ಜಮ್ಮು-ಕಾಶ್ಮೀರದಲ್ಲಿ ನಾಲ್ವರು ಉಗ್ರರ ಎನ್‌ಕೌಂಟರ್
ಶ್ರೀನಗರ: ಶೋಪಿಯಾನ್ ಜಿಲ್ಲೆಯ ಪಿಂಜೂರಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್‌ನಲ್ಲಿ 24 ಗಂಟೆಯಲ್ಲಿ 9 ಉಗ್ರರ ಹತ್ಯೆಯಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ. ಇಂದು ಬೆಳಿಗ್ಗೆ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ತಿಳಿದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತೀಕಾರ ತೀರಿಸಿಕೊಳ್ಳಲು ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಈ ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀನಗರ: ಶೋಪಿಯಾನ್ ಜಿಲ್ಲೆಯ ಪಿಂಜೂರಾ ಪ್ರದೇಶದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ನಾಲ್ವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಶೋಪಿಯಾನ್‌ನಲ್ಲಿ 24 ಗಂಟೆಯಲ್ಲಿ 9 ಉಗ್ರರ ಹತ್ಯೆಯಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.
ಇಂದು ಬೆಳಿಗ್ಗೆ ಭಯೋತ್ಪಾದಕರು ಇರುವ ಬಗ್ಗೆ ಮಾಹಿತಿ ತಿಳಿದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಪ್ರತೀಕಾರ ತೀರಿಸಿಕೊಳ್ಳಲು ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ನಂತರ ಈ ಕಾರ್ಯಾಚರಣೆ ಎನ್‌ಕೌಂಟರ್ ಆಗಿ ಮಾರ್ಪಟ್ಟಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Published On - 10:32 am, Mon, 8 June 20