ಬದುಕನ್ನೇ ಕಿತ್ತುಕೊಂಡ ಸಾಲದ ಹೊರೆ.. ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು

ಆತ ಹೆಂಡತಿ ಮತ್ತು ಇಬ್ಬರು ಮಕ್ಕಳ ಜೊತೆ ಕೃಷಿ ಮಾಡುತ್ತಾ ಜೀವನ ನಡೆಸುತ್ತಿದ್ದ. ಕೃಷಿಗಾಗಿ ಸಾಕಷ್ಟು ಸಾಲ ಕೂಡ ಮಾಡಿದ್ದ. ಚೆನ್ನಾಗಿ ಬೆಳೆ ಬರುತ್ತೆ ಸಾಲ ತೀರಿಸಬಹುದು ಅನ್ಕೊಂಡಿದ್ರು. ಆದ್ರೆ ಸಾಲವೆಂಬ ಶೂಲ ಆ ಕುಟುಂಬವನ್ನೇ ಬಲಿ ಪಡೆದಿದೆ.

ಬದುಕನ್ನೇ ಕಿತ್ತುಕೊಂಡ ಸಾಲದ ಹೊರೆ.. ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣು
ಅತ್ತೆ ಸೊಸೆ ಕಿತ್ತಾಟ: ಸೊಸೆಗೆ ಚಾಕುವಿನಿಂದ ಚುಚ್ಚಿದ್ದ ಅತ್ತೆ, ಸೊಸೆ ಸತ್ತಳೆಂದು ಅಂಜಿ ನೇಣಿಗೆ ಶರಣು
Follow us
ಆಯೇಷಾ ಬಾನು
|

Updated on: Mar 26, 2021 | 7:16 AM

ಹೈದರಾಬಾದ್‌: ಸಾಲವೆಂಬ ಶೂಲಕ್ಕೆ ಸಿಲುಕಿ ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ಈ ಘಟನೆಯಿಂದ ತೆಲಂಗಾಣದ ಮಂಚಿರ್ಯಾಲ ಜಿಲ್ಲೆಯ ಮಲ್ಕಪಲ್ಲಿ ಗ್ರಾಮ ಬೆಚ್ಚಿ ಬಿದ್ದಿದೆ. ಈ ಗ್ರಾಮದ ರೈತ ಬಂಜಿರಾಲ ರಮೇಶ್ ಮನೆ ಬಾಗಿಲು ತೆಗೆದಾಗ ಶಾಕ್ ಕಾದಿತ್ತು. ಯಾಕಂದ್ರೆ 40 ವರ್ಷದ ರಮೇಶ್, 35 ವರ್ಷದ ಈತನ ಪತ್ನಿ ಪದ್ಮ ಮತ್ತು ಇಬ್ಬರು ಮಕ್ಕಳಾದ 19 ವರ್ಷದ ಸೌಮ್ಯ ಮತ್ತು ಅಕ್ಷಯ್‌ ನೇಣಿನ ಕುಣಿಕೆಯಲ್ಲಿ ಶವವಾಗಿದ್ರು.

ಇಡೀ ಕುಟುಂಬ ಸಾಲಬಾಧೆ ಹಿನ್ನೆಲೆ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದೆ. ನಿನ್ನೆ ಸಾಲ ಕೊಟ್ಟವರಿಗೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರಂತೆ. ಆದ್ರೆ ಮಾತು ಉಳಿಸಿಕೊಳ್ಳಲಾಗದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಡೆತ್ ನೋಟ್ ಬರೆದಿಟ್ಟಿದ್ದಾರೆ.

ಬಂಜಿರಾಲ ರಮೇಶ್ ತನ್ನ ಜಮೀನಿನಲ್ಲಿ ಬೆಳೆ ಬೆಳೆಯಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಅಲ್ಲದೇ ಕಳೆದ ವರ್ಷ ಸಾಕಷ್ಟು ಬೆಳೆ ಹಾನಿಯಾಗಿತ್ತು. ಮಗಳ ಮದುವೆಗೆಂದು ಸಹ ಸಾಲ ಮಾಡಿದ್ದರು. ಆದ್ರೆ, ಸಾಲ ತೀರಿಸಲು ಆಗಲಿಲ್ಲ. ಇದರ ನಡುವೆ ಸಾಲಗಾರರ ಕಾಟ ಜೋರಾಗಿತ್ತು. ನಿನ್ನೆ ಸಾಲ ತೀರಿಸುವುದಾಗಿ ಮಾತು ಕೊಟ್ಟಿದ್ದರು. ಆದ್ರೆ ಸಾಲ ತೀರಿಸುವ ಪರಿಸ್ಥಿತಿ ಇರಲಿಲ್ಲ. ಇದರಿಂದ ಬದುಕುವ ಆಸೆ ಕಳೆದುಕೊಂಡ ರಮೇಶ್ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಚಿರ್ಯಾಲ ಜಿಲ್ಲಾ ಕಾಸಿಪೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಸಾಲಕ್ಕಾಗಿ ಇಡೀ ಕುಟುಂಬ ಬಲಿಯಾಗಿದ್ದು ನಿಜಕ್ಕೂ ದುರಂತದ ಸಂಗತಿ.

ಇದನ್ನೂ ಓದಿ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ನವ ವಿವಾಹಿತೆ; ನದಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು

ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ