Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ

Tamil Nadu: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ನಾಲ್ಕು ಮನೆಗಳು ಕುಸಿದುಬಿದ್ದಿದ್ದು, ಸುಮಾರು 17 ಜನರು ಅದರ ಅಡಿ ಸಿಲುಕಿದ್ದಾರೆ. ತೆರವು ಕಾರ್ಯಾಚರಣೆ ನಡೆಯುತ್ತಿದೆ.

Salem: ಸೇಲಂನಲ್ಲಿ ನಾಲ್ಕು ಮನೆ ಕುಸಿತ; ಅವಶೇಷಗಳಡಿ ಸಿಲುಕಿದ್ದ 13 ಮಂದಿ ರಕ್ಷಣೆ, ಇನ್ನೂ ನಾಲ್ಕು ಜನರು ಸಿಲುಕಿರುವ ಸಾಧ್ಯತೆ
ಕುಸಿದಿರುವ ಮನೆಗಳ ಮುಂದೆ ನೆರೆದಿರುವ ಸ್ಥಳೀಯರು (Credits: ANI)
Follow us
TV9 Web
| Updated By: shivaprasad.hs

Updated on:Nov 23, 2021 | 1:18 PM

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ ಕರುಂಗಾಲ್ಪಟ್ಟಿಯಲ್ಲಿ ಮಂಗಳವಾರ ನಾಲ್ಕು ಮನೆಗಳು ಕುಸಿದು ಬಿದ್ದಿವೆ. ಮನೆಗಳ ಅವಶೇಷಗಳಡಿ ಕನಿಷ್ಠ 17 ಮಂದಿ ಸಿಲುಕಿಕೊಂಡಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಇತ್ತೀಚಿನ ವರದಿಗಳ ಪ್ರಕಾರ, ಇದುವರೆಗೆ 13 ಜನರನ್ನು ರಕ್ಷಿಸಲಾಗಿದೆ. ಆದರೆ ಇನ್ನೂ 4 ಜನ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿರುವ ಸಾಧ್ಯತೆಗಳಿವೆ. ಅಗ್ನಿಶಾಮಕ ಮತ್ತು ಇತರ ತುರ್ತು ಸೇವೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸ್ಥಳೀಯರು, ನಾಲ್ಕು ಮನೆಗಳು ಕುಸಿಯುವ ಮೊದಲು ದೊಡ್ಡ ಶಬ್ದ ಕೇಳಿಸಿತು. ಅವುಗಳು ಕೆಲವೇ ಸೆಕೆಂಡುಗಳಲ್ಲಿ ನೆಲಸಮವಾಗಿವೆ ಎಂದಿದ್ದಾರೆ.

ಮನೆಗಳಲ್ಲಿ ವಾಸಿಸುವವರಲ್ಲಿ ಒಬ್ಬರು ಅಗ್ನಿಶಾಮಕ ದಳದ ಅಧಿಕಾರಿಯಾಗಿದ್ದಾರೆ ಎಂದು ಸ್ಥಳೀಯ ನಿವಾಸಿಯೊಬ್ಬರು ತಿಳಿಸಿದ್ದಾರೆ. ಈ ಕುರಿತು ಎಎನ್​ಐ ಟ್ವೀಟ್ ಮಾಡಿದ್ದು, ‘ಭಾರಿ ಮಳೆಯಿಂದ ಕರುಂಗಾಲ್ಪಟ್ಟಿಯಲ್ಲಿ ಮನೆಗಳು ಕುಸಿದಿವೆ’ ಎಂದು ಹೇಳಿದೆ. ಘಟನೆಯ ಕುರಿತ ಮಾಹಿತಿಗಳು ಇನ್ನಷ್ಟೇ ಸಂಪೂರ್ಣವಾಗಿ ಲಭ್ಯವಾಗಬೇಕಿದೆ.

ಎಎನ್ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಏತನ್ಮಧ್ಯೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ನವೆಂಬರ್ 23 ಮತ್ತು 24 ರಂದು ತಮಿಳುನಾಡಿಗೆ ಹಳದಿ ಅಲರ್ಟ್ ಮತ್ತು ನವೆಂಬರ್ 25 ಮತ್ತು 26 ಕ್ಕೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಮೂಲಕ ಭಾರಿ ಮಳೆಯ ಮುನ್ನೆಚ್ಚರಿಕೆಯನ್ನು ನೀಡಿದೆ.

ಇದನ್ನೂ ಓದಿ:

ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ಖಚಿತಪಡಿಸಿಕೊಳ್ಳಲು ನೀವೇನು ಮಾಡುತ್ತಿದ್ದೀರಿ?: ತ್ರಿಪುರಾ ಸರ್ಕಾರಕ್ಕೆ ಸುಪ್ರೀಂ ಪ್ರಶ್ನೆ

ಆಂಧ್ರ ಪ್ರದೇಶದಲ್ಲಿನ ಅನ್ನಮಯ್ಯ ಡ್ಯಾಂನಿಂದ ದಿಢೀರ್​ ಪ್ರವಾಹ;18 ಜನರು ಜಲಸಮಾಧಿ, ಅನೇಕರು ನಾಪತ್ತೆ

Published On - 12:49 pm, Tue, 23 November 21

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ