AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ; 24 ಮಂದಿ ಸಾವು

ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ಗುಜರಾತ್‌ನ ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ; 24 ಮಂದಿ ಸಾವು
ಅಗ್ನಿ ಅವಘಡ
ರಶ್ಮಿ ಕಲ್ಲಕಟ್ಟ
|

Updated on:May 25, 2024 | 9:50 PM

Share

ರಾಜ್‌ಕೋಟ್‌ ಮೇ 25: ಶನಿವಾರ ಸಂಜೆ ಗುಜರಾತ್‌ನ (Gujarat) ರಾಜ್‌ಕೋಟ್‌ನಲ್ಲಿ (Rajkot( ಗೇಮಿಂಗ್ ಝೋನ್‌ನಲ್ಲಿ ಬೆಂಕಿ ಅವಘಡ (Fire Accident) ಸಂಭವಿಸಿದ್ದು 24 ಮಂದಿ ಸಾವಿಗೀಡಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕನಿಷ್ಠ 12 ಮಕ್ಕಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಹಲವು ಅಗ್ನಿಶಾಮಕ ಟೆಂಡರ್‌ ಧಾವಿಸಿದ್ದು, ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದೆ. ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ. ಬೆಂಕಿ ನಂದಿಸುವ ಪ್ರಯತ್ನ ನಡೆಯುತ್ತಿದೆ. ನಾಪತ್ತೆಯಾದವರ ಬಗ್ಗೆ ನಮಗೆ ಯಾವುದೇ ಸಂದೇಶ ಬಂದಿಲ್ಲ. ತಾತ್ಕಾಲಿಕ ಕಟ್ಟಡ ಕುಸಿದಿದೆ. ಗಾಳಿಯ ವೇಗದಿಂದಾಗಿ ನಾವು ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ರಾಜ್‌ಕೋಟ್ ಪೊಲೀಸ್ ಕಮಿಷನರ್ ರಾಜು ಭಾರ್ಗವ್ ಮಾತನಾಡಿ, ಹಲವಾರು ಜನರು ಒಳಗೆ ಸಿಲುಕಿರುವ ಶಂಕೆ ಇದೆ. ಬೆಂಕಿಯನ್ನು ನಂದಿಸಿದ ನಂತರ ಸ್ಪಷ್ಟವಾದ ಮಾಹಿತಿ ಸಿಗುತ್ತದೆ. ಗಾಯಾಳುಗಳಿಗೆ ತಕ್ಷಣದ ಚಿಕಿತ್ಸೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.

ರಾಜ್‌ಕೋಟ್‌ನ ಗೇಮಿಂಗ್ ಝೋನ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ತಕ್ಷಣದ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ ಎಂದು ಭೂಪೇಂದ್ರ ಪಟೇಲ್ ಟ್ವೀಟ್ ಮಾಡಿದ್ದಾರೆ.

ಸುಮಾರು 20 ಮೃತದೇಹಗಳು ಪತ್ತೆಯಾಗಿವೆ ಎಂದು ರಾಜ್‌ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ ಖಚಿತಪಡಿಸಿದ್ದಾರೆ.

“ನಾವು ಸಾಧ್ಯವಾದಷ್ಟು ದೇಹಗಳನ್ನು ಹಿಂಪಡೆಯಲು ಪ್ರಯತ್ನಿಸುತ್ತಿದ್ದೇವೆ. ಸದ್ಯಕ್ಕೆ ಸುಮಾರು 20 ಮೃತದೇಹಗಳು ಪತ್ತೆಯಾಗಿದ್ದು, ಹೆಚ್ಚಿನ ತನಿಖೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ತನಿಖೆ ನಡೆಸಲಾಗುವುದು’ ಎಂದು ರಾಜು ಭಾರ್ಗವ ತಿಳಿಸಿದ್ದಾರೆ.

ಇದನ್ನೂ ಓದಿ: ಆಮ್ ಆದ್ಮಿ ನಾಯಕರು ಹೋಲ್​ಸೇಲ್ ಡ್ರಗ್ಸ್ ವ್ಯಾಪಾರಿಗಳು; ಪಂಜಾಬ್‌ನಲ್ಲಿ ಮೋದಿ ಟೀಕೆ

ಗೇಮಿಂಗ್ ಝೋನ್ ಯುವರಾಜ್ ಸಿಂಗ್ ಸೋಲಂಕಿ ಎಂದು ಗುರುತಿಸಲ್ಪಟ್ಟ ವ್ಯಕ್ತಿಯ ಒಡೆತನದಲ್ಲಿದೆ ಎಂದು ಅವರು ಹೇಳಿದರು.

“ನಾವು ನಿರ್ಲಕ್ಷ್ಯ ಮತ್ತು ಸಂಭವಿಸಿದ ಸಾವುಗಳಿಗೆ ಅಪರಾಧವನ್ನು ದಾಖಲಿಸುತ್ತೇವೆ. ನಾವು ಇಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದ ನಂತರ ಮುಂದಿನ ತನಿಖೆ ನಡೆಯಲಿದೆ ಎಂದು ರಾಜ್‌ಕೋಟ್ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸಂತಾಪ ಸೂಚಿಸಿದ ಮೋದಿ

ಶನಿವಾರ ಸಂಜೆ ಗೇಮಿಂಗ್ ಝೋನ್​​ನಲ್ಲಿ  ಬೆಂಕಿ ಕಾಣಿಸಿಕೊಂಡು ಮಕ್ಕಳು ಸೇರಿದಂತೆ ಕನಿಷ್ಠ 24 ಜನರು ಸಾವಿಗೀಡಾದ  ರಾಜ್‌ಕೋಟ್‌ ದ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ ಮೋದಿ, ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.

ರಾಜ್‌ಕೋಟ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಿಂದ ತೀವ್ರ ನೊಂದಿದ್ದೇವೆ. ನನ್ನ ಪ್ರಾರ್ಥನೆ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಎಲ್ಲರೊಂದಿಗೂ ಇವೆ.  ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲು ಸ್ಥಳೀಯ ಆಡಳಿತವು ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:15 pm, Sat, 25 May 24