ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ

ಗಾಯಗೊಂಡ ಕೆಲಸಗಾರನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಸ್ಫೋಟದ ನಂತರ ಭಯಂಕರ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ನಂದಿಸಲಾಗಿದೆ.

ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; 4 ಮಂದಿ ಸಾವು, ಒಬ್ಬನಿಗೆ ಗಂಭೀರ ಗಾಯ
ಕೆಮಿಕಲ್​ ಕಾರ್ಖಾನೆಯಲ್ಲಿ ದಟ್ಟನೆಯ ಹೊಗೆ ಆವರಿಸಿರುವುದು
Follow us
|

Updated on: Mar 20, 2021 | 3:29 PM

ಮುಂಬೈ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅವಳಿ ಸ್ಫೋಟವುಂಟಾಗಿ ನಾಲ್ವರು ಮೃತಪಟ್ಟಿದ್ದು, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಮುಂಜಾನೆ 9.15ರ ಹೊತ್ತಿಗೆ ದುರಂತ ನಡೆದಿದ್ದು, ಕಾರ್ಖಾನೆಯಲ್ಲಿ ಸಿಲುಕಿದ್ದ 40 ಜನರನ್ನು ಸುರಕ್ಷಿತವಾಗಿ ಹೊರಕರೆತರಲಾಗಿದೆ.

ಲೋಟೆ-ಪರಶುರಾಮ್ ಎಂಐಡಿಸಿ ಸಂಕೀರ್ಣದಲ್ಲಿರುವ ಘರ್ದಾ ಕೆಮಿಕಲ್​ ಲಿಮಿಟೆಡ್​ನಲ್ಲಿ ಎರಡು ಬಾರಿ ಸ್ಫೋಟವಾಗಿದೆ. ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ, ಬೆಂಕಿಯನ್ನು ನಂದಿಸಿದ್ದಾರೆ. ಒಳಗೆ ಸಿಲುಕಿದ್ದ ಉದ್ಯೋಗಿಗಳ ರಕ್ಷಣೆಯನ್ನೂ ಮಾಡಿದ್ದಾರೆ. ಆದರೂ ನಾಲ್ವರು ಮೃತಪಟ್ಟಿದ್ದು, ಇನ್ನೊಬ್ಬಾತ ಗಂಭೀರವಾಗಿ ಗಾಯಗೊಂಡಿದ್ದಾಗಿ ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಕೆಲಸಗಾರನನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತದೇಹಗಳನ್ನು ಪೋಸ್ಟ್​ಮಾರ್ಟಮ್​​ಗಾಗಿ ಕಳಿಸಲಾಗಿದೆ. ಸ್ಫೋಟದ ನಂತರ ಭಯಂಕರ ಬೆಂಕಿ ಕಾಣಿಸಿಕೊಂಡಿತ್ತು. ಅದನ್ನು ನಂದಿಸಲಾಗಿದೆ. ಸ್ಥಳದಲ್ಲಿ ಇನ್ನೂ ಕಾರ್ಯಾಚರಣೆ ನಡೆಯುತ್ತಿದೆ ಎಂದೂ ಮಾಹಿತಿ ನೀಡಿದ್ದಾರೆ.

ಇಂಥ ಸ್ಫೋಟಗಳು, ವಿಷಾನಿಲ ಸೋರಿಕೆ ದುರಂತಗಳು ಆಗಾಗ ಮರುಕಳಿಸುತ್ತಿರುತ್ತವೆ. ಕಳೆದ ವರ್ಷ ಮೇ ತಿಂಗಳಲ್ಲಿ ಆಂಧ್ರಪ್ರದೇಶದ ವಿಶಾಖಪಟ್ಟಣಂದಲ್ಲಿರುವ ಎಲ್​ಜಿ ಪಾಲಿಮರ್ಸ್​​ನಲ್ಲಿ ವಿಷ ಅನಿಲ ಸೋರಿಕೆಯಾಗಿ ಸುಮಾರು 11 ಮಂದಿ ಮೃತಪಟ್ಟಿದ್ದರು. ನೂರಾರು ಮಂದಿಯನ್ನು ಆಸ್ಪತ್ರೆಗೆ ದಾಖಲುಮಾಡಲಾಗಿತ್ತು. ಅಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್​ಮೋಹನ್​ ರೆಡ್ಡಿ ಮೃತರ ಕುಟುಂಬಗಳಿಗೆ ತಲಾ 1 ಕೋಟಿ ರೂ.ಪರಿಹಾರ ನೀಡಿದ್ದರು.

ಇದನ್ನೂ ಓದಿ: Ripped Jeans;ತೀರತ್​ ಸಿಂಗ್ ರಾವತ್ ಅವರಿಗೊಂದು ಪತ್ರ: ಹೆಣ್ಣುಮಕ್ಕಳ ಆರೋಗ್ಯ ಮತ್ತು ಶಿಕ್ಷಣ ಸಮಾನತೆಯ ಬಗ್ಗೆ ಯೋಚಿಸಬೇಕೆನ್ನಿಸುತ್ತಿಲ್ಲವೆ?

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!