Rajouri Accident: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಐವರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರ(Jammu And Kashmir) ದ ರಜೌರಿ ಜಿಲ್ಲೆಯಲ್ಲಿ ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ರಾಜೌರಿಯ ಥಾನಮಂಡಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ.

Rajouri Accident: ಜಮ್ಮು ಕಾಶ್ಮೀರದ ರಜೌರಿಯಲ್ಲಿ ಭೀಕರ ಅಪಘಾತ, ನಾಲ್ವರು ಸಾವು, ಐವರಿಗೆ ಗಾಯ
ಕಾರು ಅಪಘಾತ

Updated on: Jul 05, 2023 | 8:12 AM

ಜಮ್ಮು ಮತ್ತು ಕಾಶ್ಮೀರ(Jammu And Kashmir) ದ ರಜೌರಿ ಜಿಲ್ಲೆಯಲ್ಲಿ ಕಾರು ಅಪಘಾತಕ್ಕೀಡಾಗಿ ನಾಲ್ವರು ಮೃತಪಟ್ಟಿದ್ದು ಐವರು ಗಾಯಗೊಂಡಿದ್ದಾರೆ. ರಾಜೌರಿಯ ಥಾನಮಂಡಿ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳು ರಾಜೌರಿಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಅಸೋಸಿಯೇಟೆಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ರಾಜೌರಿಯ ಜಿಎಂಸಿಯ ವೈದ್ಯಕೀಯ ಅಧೀಕ್ಷಕ ಡಾ ಮೆಹಮೂದ್ ಹುಸೇನ್ ಬಜಾರ್ ತಿಳಿಸಿದ್ದಾರೆ.

ಪ್ರತ್ಯೇಕ ಘಟನೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ದೋಡಾ ಮತ್ತು ರಾಂಬನ್ ಜಿಲ್ಲೆಗಳಲ್ಲಿ ಮೂರು ವಾಹನಗಳು ಆಳವಾದ ಕಂದಕಕ್ಕೆ ಉರುಳಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 17 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಘಟನೆ
ಮಹಾರಾಷ್ಟ್ರದ (Maharashtra) ಧುಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೆಲ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ. ಮಹಾರಾಷ್ಟ್ರದ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನೆರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us