ಜಮ್ಮು ಮತ್ತು ಕಾಶ್ಮೀರದಲ್ಲಿ ಎನ್ಕೌಂಟರ್: ಪಾಕಿಸ್ತಾನದ ಇಬ್ಬರು ಸೇರಿದಂತೆ ನಾಲ್ಕು ಉಗ್ರರ ಹತ್ಯೆ
ಕುಪ್ವಾರದಲ್ಲಿ ಉಗ್ರಗಾಮಿಗಳು ಮತ್ತು ಸಶಸ್ತ್ರ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಕುಲ್ಗಾಮ್‌ನಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu and Kashmir) ಭಾನುವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ (encounters) ಇಬ್ಬರು ಪಾಕಿಸ್ತಾನಿ ಪ್ರಜೆಗಳು ಸೇರಿದಂತೆ ನಾಲ್ವರು ಉಗ್ರರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ(Kulgam) ಇಬ್ಬರು ಸ್ಥಳೀಯ ಉಗ್ರರು ಹತರಾಗಿದ್ದು, ಉತ್ತರ ಕಾಶ್ಮೀರದ ಕುಪ್ವಾರದಲ್ಲಿ ಇಬ್ಬರು ಪಾಕಿಸ್ತಾನಿ ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಪ್ವಾರದಲ್ಲಿ ಉಗ್ರಗಾಮಿಗಳು ಮತ್ತು ಸಶಸ್ತ್ರ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಕುಲ್ಗಾಮ್‌ನಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ಭಾನುವಾರ ಮಧ್ಯಾಹ್ನ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಭಾರತೀಯ ಸೇನೆಯ ಜಂಟಿ ತಂಡವು ಕುಪ್ವಾರದ ಅರಣ್ಯದಲ್ಲಿ ಉಗ್ರ ಶೌಕತ್ ಅಹ್ಮದ್ ಶೇಖ್‌ನಿಂದ ಪಡೆದ ಮಾಹಿತಿ ನಂತರ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಪೊಲೀಸರು ತಿಳಿಸಿದ್ದಾರೆ. ಶೇಖ್ ನ್ನು ಈ ಹಿಂದೆ ಬಂಧಿಸಲಾಗಿತ್ತು. ಅಡಗುತಾಣದ ಹುಡುಕಾಟದ ಸಂದರ್ಭದಲ್ಲಿ, ಉಗ್ರರು ಜಂಟಿ ಶೋಧನಾ ತಂಡದ ಮೇಲೆ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು, ಇದು ಎನ್‌ಕೌಂಟರ್‌ಗೆ ಕಾರಣವಾಯಿತು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಆರಂಭಿಕ ಗುಂಡಿನ ಚಕಮಕಿಯಲ್ಲಿ, ಒಬ್ಬ ಉಗ್ರ ಹತ್ಯೆಯಾಗಿದ್ದಾನ. ನಂತರದ ಎನ್‌ಕೌಂಟರ್‌ನಲ್ಲಿ, ಇದುವರೆಗೆ ನಿಷೇಧಿತ ಭಯೋತ್ಪಾದಕ ಸಂಘಟನೆ ಎಲ್‌ಇಟಿಯ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಹತರಾಗಿದ್ದಾರೆ. ಭಾರೀ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ.
ಹತ್ಯೆಯಾದ ಉಗ್ರರ ಗುರುತನ್ನು ಪೊಲೀಸರು ಇನ್ನೂ ಖಚಿತಪಡಿಸಿಲ್ಲ ಅಥವಾ ಅಡಗುತಾಣಕ್ಕೆ “ಪಡೆಗಳನ್ನು ಮುನ್ನಡೆಸಿದ” ಬಂಧಿತ ಉಗ್ರರ ಮಾಹಿತಿಯನ್ನೂ ನೀಡಿಲ್ಲ.
Police along with Army have neutralised four terrorists so far including two Pakistani terrorists in two ongoing anti-terrorist operations in Kupwara and Kulgam districts: Jammu and Kashmir Police
— ANI (@ANI) June 19, 2022
ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ. ಉಗ್ರಗಾಮಿಗಳ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ನಂತರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮತ್ತು ಸೇನೆಯ ಜಂಟಿ ತಂಡವು ಕುಲ್ಗಾಮ್‌ನ ಡಿ ಹೆಚ್ ಪೋರಾ ಗ್ರಾಮವನ್ನು ಸುತ್ತುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಂಟಿ ತಂಡವು ಗುರಿಯತ್ತ ಧಾವಿಸುತ್ತಿದ್ದಂತೆ ಉಗ್ರರು ಗುಂಡಿನ ದಾಳಿ ನಡೆಸಿದರು. ನಂತರ ಪಡೆಗಳು ಪ್ರತಿದಾಳಿ ನಡೆಸಿದ್ದು, ಇಬ್ಬರು ಉಗ್ರರು ಸಾವನ್ನಪ್ಪಿದ್ದಾರೆ.
“ಈಗ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇದುವರೆಗೆ ಇಬ್ಬರು ಸ್ಥಳೀಯ ಭಯೋತ್ಪಾದಕರು ಹತರಾಗಿದ್ದಾರೆ. ಅವರನ್ನು ಶ್ರೀನಗರದ ಹಾರಿಸ್ ಶರೀಫ್ ಮತ್ತು ಕುಲ್ಗಾಮ್‌ನ ಜಾಕಿರ್ ಪದ್ದರ್ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ