ್ವಯಂ ದೃಢೀಕರಣಕ್ಕೂ ಅವಕಾಶ ಇರುತ್ತದೆ ಎಂದು ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದ ಶಶಿ ತರೂರ್​ ಅವರ ಹೇಳಿಕೆಗೆ ಉತ್ತರವಾಗಿ ಸಂಸತ್ತಿಗೆ ಮಾಹಿತಿ ನೀಡಿದೆ.

ಇದೇ ಮೊದಲ ಬಾರಿಗೆ ಭಾರತದಲ್ಲಿ ಡಿಜಿಟಲ್ ಜನಗಣತಿ: ಲೋಕಸಭೆಗೆ ಕೇಂದ್ರ ಸರ್ಕಾರದಿಂದ ಮಾಹಿತಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Aug 10, 2021 | 7:56 PM

Share

ದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಾರಿ ಸ್ವಯಂ ದೃಢೀಕರಣಕ್ಕೂ ಅವಕಾಶ ಇರುತ್ತದೆ ಎಂದು ಕೇಂದ್ರ ಸರ್ಕಾರವು ಕಾಂಗ್ರೆಸ್ ಸಂಸದ ಶಶಿ ತರೂರ್​ ಅವರ ಹೇಳಿಕೆಗೆ ಉತ್ತರವಾಗಿ ಸಂಸತ್ತಿಗೆ ಮಾಹಿತಿ ನೀಡಿದೆ. 2021ರ ಜನಗಣತಿಗೆ ಸಂಬಂಧಿಸಿದಂತೆ ಏನಾದರೂ ಬದಲಾವಣೆ ಅಥವಾ ಹೆಚ್ಚುವರಿ ಮಾಹಿತಿ ಇದೆಯೆ ಎಂದು ಶಶಿ ತರೂರ್ ಪ್ರಶ್ನಿಸಿದ್ದರು.

ದತ್ತಾಂಶ ಸಂಗ್ರಹಕ್ಕಾಗಿ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗುವುದು. ಗಣತಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ನಿರ್ವಹಿಸಲು ಮತ್ತು ನಿಗಾವಣೆಗಾಗಿ ಪೋರ್ಟಲ್ ಅಭಿವೃದ್ಧಿಪಡಿಸಲಾಗುವುದು. ಈ ಪೋರ್ಟಲ್​ಗೆ ಲಾಗಿನ್ ಆಗಲು​ ಮೊಬೈಲ್​ ಸಂಖ್ಯೆ ಮತ್ತು ಇತರ ವೈಯಕ್ತಿಕ ಮಾಹಿತಿ ನೀಡಬೇಕಾಗುತ್ತದೆ. ಸ್ವಯಂ ದೃಢೀಕರಣದ ಮೂಲಕ ಮಾಹಿತಿ ನೀಡಲು ಮುಂದಾಗುವವರು ಪ್ರತಿ ಹಂತದಲ್ಲಿಯೂ ನಿರ್ದಿಷ್ಟ ಸಂಕೇತಗಳನ್ನು ನೀಡಬೇಕಾಗುತ್ತದೆ. ಸ್ವಯಂ ದೃಢೀಕರಣಕ್ಕಾಗಿ ಮಾಹಿತಿ ಒದಗಿಸಿದ ನಂತರ ಗಣತಿಗೆ ಮಾಹಿತಿ ನೀಡುವವರ ಮೊಬೈಲ್​ಗೆ ಸಂಕೇತ ಸಂಖ್ಯೆಯೊಂದು ಬರುತ್ತದೆ. ಈ ಸಂಖ್ಯೆಯನ್ನು ಗಣತಿದಾರರಿಗೆ ನೀಡಿದರೆ ಎಲ್ಲ ದತ್ತಾಂಶಗಳು ತನ್ನಿಂತಾನೆ ಭರ್ತಿಯಾಗುತ್ತವೆ ಎಂದು ಕೇಂದ್ರ ಸರ್ಕಾರವು ಲಿಖಿತ ಉತ್ತರದಲ್ಲಿ ತಿಳಿಸಿದೆ.

ಜನಗಣತಿಯಿಂದ ಸಂಗ್ರಹಿಸುವ ಮಾಹಿತಿಯನ್ನು ರಾಷ್ಟ್ರೀಯ ನಾಗರಿಕ ನೋಂದಣಿ ಸೇರಿದಂತೆ ಯಾವುದೇ ದತ್ತಾಂಶ ರೂಪಿಸಲು ಬಳಸುವುದಿಲ್ಲ. ಜನಗಣತಿ ಕಾಯ್ದೆ 1948ರ ಪ್ರಕಾರ ಈ ವೇಳೆ ಸಂಗ್ರಹಿಸುವ ಮಾಹಿತಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಅವಕಾಶ ಇರುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಸಹ ಈ ಹಂತದಲ್ಲಿ ಜಾತಿ ಮಾಹಿತಿ ಬಹಿರಂಗಪಡಿಸುವ ಉದ್ದೇಶವಿಲ್ಲ ಎಂದು ಹೇಳಿದ್ದಾರೆ. ನಮ್ಮ ದೇಶದಲ್ಲಿ ಪ್ರತಿ 10 ವರ್ಷಗಳಿಗೆ ಒಮ್ಮೆ ಜನಗಣತಿ ಪ್ರಕ್ರಿಯೆ ನಡೆಯುತ್ತದೆ.

(Forthcoming Census to go digital Centre informs Lok Sabha over a question of Shahi Tharoor)

ಇದನ್ನೂ ಓದಿ: ಡಿಐಸಿಜಿಸಿ ಕಾಯ್ದೆ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಸ್ತು; ಕೋಟ್ಯಂತರ ಬ್ಯಾಂಕ್​ ಠೇವಣಿದಾರರ ಹಣಕ್ಕೆ ಸಿಕ್ತು ಗ್ಯಾರಂಟಿ

ಇದನ್ನೂ ಓದಿ: Parliament Monsoon Session: ಲೋಕಸಭೆಯಲ್ಲಿ ಸಂವಿಧಾನದ 127 ನೇ ತಿದ್ದುಪಡಿ ಮಸೂದೆ ಮಂಡನೆ

Published On - 7:45 pm, Tue, 10 August 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ