ಹೈದರಾಬಾದ್: ಆಂಧ್ರದ ಪೂರ್ವ ಗೋದಾವರಿ ಜಿಲ್ಲೆಯ ಪೆದ್ದಾಪುರಂನ ಇಂಡಸ್ಟ್ರಿಯಲ್ ಏರಿಯಾ ಬಳಿ ಘೋರ ಅಪಘಾತವೊಂದು ಸಂಭವಿಸಿದೆ. ಲಾರಿಗೆ ಕಾರು ಡಿಕ್ಕಿಯಾಗಿ ಐದು ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ರಾಜಮಂಡ್ರಯಲ್ಲಿನ ಗೃಹ ಪ್ರವೇಶ ಸಮಾರಂಭಕ್ಕೆ ಹೊರಟಿದ್ದರು ಎನ್ನಲಾಗಿದೆ,ಗುರುವಾರ ಬೆಳಿಗ್ಗೆ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಮಗು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.
ಶವಗಳನ್ನು ಪೆಡ್ಡಾಪುರಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ಈ ಘಟನೆ ಸಂಬಂಧ ಪೆದ್ದಾಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಾಘೂ ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಅತಿವೇಗದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳುತ್ತಿದ್ದಾರೆ.
ಇದನ್ನೂ ಓದಿ: ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು