ಮುಂಬೈ: ನಾಲ್ಕು ಅಂತಸ್ತಿನ ಕಟ್ಟಡ ಕುಸಿತ(building collapse)ಗೊಂಡ ದುರ್ಘಟನೆ ಮಹಾರಾಷ್ಟ್ರದ ಮುಂಬೈನ ಕುರ್ಲಾ ಪ್ರದೇಶದಲ್ಲಿ ತಡರಾತ್ರಿ ಸಂಭವಿಸಿದ್ದು, ಮಾಹಿತಿ ತಿಳಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಅದರಂತೆ ಅವಶೇಷಗಳಡಿ ಸಿಲುಕಿದ್ದ 7 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು, 20 ರಿಂದ 25 ಜನರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಘಟನೆ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಘಟನಾ ಸ್ಥಳದಲ್ಲಿ ಅಗ್ನಿಶಾಮಕದಳ ಹಾಗೂ ಎನ್ಡಿಆರ್ಎಫ್ ಸಿಬ್ಬಂದಿಗಳು ಬೀಡುಬಿಟ್ಟಿದ್ದಾರೆ. ಅವಶೇಷಗಳಡಿ ಸಿಲುಕಿರುವವರ ರಕ್ಷಣಾ ಕಾರ್ಯ ನಡೆಯುತ್ತಿದೆ. ಸದ್ಯ 7 ಮಂದಿಯನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇದೇ ವೇಳೆ ಕಟ್ಟಡ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಕೂಡ ನಡೆಯುತ್ತಿದೆ ಎಂದಿದ್ದಾರೆ.
Kurla, Mumbai | A 4-storey building collapses in Naik Nagar. Fire brigade team, police at the spot as rescue operation continues
As per BMC, 7 people rescued from under debris are in stable condition; 20 to 25 likely to be trapped under the debris. Rescue operation on pic.twitter.com/M9stC1eFh6
— ANI (@ANI) June 27, 2022
ಇದನ್ನೂ ಓದಿ: ಮುಖ್ಯಮಂತ್ರಿ ಪಟ್ಟಕ್ಕಾಗಿ ಸುಪ್ರೀಂಕೋರ್ಟ್ ನಲ್ಲಿ ಉದ್ದವ್ ಠಾಕ್ರೆ v/s ಏಕನಾಥ್ ಶಿಂಧೆ ಮಧ್ಯೆ ಕಾನೂನು ಸಮರ ಹೀಗಿತ್ತು!
ಸ್ಥಳಕ್ಕೆ ದೌಡಾಯಿಸಿದ ಆದಿತ್ಯ ಠಾಕ್ರೆ
ದುರ್ಘಟನಾ ಸ್ಥಳಕ್ಕೆ ದೌಡಾಯಿಸಿದ ಸಚಿವ ಆದಿತ್ಯ ಠಾಕ್ರೆ, ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಅವರು, ಶಿಥಿಲಾವಸ್ಥೆಯಲ್ಲಿದ್ದ ಈ ಕಟ್ಟಡವನ್ನು ಖಾಲಿ ಮಾಡುವಂತೆ ಜನರಿಗೆ ನೋಟಿಸ್ ನೀಡಲಾಗಿತ್ತು. ಈ ಸೂಚನೆಯನ್ನು ಗಂಭೀರವಾಗಿ ಪರಿಗಣಿಸದ ಜನರು ಇಲ್ಲೇ ವಾಸಿಸುತ್ತಿದ್ದರು. ಒಂದೊಮ್ಮೆ ತೆರವುಗೊಳಿಸಿದ್ದಿದ್ದರೆ ಜನರಿಗೆ ಯಾವುದೇ ತೊಂದರೆಯಾಗುತ್ತಿರಲಿಲ್ಲ ಎಂದಿದ್ದಾರೆ.
ಶಿಥಿಲಾವಸ್ಥೆಯಲ್ಲಿರುವ ಕಡ್ಡಗಳ ಪತ್ತೆ, ಕ್ರಮ
ಕೆಲವೊಂದು ಕಟ್ಟಡಗಳು ಶಿಥಿಲಾವಸ್ಥೆಯಲ್ಲಿದ್ದು, ಇವುಗಳನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುವ ಬಗ್ಗೆ ಸಚಿವ ಆದಿತ್ಯ ಠಾಕ್ರೆ ಹೇಳಿದ್ದಾರೆ. ಭವಿಷ್ಯದಲ್ಲಿ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲಾಗುವುದು ಎಂದಿದ್ದಾರೆ.
ಇದನ್ನೂ ಓದಿ: MVA Crisis: ಬಂಡಾಯದ ನಂತರ ಎರಡು ಬಾರಿ ರಾಜೀನಾಮೆ ನೀಡಲು ಮುಂದಾಗಿದ್ದ ಉದ್ಧವ್ ಠಾಕ್ರೆ, ತಡೆದು ನಿಲ್ಲಿಸಿದ್ದು ಈ ಪ್ರಭಾವಿ
Published On - 7:41 am, Tue, 28 June 22