Hyderabad: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ
ಹೈದರಾಬಾದ್: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಕುಶಾಯ್ಗುಡ ಪ್ರದೇಶದ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಹೈದರಾಬಾದ್: ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್ನ ಕುಶಾಯ್ಗುಡ ಪ್ರದೇಶದ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ. ಮೃತರನ್ನು ಸತೀಶ್, ಅವರ ಪತ್ನಿ ವೇದಾ ಮತ್ತು ಅವರ ಇಬ್ಬರು ಮಕ್ಕಳಾದ ನಿಶಿಕೇತ್ (9) ಮತ್ತು ನಿಹಾಲ್ (5) ಎಂದು ಗುರುತಿಸಲಾಗಿದೆ. ಘಟನೆ ಶುಕ್ರವಾರ ರಾತ್ರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಶನಿವಾರ ಮಧ್ಯಾಹ್ನ ಪೊಲೀಸರಿಗೆ ಮಾಹಿತಿ ಲಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಂದಿಗುಡ ಪ್ರದೇಶದಲ್ಲಿ ತಂದೆ, ತಾಯಿ ಮತ್ತು ಅವರ ಇಬ್ಬರು ಮಕ್ಕಳು ಅಪರಿಚಿತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮತ್ತಷ್ಟು ಓದಿ: ಬಾಗಲಕೋಟೆಯಲ್ಲಿ ಮತ್ತೊಂದು ಸಾಮೂಹಿಕ ಆತ್ಮಹತ್ಯೆ: ಇಬ್ಬರು ಪುತ್ರಿಯರ ಜತೆ ನದಿಗೆ ಹಾರಿದ ತಾಯಿ
ಪ್ರಾಥಮಿಕ ವಿಚಾರಣೆಯಲ್ಲಿ ಇಬ್ಬರೂ ಮಕ್ಕಳು ಆರೋಗ್ಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದರು (ಮಾನಸಿಕವಾಗಿ ಅಸ್ವಸ್ಥರಾಗಿದ್ದಾರೆ) ಅವರಿಗೆ ಚಿಕಿತ್ಸೆ ನೀಡಲಾಗಿದ್ದರೂ, ಮಕ್ಕಳು ಚೇತರಿಸಿಕೊಳ್ಳುತ್ತಿರಲಿಲ್ಲ. ಹೀಗಾಗಿ ಪೋಷಕರು ಖಿನ್ನತೆಗೆ ಜಾರಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಅವರು ಶುಕ್ರವಾರ ರಾತ್ರಿ ಸಾವನ್ನಪ್ಪಿದ್ದಾರೆಂದು ಶಂಕಿಸಲಾಗಿದೆ ಮೃತರು ಸತೀಶ್, ವೇದಾ, ನಿಶಿಕೇತ್ ಮತ್ತು ನಿಹಾಲ್ ಎಂದು ಗುರುತಿಸಲಾಗಿದೆ.
ಮೃತರ ದೇಹಗಳನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ, ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ