Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajouri Accident: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಐವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ(Jammu And Kashmir) ದ ರಜೌರಿ ಜಿಲ್ಲೆಯಲ್ಲಿ ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ರಾಜೌರಿಯ ಥಾನಮಂಡಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

Rajouri Accident: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಐವರಿಗೆ ಗಾಯ
ಕಾರು ಅಪಘಾತ
Follow us
ನಯನಾ ರಾಜೀವ್
|

Updated on: Jul 05, 2023 | 8:12 AM

ಜಮ್ಮು ಮತ್ತು ಕಾಶ್ಮೀರ(Jammu And Kashmir) ದ ರಜೌರಿ ಜಿಲ್ಲೆಯಲ್ಲಿ ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ರಾಜೌರಿಯ ಥಾನಮಂಡಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೌರಿಯ ಜಿಎಂಸಿಯ ವೈದ್ಯಕೀಯ ಅಧೀಕ್ಷಕ ಡಾ ಮೆಹಮೂದ್ ಹುಸೇನ್ ಬಜಾರ್ ತಿಳಿಸಿದ್ದಾರೆ.

ಪ್ರತ್ಯೇಕ ಘಟನೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾ ಮತ್ತು ರಾಂಬನ್ ಜಿಲ್ಲೆಗಳಲ್ಲಿ ಮೂರು ವಾಹನಗಳು ಆಳವಾದ ಕಂದಕಕ್ಕೆ ಉರುಳಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ ಮಹಾರಾಷ್ಟ್ರದ (Maharashtra) ಧುಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ. ಮಹಾರಾಷ್ಟ್ರದ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನೆರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ