AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 14 ಸರ್ಕಾರಿ ವೈದ್ಯರು ರಾಜೀನಾಮೆ

ಜಂಟಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ 14 ವೈದ್ಯರಲ್ಲಿ 11 ಮಂದಿ ಬುಧವಾರ ಸಂಜೆ ಉನ್ನಾವ್ ನ ಮುಖ್ಯ ವೈದ್ಯಾಧಿಕಾರಿ ಕಚೇರಿಗೆ ಭೇಟಿ ನೀಡಿ ಪತ್ರವನ್ನು ತಮ್ಮ ಡೆಪ್ಯುಟಿ ವೈದ್ಯಾಧಿಕಾರಿಗೆ ಹಸ್ತಾಂತರಿಸಿದರು

ಉತ್ತರ ಪ್ರದೇಶದಲ್ಲಿ ಕೊವಿಡ್ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ 14 ಸರ್ಕಾರಿ ವೈದ್ಯರು ರಾಜೀನಾಮೆ
ಸಾಂಕೇತಿಕ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 13, 2021 | 6:21 PM

Share

ಲಕ್ನೊ: ಉತ್ತರ ಪ್ರದೇಶದ ರಾಜಧಾನಿ ಲಕ್ನೊದಿಂದ 40ಕಿಮಿ ದೂರದಲ್ಲಿರುವ ಉನ್ನಾವ್ ಜಿಲ್ಲೆಯ ಗ್ರಾಮೀಣ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ 14 ಸರ್ಕಾರಿ ವೈದ್ಯರು ಗುರುವಾರ ರಾಜೀನಾಮೆ ನೀಡಿದ್ದಾರೆ. ಪ್ರಸ್ತುತ ಜಿಲ್ಲೆಯಲ್ಲಿ ಕೊವಿಡ್ ಪ್ರಕರಣ ಹೆಚ್ಚಳಕ್ಕೆ ನಮ್ಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ಆರೋಪಿಸಿ ವೈದ್ಯರು ರಾಜೀನಾಮೆ ನೀಡಿದ್ದಾರೆ.  ಉನ್ನಾವ್ ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉಸ್ತುವಾರಿಯನ್ನು ವೈದ್ಯರು ವಹಿಸಿಕೊಂಡಿದ್ದಾರೆ. ಈ ಎರಡೂ ಸ್ಥಳಗಳು ಗ್ರಾಮೀಣ ಆಸ್ಪತ್ರೆಗಳಾಗಿವೆ. ಇವು ಹಳ್ಳಿಯ ಜನರಿಗೆ ಆರೋಗ್ಯ ವ್ಯವಸ್ಥೆ ಒದಗಿಸುತ್ತವೆ.

ಜಂಟಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ 14 ವೈದ್ಯರಲ್ಲಿ 11 ಮಂದಿ ಬುಧವಾರ ಸಂಜೆ ಉನ್ನಾವ್ ನ ಮುಖ್ಯ ವೈದ್ಯಾಧಿಕಾರಿ ಕಚೇರಿಗೆ ಭೇಟಿ ನೀಡಿ ಪತ್ರವನ್ನು ತಮ್ಮ ಡೆಪ್ಯುಟಿ ವೈದ್ಯಾಧಿಕಾರಿಗೆ ಹಸ್ತಾಂತರಿಸಿದರು. ಸಾಂಕ್ರಾಮಿಕ ರೋಗ ನಿಯಂತ್ರಿಸಲು ಶ್ರಮವಹಿಸಿದ್ದರೂ ಕೊವಿಡ್ ಪ್ರಕರಣದ ಹೆಚ್ಚಳಕ್ಕೆ ವೈದ್ಯರನ್ನೇ ದೂಷಿಸಲಾಗಿದೆ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಉನ್ನಾವ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಇಂದು ಮಧ್ಯಾಹ್ನ ಹೊಸ ಹೇಳಿಕೆ ನೀಡಿದ್ದು ಸಮಸ್ಯೆ ಪರಿಹರಿಸಲಾಗಿದೆ ವೈದ್ಯರು ತಮ್ಮ ರಾಜೀನಾಮೆಯನ್ನು ಹಿಂದಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ನಾವು ನಿನ್ನೆ ಸಂಜೆ ಅವರೊಂದಿಗೆ ಮಾತನಾಡಿದ್ದೆವು ಮತ್ತು ಅವರು ರಾತ್ರಿಯೇ ತಮ್ಮ ನಿರ್ಧಾರವನ್ನು ಹಿಂದಕ್ಕೆ ತೆಗೆದುಕೊಂಡರು. ಅವರು ಇಂದು ನನ್ನೊಂದಿಗೆ ಭೇಟಿಯಾದರು. ನಾನು ಅವರ ಸಮಸ್ಯೆಗಳನ್ನು ಆಲಿಸಿ ಅವರಿಗೆ ಪರಿಹಾರಗಳನ್ನು ನೀಡಿದ್ದೇನೆ. ನಾವು ಸೌಹಾರ್ದಯುತವಾಗಿ ಮಾತನಾಡಿದ್ದು ಇದು ಆಂತರಿಕ ವಿಷಯವಾಗಿದೆ “ಎಂದು ಜಿಲ್ಲಾಧಿಕಾರಿ ರವೀಂದ್ರ ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಮ್ಮ ತಂಡಗಳು ಇಡೀ ದಿನ ಮಾಡುತ್ತಿರುವುದು ಸಮಸ್ಯೆಯಾಗಿದೆ, ಆದರೆ ನಾವು ‘ಕೆಲಸ ಮಾಡುತ್ತಿಲ್ಲ’ ಎಂದು ಬಿಂಬಿಸಲಾಗುತ್ತಿದೆ. ಜಿಲ್ಲಾಧಿಕಾರಿಗಳು , ಇತರ ಅಧಿಕಾರಿಗಳು, ಎಸ್‌ಡಿಎಂ ಮತ್ತು ತಹಶೀಲ್ದಾರ್ ಕೂಡ ನಮ್ಮನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಅವಲೋಕನ ಸಭೆಗಳನ್ನು ನಡೆಸುತ್ತಿದ್ದಾರೆ. ನಮ್ಮ ತಂಡಗಳು ಮಧ್ಯಾಹ್ನ ಹೊರಟು ಕೊವಿಡ್ ಪಾಸಿಟಿವ್ ರೋಗಿಗಳನ್ನು ಪತ್ತೆಹಚ್ಚಿ ಮತ್ತು ಪ್ರತ್ಯೇಕಿಸಿ, ಸ್ಯಾಂಪಲಿಂಗ್ ಮಾಡಿ, ಔಷಧಿಗಳನ್ನು ವಿತರಿಸಿದ ನಂತರ ಎಸ್‌ಡಿಎಂನಿಂದ ಅವಲೋಕನ ಸಭೆಗಳಿಗೆ ಬರಲು  ಕರೆಯುತ್ತಾರೆ. ಸುಮಾರು30 ಕಿ.ಮೀ ಪ್ರಯಾಣಿಸಲು ನಾವು ಬದ್ಧರಾಗಿದ್ದೇವೆ. ನಾವು ಕೆಲಸ ಮಾಡಿದ್ದೇವೆ ಎಂದು ನಾವು ಸಾಬೀತುಪಡಿಸಬೇಕು. ನಾವು ಕೆಲಸ ಮಾಡದ ಕಾರಣ ಕೋವಿಡ್ ಸೋಂಕು ಹರಡುತ್ತಿದೆ ಎಂದು ದೂರಲಾಗಿದ ಎಂದು ವೈದ್ಯರಲ್ಲಿ ಒಬ್ಬರಾದ ಡಾ.ಶರದ್ ವೈಶ್ಯ ಹೇಳಿರುವುದಾಗಿ ಎನ್​ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: Unnao: ಉತ್ತರ ಪ್ರದೇಶದ ಉನ್ನಾವ್​ನ ಗಂಗಾ ನದಿ ತೀರದಲ್ಲಿ ಹೂತಿಟ್ಟ ಮೃತದೇಹಗಳು ಪತ್ತೆ

Published On - 6:20 pm, Thu, 13 May 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ