ಗುಜರಾತ್: ಸೂರತ್‌ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ; 15 ಮಂದಿಗೆ ಗಾಯ, ಐವರು ಸಿಲುಕಿರುವ ಶಂಕೆ
ಸೂರತ್‌ನ ಸಚಿನ್ ಪ್ರದೇಶದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು 15 ಮಂದೆಗೆ ಗಾಯಗಳಾಗಿವೆ. ಹಲವಾರು ಮಂದಿ ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ದೆಹಲಿ ಜುಲೈ 06: ಶನಿವಾರ ಸೂರತ್‌ನ (Surat) ಸಚಿನ್ ಪ್ರದೇಶದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು(building collapse) ಬಿದ್ದಿದೆ ಎಂದು ಎಎನ್‌ಐ ವರದಿ ಮಾಡಿದೆ. ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದು ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸುಮಾರು 4-5 ಫ್ಲಾಟ್‌ಗಳು ಬಿದ್ದಿವೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ ಆದರೆ ಸುಮಾರು 3-4 ಜನರು ಇನ್ನೂ ಅವಶೇಷಗಳೊಳಗೆ ಸಿಲುಕಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು (ಅವರನ್ನು ರಕ್ಷಿಸಲು) ಕಾರ್ಯನಿರ್ವಹಿಸುತ್ತಿವೆ” ಎಂದು ಸೂರತ್ ಜಿಲ್ಲಾಧಿಕಾರಿ ಸೌರಭ್ ಪಾರ್ಧಿ ಪಿಟಿಐಗೆ ತಿಳಿಸಿದರು.
“2016-17 ರಲ್ಲಿ ನಿರ್ಮಿಸಲಾದ ಪಾಲಿ ಗ್ರಾಮದಲ್ಲಿ ಕಟ್ಟಡವೊಂದು ಕುಸಿದಿದೆ. ಒಬ್ಬ ಮಹಿಳೆಯನ್ನು ರಕ್ಷಿಸಲಾಗಿದೆ, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. 2-3 ಜನರು ಒಳಗೆ ಸಿಲುಕಿಕೊಂಡಿದ್ದಾರೆ. ತಜ್ಞರು ಇಲ್ಲಿದ್ದಾರೆ ಮತ್ತು ಮುಂದಿನ ಒಂದು ಅಥವಾ ಎರಡು ಗಂಟೆಗಳಲ್ಲಿ ನಾವು ಉಳಿದ ವ್ಯಕ್ತಿಗಳನ್ನು ಹೊರತರಲು ಸಾಧ್ಯವಾಗುತ್ತದೆ ಎಂದು ಭಾವಿಸುತ್ತೇವೆ ಎಂದು ಸೂರತ್ ಪೊಲೀಸ್ ಕಮಿಷನರ್ ಅನುಪಮ್ ಸಿಂಗ್ ಗಹ್ಲೌತ್ ಹೇಳಿದ್ದಾರೆ .
VIDEO | Rescue operations underway in Surat’s Pali village after a building collapsed there earlier today. More details awaited.
(Full video available on PTI Videos – https://t.co/n147TvqRQz) pic.twitter.com/QuLO78pBDE
— Press Trust of India (@PTI_News) July 6, 2024
ಈ ವರ್ಷದ ಮಾರ್ಚ್‌ನಲ್ಲಿ ಮೊರ್ಬಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ವೈದ್ಯಕೀಯ ಕಾಲೇಜು ಕಟ್ಟಡದ ಒಂದು ಭಾಗ ಕುಸಿದು ನಾಲ್ವರು ಕಾರ್ಮಿಕರು ಗಾಯಗೊಂಡಿದ್ದರು. ಏಳು ಗಂಟೆಗಳ ಕಾಲ ಅವಶೇಷಗಳಡಿ ಸಿಲುಕಿದ್ದ ಮತ್ತೊಬ್ಬ ಕಾರ್ಮಿಕನನ್ನು ರಕ್ಷಿಸಲಾಗಿತ್ತು. ಮಾರ್ಚ್ 9 ರಂದು ರಾತ್ರಿ 8:00 ರ ಸುಮಾರಿಗೆ ಹೊಸ ಕಟ್ಟಡದ ಮೊದಲ ಮಹಡಿಯಲ್ಲಿ ಕಾರ್ಮಿಕರು ಮೇಲ್ಛಾವಣಿಯನ್ನು ತುಂಬುವ ಕೆಲಸ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ದೆಹಲಿಯಲ್ಲಿ ಜೂನ್ 30 ರಂದು ದೆಹಲಿಯ ಹರ್ಷ್ ವಿಹಾರ್ ಪ್ರದೇಶದಲ್ಲಿ ಹಳೆಯ ಕಟ್ಟಡದ ಟೆರೇಸ್‌ನ ಒಂದು ಭಾಗವು ಕುಸಿದು ಆರು ವರ್ಷದ ಬಾಲಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ. ಪಿಟಿಐ ವರದಿಯ ಪ್ರಕಾರ, ಹುಡುಗ ಟೆರೇಸ್ ಮೇಲೆ ಆಡುತ್ತಿದ್ದಾಗ ಘಟನೆ ಸಂಜೆ ಸಂಭವಿಸಿದೆ. ಆತನಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಕಟ್ಟಡದ ಮಾಲೀಕ ರಾಮ್‌ಜಿ ಲಾಲ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತ ತಲೆಮರೆಸಿಕೊಂಡಿದ್ದಾನೆ.
“ಸಂಜೆ 5 ಗಂಟೆಯ ಸುಮಾರಿಗೆ, ಪ್ರತಾಪ್ ನಗರ ಪ್ರದೇಶದಲ್ಲಿ ಕಟ್ಟಡ ಕುಸಿತದ ಬಗ್ಗೆ ನಮಗೆ ಕರೆ ಬಂದಿತು. ಕರೆ ಮಾಡಿದವರು, ಸಂತೋಷ್ ಕುಮಾರ್ ಅವರು ತಮ್ಮ ಮಗ ಸಾವನ್ನಪ್ಪಿದ್ದಾರೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ” ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕೆ ಹೇಳಿದ್ದಾರೆ.
ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:24 pm, Sat, 6 July 24