AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Taj Express: ಹೊತ್ತಿ ಉರಿದ ದೆಹಲಿಯ ತಾಜ್ ಎಕ್ಸ್‌ಪ್ರೆಸ್‌ನ 4 ಬೋಗಿ, ಪ್ರಯಾಣಿಕರು ಸುರಕ್ಷಿತ

"ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಸಂಜೆ 4.24 ಕ್ಕೆ ಕರೆ ಬಂದಿತು. ಎಂಟು ಅಗ್ನಿಶಾಮಕ ಟೆಂಡರ್‌ಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ" ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Taj Express: ಹೊತ್ತಿ ಉರಿದ ದೆಹಲಿಯ ತಾಜ್ ಎಕ್ಸ್‌ಪ್ರೆಸ್‌ನ 4 ಬೋಗಿ, ಪ್ರಯಾಣಿಕರು ಸುರಕ್ಷಿತ
ಹೊತ್ತಿ ಉರಿದ ರೈಲಿನ ಬೋಗಿ
ರಶ್ಮಿ ಕಲ್ಲಕಟ್ಟ
|

Updated on:Jun 03, 2024 | 5:53 PM

Share

ದೆಹಲಿ ಜೂನ್ 03: ಆಗ್ನೇಯ ದೆಹಲಿಯ (Delhi) ಸರಿತಾ ವಿಹಾರ್‌ನಲ್ಲಿ ಸೋಮವಾರ ತಾಜ್ ಎಕ್ಸ್‌ಪ್ರೆಸ್ (Taj Express) ರೈಲಿನ ನಾಲ್ಕು ಬೋಗಿಗಳಿಗೆ ಬೆಂಕಿ (Fire) ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. “ತಾಜ್ ಎಕ್ಸ್‌ಪ್ರೆಸ್ ರೈಲಿನ ನಾಲ್ಕು ಕೋಚ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ನಮಗೆ ಸಂಜೆ 4.24 ಕ್ಕೆ ಕರೆ ಬಂದಿತು. ಎಂಟು ಅಗ್ನಿಶಾಮಕ ಟೆಂಡರ್‌ಗಳು ದೌಡಾಯಿಸಿದ್ದು ಬೆಂಕಿಯನ್ನು ನಂದಿಸುವ ಪ್ರಯತ್ನಗಳು ನಡೆಯುತ್ತಿವೆ” ಎಂದು ದೆಹಲಿ ಅಗ್ನಿಶಾಮಕ ಸೇವೆಗಳ (DFS) ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಸಾವು ನೋವು ಸಂಭವಿಸಿದ ವರದಿಗಳು ಇಲ್ಲಿಯವರೆಗೆ ಬಂದಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಮಾಧ್ಯಮದಲ್ಲಿನ  ವರದಿಗಳ  ಪ್ರಕಾರ, 2280 ತಾಜ್ ಎಕ್ಸ್‌ಪ್ರೆಸ್ ರೈಲು ಓಖ್ಲಾ-ತುಘಲಕಾಬಾದ್ ಬ್ಲಾಕ್ ವಿಭಾಗವನ್ನು ತಲುಪಿದಾಗ, ನಾಲ್ಕು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿತು. ಈ ಘಟನೆಯ ಬಗ್ಗೆ ಮಾಹಿತಿ ಬಂದ ತಕ್ಷಣ, ಸುರಕ್ಷತೆಯ ದೃಷ್ಟಿಯಿಂದ ರೈಲಿನ ಉಳಿದ ಬೋಗಿಗಳನ್ನು ಬೇರ್ಪಡಿಸಲಾಯಿತು. ಅದೇ ಸಮಯದಲ್ಲಿ, ಬೆಂಕಿಯ ಸುದ್ದಿ ತಿಳಿದ ತಕ್ಷಣ, ಡಿಆರ್‌ಎಂ ದೆಹಲಿ ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ.

ಇದನ್ನೂ ಓದಿ: ಪಾಕ್ ISI ಪರ ಬೇಹುಗಾರಿಕೆ: ಬ್ರಹ್ಮೋಸ್ ಮಾಜಿ ಎಂಜಿನಿಯರ್ ನಿಶಾಂತ್ ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ

ಮುಂಬೈನಿಂದ ಗೋರಖ್‌ಪುರಕ್ಕೆ ತೆರಳುತ್ತಿದ್ದ ಗೋದಾನ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ

ಇತ್ತೀಚೆಗೆ ಮುಂಬೈನಿಂದ ಗೋರಖ್‌ಪುರಕ್ಕೆ ಹೋಗುತ್ತಿದ್ದ ಗೋದಾನ್ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಕಾಣಿಸಿತ್ತು. ರೈಲು ಮುಂಬೈನಿಂದ ಹೊರಟು ಮಹಾರಾಷ್ಟ್ರದ ನಾಸಿಕ್ ರಸ್ತೆ ನಿಲ್ದಾಣದ ಬಳಿ ತಲುಪಿದಾಗ ಗೋಡಾನ್ (ಮುಂಬೈ ಎಲ್‌ಟಿಟಿ–ಗೋರಖ್‌ಪುರ) ಎಕ್ಸ್‌ಪ್ರೆಸ್‌ನ ಕೊನೆಯ ಲಗೇಜ್ ಬೋಗಿಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ಅವಘಡದ ಬಗ್ಗೆ ಮಾಹಿತಿ ಬಂದ ಕೂಡಲೇ ಮುನ್ನೆಚ್ಚರಿಕೆ ಕ್ರಮವಾಗಿ ರೈಲಿನ ಉಳಿದ ಭಾಗವನ್ನು ಲಗೇಜ್ ವಿಭಾಗದಿಂದ ಬೇರ್ಪಡಿಸಲಾಯಿತು. ಅದೃಷ್ಟವಶಾತ್ ಯಾವುದೇ ಪ್ರಯಾಣಿಕರ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿಲ್ಲ. ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಆಗಮಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:20 pm, Mon, 3 June 24

‘ಸಾಯೋವರೆಗೆ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
‘ಸಾಯೋವರೆಗೆ ಮರೆಯಲ್ಲ’; ಸುದೀಪ್​​ಗೆ ತಲೆಬಾಗಿ ನಮಸ್ಕರಿಸಿದ ಗಿಲ್ಲಿ
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಜೆಡಿಎಸ್​ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ
ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ
ಕಿವೀಸ್ ಆಟಗಾರನನ್ನು ಡಗೌಟ್​ಗೆ ತಳ್ಳಿದ ಕೊಹ್ಲಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
ಬಿಗ್​​ಬಾಸ್ ಮನೆಯ ಮುಂದೆ ಹೇಗಿದೆ ಪರಿಸ್ಥಿತಿ: ವಿಡಿಯೋ ನೋಡಿ
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
‘ಗಿಲ್ಲಿನೇ ವಿನ್ನರ್’; ಬಿಗ್ ಬಾಸ್ ಸ್ಟುಡಿಯೋ ಮುಂದೆ ಘೋಷಣೆ ಕೂಗಿದ ಫ್ಯಾನ್ಸ್
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಬಿಬಿಎಲ್‌ನಲ್ಲಿ ಬದಲಾಗದ ಬಾಬರ್ ಕಳಪೆ ಪ್ರದರ್ಶನ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ಕೊಪ್ಪಳದ ಅಜ್ಜನ ಜಾತ್ರೆಗಿಂದು ಕೊನೆಯ ದಿನ: ಮಹಾದಾಸೋಹದಲ್ಲಿ ಗೋದಿ ಹುಗ್ಗಿ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಅಬಕಾರಿ ಡಿಸಿಗೆ ನ್ಯಾಯಾಂಗ ಬಂಧನ: ಆಡಿಯೋ ರಿಲೀಸ್​ ಮಾಡಿದ ಬಿಜೆಪಿ ನಾಯಕರು
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ
ಬಿಗ್​​ಬಾಸ್ ಮನೆ ಮುಂದೆ ಗುಂಪು ಸೇರಿದ ಗಿಲ್ಲಿ ಅಭಿಮಾನಿಗಳ ಅಬ್ಬರ ನೋಡಿ