ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ

ನಾನು ದೇಶವನ್ನು ರಕ್ಷಿಸಿದ್ದೇನೆ. ಆದರೆ ನನ್ನ ನಿವೃತ್ತಿಯ ನಂತರ ನನ್ನ ಮನೆ, ನನ್ನ ಹೆಂಡತಿ ಮತ್ತು ಗ್ರಾಮಸ್ಥರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಬೇಸರಗೊಂಡಿದ್ದೇನೆ. ನಾನು ದುಃಖಿತನಾಗಿದ್ದು, ಖಿನ್ನತೆಗೆ ಒಳಗಾಗಿದ್ದೇನೆ ಎಂದು ಅಸ್ಸಾಂ ರೆಜಿಮೆಂಟ್‌ನ ಸುಬೇದಾರ್ ಆಗಿ ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ ನಿವೃತ್ತ ಯೋಧ ಇಂಡಿಯಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಕಾರ್ಗಿಲ್ ಯುದ್ದದಲ್ಲಿ ಹೋರಾಡಿದ್ದೆ, ಆದರೆ ಮಣಿಪುರದಲ್ಲಿ ನನ್ನ ಪತ್ನಿಯನ್ನು ವಿವಸ್ತ್ರಗೊಳಿಸಿದಾಗ ಕಾಪಾಡಲು ನನ್ನಿಂದಾಗಲಿಲ್ಲ: ಕಣ್ಣೀರಿಟ್ಟ ಮಾಜಿ ಯೋಧ
ಮಣಿಪುರ
Follow us
ರಶ್ಮಿ ಕಲ್ಲಕಟ್ಟ
|

Updated on: Jul 22, 2023 | 3:57 PM

ಇಂಫಾಲ್ ಜುಲೈ 22: ಮಣಿಪುರದ (Manipur) ಕಾಂಗ್‌ಪೊಕ್ಪಿಯಲ್ಲಿ ಜನರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ನಡೆಸಿ ಕಿರುಕುಳ ನೀಡಿರುವ ವಿಡಿಯೊ ವೈರಲ್ (Manipur Viral video) ಆಗುತ್ತಿದ್ದಂತೆ  ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಇಬ್ಬರು ಮಹಿಳೆಯರಲ್ಲಿ ಒಬ್ಬಾಕೆಯ ಪತಿ ತಾನು ಕಾರ್ಗಿಲ್ ಯುದ್ಧದಲ್ಲಿ (Kargil war) ದೇಶಕ್ಕಾಗಿ ಹೋರಾಡಿದ್ದೇನೆ. ಭಾರತೀಯ ಶಾಂತಿಪಾಲನಾ ಪಡೆಯ ಭಾಗವಾಗಿ ಶ್ರೀಲಂಕಾದಲ್ಲಿಯೂ ಇದ್ದೆ. ಮೇ 4 ರಂದು ನನ್ನ ಹೆಂಡತಿ ಮೇಲೆ ದೌರ್ಜನ್ಯ ನಡೆಯುವಾಗ ಆಕೆಯನ್ನು ಕಾಪಾಡಲು ನನ್ನಿಂದ ಸಾಧ್ಯವಾಗಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

ನಾನು ದೇಶವನ್ನು ರಕ್ಷಿಸಿದ್ದೇನೆ. ಆದರೆ ನನ್ನ ನಿವೃತ್ತಿಯ ನಂತರ ನನ್ನ ಮನೆ, ನನ್ನ ಹೆಂಡತಿ ಮತ್ತು ಗ್ರಾಮಸ್ಥರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಬೇಸರಗೊಂಡಿದ್ದೇನೆ. ನಾನು ದುಃಖಿತನಾಗಿದ್ದು, ಖಿನ್ನತೆಗೆ ಒಳಗಾಗಿದ್ದೇನೆ ಎಂದು ಅಸ್ಸಾಂ ರೆಜಿಮೆಂಟ್‌ನ ಸುಬೇದಾರ್ ಆಗಿ ಭಾರತೀಯ ಸೇನೆಗೆ ಸೇವೆ ಸಲ್ಲಿಸಿದ ನಿವೃತ್ತ ಯೋಧ ಇಂಡಿಯಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಮೇ 4 ರಂದು ಚಿತ್ರೀಕರಿಸಿದ ವಿಡಿಯೊ ಬುಧವಾರ ರಾತ್ರಿ ವೈರಲ್ ಆದ ನಂತರ ಮಣಿಪುರದಲ್ಲಿ ನಡೆದ ಈ ಘಟನೆ ಬೆಳಕಿಗೆ ಬಂದಿದೆ. ಮೇ 4 ರಂದು ಬೆಳಿಗ್ಗೆ ಜನರ ಗುಂಪೊಂದು ಹಲವಾರು ಮನೆಗಳನ್ನು ಸುಟ್ಟುಹಾಕಿತು. ಇಬ್ಬರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸಿತ್ತು. ಪೊಲೀಸರು ಹಾಜರಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮನೆಗಳನ್ನು ಸುಟ್ಟುಹಾಕಿದ ಮತ್ತು ಮಹಿಳೆಯರನ್ನು ಅವಮಾನಿಸಿದ ಎಲ್ಲರಿಗೂ ಕಠಿಣ ಶಿಕ್ಷೆಯಾಗಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಗದ್ದೆಯಲ್ಲಿ ಮಲಗಲು ಹೇಳಿದ್ರು: ಸಂತ್ರಸ್ತೆ

ಬೆತ್ತಲೆ ಮೆರವಣಿಗೆ ಮಾಡಿದ ನಂತರ ರಸ್ತೆಯಲ್ಲಿ ಮಲಗಿ ಎಂದು ಅವರು ನನ್ನಲ್ಲಿ ಹೇಳಿದರು ಎಂದು ಸುದ್ದಿಪೋರ್ಟಲ್ ಜತೆ ಮಾತನಾಡಿದ ಸಂತ್ರಸ್ತೆ ಹೇಳಿದ್ದಾರೆ. ಮೂರು ಪುರುಷರು ನನ್ನನ್ನು ಸುತ್ತುವರೆದರು ಅವರಲ್ಲಿ ಒಬ್ಬರು ಇನ್ನೊಬ್ಬರಿಗೆ, ‘ಅವಳನ್ನು ಅತ್ಯಾಚಾರ ಮಾಡೋಣ’ ಎಂದು ಹೇಳಿದರು. ಆದರೆ ಅವರು ಮಾಡಲಿಲ್ಲ. ನಾನು ಅದೃಷ್ಟಶಾಲಿ. ಅವರು ನನ್ನನ್ನು ಮೇಲೆ ಅತ್ಯಾಚಾರ ಮಾಡಿಲ್ಲ. ಆದರೆ ಅವರು ನನ್ನ ಸ್ತನಗಳನ್ನು ಹಿಡಿದಿದ್ದಾರೆ ಎಂದು ಸಂತ್ರಸ್ತೆ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಐವರನ್ನು ಬಂಧಿಸಲಾಗಿದೆ. ರಾಜ್ಯ ಪೊಲೀಸರು ಇತರ ಅಪರಾಧಿಗಳನ್ನು ಶೀಘ್ರವಾಗಿ ಬಂಧಿಸಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಶೋಧ ಮುಂದುವರೆದಿದೆ ಎಂದು ಮಣಿಪುರ ಪೊಲೀಸರು ಟ್ವಿಟರ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Manipur Violence: ಮಣಿಪುರ ಮಹಿಳೆಯರ ಬೆತ್ತಲೆ‌ ಮೆರವಣಿಗೆ ಪ್ರಕರಣ, ಮತ್ತೊಬ್ಬ ಆರೋಪಿಯ ಬಂಧನ

ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ನಂತರ 160 ಕ್ಕೂ ಹೆಚ್ಚು ಜನರು ಮಣಿಪುರದಲ್ಲಿ ಸಾವಿಗೀಡಾಗಿದ್ದು ಹಲವಾರು ಮಂದಿ ಗಾಯಗೊಂಡಿದ್ದಾರೆ. ಪರಿಶಿಷ್ಟ ಪಂಗಡದ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೈತಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ‘ಬುಡಕಟ್ಟು ಐಕ್ಯತಾ ಮೆರವಣಿಗೆ’ ಆಯೋಜಿಸಲಾಗಿತ್ತು.ಈ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ