ನಾಲ್ಕು ಅಂತಸ್ತಿನ ಕಟ್ಟದ ಕುಸಿತ! 7 ಮಂದಿಯ ರಕ್ಷಣೆ, ಅವಶೇಷಗಳಡಿ 20ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ

ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡ ದುರ್ಘಟನೆ ಮಹಾರಾಷ್ಟ್ರದ ಮುಂಬೈನ ಕುರ್ಲಾ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ್ದು, 7 ಮಂದಿಯ ರಕ್ಷಣೆ ಮಾಡಲಾಗಿದೆ. ಇನ್ನೂ 20ಕ್ಕೂ ಹೆಚ್ಚು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ನಾಲ್ಕು ಅಂತಸ್ತಿನ ಕಟ್ಟದ ಕುಸಿತ! 7 ಮಂದಿಯ ರಕ್ಷಣೆ, ಅವಶೇಷಗಳಡಿ 20ಕ್ಕೂ ಹೆಚ್ಚು ಜನ ಸಿಲುಕಿರುವ ಶಂಕೆ
ಕಟ್ಟಡ ಕುಸಿತImage Credit source: ANI
Follow us
TV9 Web
| Updated By: Rakesh Nayak Manchi

Updated on:Jun 28, 2022 | 7:41 AM

ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ(building collapse)ಗೊಂಡ ದುರ್ಘಟನೆ ಮಹಾರಾಷ್ಟ್ರದ ಮುಂಬೈನ ಕುರ್ಲಾ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ್ದು, ಮಾಹಿತಿ ತಿಳಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅದರಂತೆ ಅವಶೇಷಗಳಡಿ ಸಿಲುಕಿದ್ದ 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, 20 ರಿಂದ 25 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.

ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಎನ್​ಡಿಆರ್​ಎಫ್ ಸಿಬ್ಬಂದಿಗಳು ಬೀಡುಬಿಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ 7 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇದೇ ವೇಳೆ ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಕೂಡ ನಡೆಯುತ್ತಿದೆ ಎಂದಿದ್ದಾರೆ.

ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟಕ್ಕಾಗಿ ಸುಪ್ರೀಂಕೋರ್ಟ್ ನಲ್ಲಿ ಉದ್ದವ್ ಠಾಕ್ರೆ v/s ಏಕನಾಥ್ ಶಿಂಧೆ ಮಧ್ಯೆ ಕಾನೂನು ಸಮರ ಹೀಗಿತ್ತು!

ಸ್ಥಳಕ್ಕೆ ದೌಡಾಯಿಸಿದ ಆದಿತ್ಯ ಠಾಕ್ರೆ

ದುರ್ಘಟನಾ ಸ್ಥಳಕ್ಕೆ ದೌಡಾಯಿಸಿದ ಸಚಿವ ಆದಿತ್ಯ ಠಾಕ್ರೆ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಶಿಥಿಲಾವಸ್ಥೆಯಲ್ಲಿದ್ದ ಈ ಕಟ್ಟಡವನ್ನು ಖಾಲಿ ಮಾಡುವಂತೆ ಜನರಿಗೆ ನೋಟಿಸ್ ನೀಡಲಾಗಿತ್ತು. ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸದ ಜನರು ಇಲ್ಲೇ ವಾಸಿಸುತ್ತಿದ್ದರು. ಒಂದೊಮ್ಮೆ ತೆರವುಗೊಳಿಸಿದ್ದಿದ್ದರೆ ಜನರಿಗೆ ಯಾವುದೇ ತೊಂದರೆಯಾಗುತ್ತಿರಲಿಲ್ಲ ಎಂದಿದ್ದಾರೆ.

ಶಿಥಿಲಾವಸ್ಥೆಯಲ್ಲಿರುವ ಕಡ್ಡಗಳ ಪತ್ತೆ, ಕ್ರಮ

ಕೆಲವೊಂದು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಇವುಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವ ಬಗ್ಗೆ ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ. ಭವಿಷ್ಯದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ: MVA Crisis: ಬಂಡಾಯದ ನಂತರ ಎರಡು ಬಾರಿ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್ ಠಾಕ್ರೆ, ತಡೆದು ನಿಲ್ಲಿಸಿದ್ದು ಈ ಪ್ರಭಾವಿ

Published On - 7:41 am, Tue, 28 June 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ