ಲಕ್ನೋದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ

| Updated By: ರಶ್ಮಿ ಕಲ್ಲಕಟ್ಟ

Updated on: Jan 24, 2023 | 8:28 PM

ಲಕ್ನೋದ ವಜೀರ್ ಹಸನ್‌ಗಂಜ್ ರಸ್ತೆಯಲ್ಲಿ ನಾಲ್ಕು ಅಂತಸ್ತಿನ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ. ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ಇದೆ.

ಲಕ್ನೋದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಶಂಕೆ
ಕುಸಿದು ಬಿದ್ದ ಕಟ್ಟಡ
Follow us on

ಉತ್ತರ ಪ್ರದೇಶದ (Uttar Pradesh) ರಾಜಧಾನಿ ಲಕ್ನೋದಲ್ಲಿ (Lucknow) ಮಂಗಳವಾರ ನಾಲ್ಕು ಅಂತಸ್ತಿನ ವಸತಿ ಕಟ್ಟಡ ಕುಸಿದಿದ್ದು, ಕೆಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಮುಂಜಾನೆ ಉತ್ತರ ಭಾರತದಾದ್ಯಂತ ಭೂಕಂಪ (Earthquake) ಸಂಭವಿಸಿದೆ ಎಂದು ವರದಿಯಾಗಿದೆ. ಇದರಿಂದಾಗಿ ಹಳೆಯ ಕಟ್ಟಡಕ್ಕೆ ಹಾನಿಯಾಗಿದೆಯೇ ಎಂದು ಅಧಿಕಾರಿಗಳು ಇನ್ನೂ ಪರಿಶೀಲಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಲಕ್ನೋದ ವಜೀರ್ ಹಸನ್‌ಗಂಜ್ ರಸ್ತೆಯಲ್ಲಿ ವಸತಿ ಕಟ್ಟಡವೊಂದು ಕುಸಿದು ಬಿದ್ದಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ ಎಂದು ಎಎನ್ಐ ಟ್ವೀಟ್ ಮಾಡಿದೆ.

ಲಕ್ನೋದ ಹಸನ್‌ಗಂಜ್​​ನಲ್ಲಿ ಕುಸಿದ ಕಟ್ಟಡದ ಅವಶೇಷಗಳ ಅಡಿಯಲ್ಲಿ ಕನಿಷ್ಠ ನಾಲ್ಕು ಕುಟುಂಬಗಳು ಸಿಲುಕಿರುವ ಸಾಧ್ಯತೆಯಿದೆ. ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಹಸನ್‌ಗಂಜ್ಹಳೆಯ ಕಟ್ಟಡಗಳಿಂದ ಕೂಡಿದೆ. ಇಂದು ಕುಸಿದು ಬಿದ್ದಿದ್ದನ್ನು ಅಲಯ ಅಪಾರ್ಟ್‌ಮೆಂಟ್. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಅವರು ಸ್ಥಳದಲ್ಲೇ ಇದ್ದು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ಸ್ಪಂದನಾ ಪಡೆಯ ತಂಡಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯವನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:58 pm, Tue, 24 January 23