ಜಮ್ಮು ಕಾಶ್ಮೀರ: ವೈಷ್ಣೋದೇವಿ ದರ್ಶನಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ನಾಲ್ವರು ಸಜೀವ ದಹನ

| Updated By: ರಶ್ಮಿ ಕಲ್ಲಕಟ್ಟ

Updated on: May 13, 2022 | 6:07 PM

ಕತ್ರಾದಿಂದ ಜಮ್ಮುವಿಗೆ ತೆರಳುತ್ತಿದ್ದ ಬಸ್ ಸಂಖ್ಯೆ ಜೆಕೆ 14/1831/ಯಲ್ಲಿ ಕತ್ರಾದಿಂದ 1 ಕಿ.ಮೀ ದೂರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂಭವನೀಯ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ. ಎಫ್‌ಎಸ್‌ಎಲ್ ತಂಡವನ್ನು ಸ್ಥಳದಲ್ಲೇ ನಿಯೋಜಿಸಲಾಗಿದೆ

ಜಮ್ಮು ಕಾಶ್ಮೀರ: ವೈಷ್ಣೋದೇವಿ ದರ್ಶನಕ್ಕೆ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಬಸ್‌ನಲ್ಲಿ ಆಕಸ್ಮಿಕ ಬೆಂಕಿ, ನಾಲ್ವರು ಸಜೀವ ದಹನ
ಬೆಂಕಿಗೀಡಾದ ಬಸ್
Image Credit source: Twitter
Follow us on

ಶ್ರೀನಗರ: ಮಾತಾ ವೈಷ್ಣೋದೇವಿ (Mata Vaishno Devi shrine) ದೇಗುಲ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ಯಾತ್ರಾರ್ಥಿಗಳಿಂದ ತುಂಬಿದ್ದ ಬಸ್‌ಗೆ ಬೆಂಕಿ ತಗುಲಿದ್ದು ನಾಲ್ವರು ಸಜೀವ ದಹನಾಗಿದ್ದಾರೆ. ಈ ಘಟನೆಯಲ್ಲಿ 22 ಮಂದಿ ಗಾಯಗೊಂಡಿದ್ದಾರೆ. ಕೆಲವು ಪ್ರತ್ಯಕ್ಷದರ್ಶಿಗಳ ಪ್ರಕಾರ, ವಾಹನದೊಳಗೆ ನಿಗೂಢ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿತು. ವರದಿಗಳ ಪ್ರಕಾರ ಹಲವಾರು ಜನರಿಗೆ ತೀವ್ರ ಸುಟ್ಟ ಗಾಯಗಳಾಗಿವೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಘಟನೆ ಭಯೋತ್ಪಾದನೆ ಕೃತ್ಯ ಅಲ್ಲ ಎಂದು ಹೇಳಿದ್ದಾರೆ. ಕತ್ರಾದಿಂದ (Katra) ಜಮ್ಮುವಿಗೆ (Jammu) ತೆರಳುತ್ತಿದ್ದ ಬಸ್ ಸಂಖ್ಯೆ ಜೆಕೆ 14/1831/ಯಲ್ಲಿ ಕತ್ರಾದಿಂದ 1 ಕಿ.ಮೀ ದೂರದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂಭವನೀಯ ಕಾರಣವನ್ನು ಕಂಡುಹಿಡಿಯಲಾಗುತ್ತಿದೆ. ಎಫ್‌ಎಸ್‌ಎಲ್ ತಂಡವನ್ನು ಸ್ಥಳದಲ್ಲೇ ನಿಯೋಜಿಸಲಾಗಿದೆ ಎಂದು ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಎಡಿಜಿಪಿ) ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕತ್ರಾದಲ್ಲಿ ಬಸ್ ಅಪಘಾತದ ಮಾಹಿತಿ ಪಡೆದ ತಕ್ಷಣ, ಇದೀಗ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಡೆಪ್ಯೂಟಿ ಕಮಿಷನರ್ ಬಬಿಲಾ ರಖ್ವಾಲ್ ಅವರೊಂದಿಗೆ ಮಾತನಾಡಿದ್ದಾರೆ. ಇಬ್ಬರು ಸಾವಿಗೀಡಾಗಿರುವುದಾಗಿ ವರದಿ ಆಗಿದೆ, ಗಾಯಾಳುಗಳನ್ನು ನರೈನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗಾಯಗೊಂಡವರಿಗೆ ಆರ್ಥಿಕ ಮತ್ತು ಇನ್ನಿತರ ಸಹಾಯಒದಗಿಸಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಟ್ವೀಟ್ ಮಾಡಿದ್ದಾರೆ.


ಪ್ರಾಥಮಿಕ ವಿವರಗಳ ಪ್ರಕಾರ ಇಂಜಿನ್ ಪ್ರದೇಶದಿಂದ ಬಸ್‌ಗೆ ಬೆಂಕಿ ಹೊತ್ತಿಕೊಂಡಿತು. ಅದು ಕ್ಷಣ ಮಾತ್ರದಲ್ಲಿ ಇಡೀ ಬಸ್ ಅನ್ನು ಆವರಿಸಿತು ಎಂದು ಎಡಿಜಿಪಿ ಜಮ್ಮು ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹೇಳಿದ್ದಾರೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

 

Published On - 5:43 pm, Fri, 13 May 22