ಬಿಹಾರದ ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆ ಕುಸಿತ; ಒಂದೇ ವಾರದಲ್ಲಿ ಕುಸಿದದ್ದು ನಾಲ್ಕು ಸೇತುವೆಗಳು

ಕಂಕೈ ನದಿಯನ್ನು ಮಹಾನಂದಾಗೆ ಸಂಪರ್ಕಿಸುವ ಸಣ್ಣ ಉಪನದಿಯಾದ ಮಡಿಯ ಮೇಲೆ 2011 ರಲ್ಲಿ ಸೇತುವೆಯನ್ನು ನಿರ್ಮಿಸಲಾಗಿದೆ. ನೇಪಾಳದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯು ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಗೆ ಕಾರಣವಾಗಿದೆ. ಸೇತುವೆಯ ಒಂದು ಕಂಬವು ಬಲವಾದ ಪ್ರವಾಹವನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಹಾಗಾಗಿ ಸೇತುವೆ ಕುಸಿದಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಿಹಾರದ ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆ ಕುಸಿತ; ಒಂದೇ ವಾರದಲ್ಲಿ ಕುಸಿದದ್ದು ನಾಲ್ಕು ಸೇತುವೆಗಳು
ಸೇತುವೆ ಕುಸಿತ
Follow us
ರಶ್ಮಿ ಕಲ್ಲಕಟ್ಟ
|

Updated on: Jun 27, 2024 | 5:18 PM

ಪಾಟ್ನಾ ಜೂನ್ 27: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದಿದ್ದು, ಇಲ್ಲಿ ಒಂದೇ ವಾರದಲ್ಲಿ ನಾಲ್ಕು ಸೇತುವೆಗಳು ಒಂದರ ಹಿಂದೆ ಒಂದರಂತೆ ಕುಸಿದಿವೆ. ಇಂದು (ಗುರುವಾರ) ಕಿಶನ್‌ಗಂಜ್ ಜಿಲ್ಲೆಯಲ್ಲಿ ಸೇತುವೆ ಕುಸಿದಿದೆ. ಕಂಕೈ ನದಿಯ ಉಪನದಿಗೆ ನಿರ್ಮಿಸಲಾಗಿರುವ 70 ಮೀಟರ್ ಸೇತುವೆ, ಬಹದ್ದೂರ್‌ಗಂಜ್ ಮತ್ತು ದಿಘಲ್‌ಬ್ಯಾಂಕ್ ಬ್ಲಾಕ್‌ಗಳನ್ನು ಸಂಪರ್ಕಿಸುತ್ತದೆ. ಈ ಸೇತುವೆ ಕುಸಿತವು ಎರಡು ಪಟ್ಟಣಗಳ ನಡುವಿನ ಸಂಪರ್ಕದ ಮೇಲೆ ಪರಿಣಾಮ ಬೀರಿದೆ. ಆದಾಗ್ಯೂ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.

ನದಿಯ ನೀರಿನ ಮಟ್ಟ ಹೆಚ್ಚಾಗಿದೆ. ಬಲವಾದ ಪ್ರವಾಹದಿಂದಾಗಿ ಸೇತುವೆಯ ಮಧ್ಯದಲ್ಲಿ ಹಲವಾರು ಪಿಲ್ಲರ್‌ಗಳು ಸುಮಾರು ಒಂದೂವರೆ ಅಡಿಗಳಷ್ಟು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ ಸೇತುವೆಯ ಮಧ್ಯ ಭಾಗವು ಜೋರಾಗಿ ಮತ್ತು ವೇಗವಾಗಿ ಹರಿಯುವ ನದಿಯನ್ನು ಬಹುತೇಕ ಸ್ಪರ್ಶಿಸುವುದನ್ನು ತೋರಿಸಿದ್ದು, ಅದು ಯಾವಾಗ ಬೇಕಾದರೂ ಕುಸಿದು ಬೀಳಬಹುದೆಂಬ ಆಂತಕವಿತ್ತು.

ಘಟನೆಯ ಬಗ್ಗೆ ಮಾಹಿತಿ ಪಡೆದ ಬಹದ್ದೂರ್‌ಗಂಜ್ ಪೊಲೀಸ್ ಠಾಣೆಯ ಮುಖ್ಯಸ್ಥ ಅಭಿನವ್ ಪರಾಸರ್ ಅವರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ತಲುಪಿದ್ದು ತಕ್ಷಣವೇ ಎರಡೂ ತುದಿಗಳಲ್ಲಿ ಪ್ರದೇಶವನ್ನು ಬ್ಯಾರಿಕೇಡ್ ಮಾಡಿ ವಾಹನ ಸಂಚಾರವನ್ನು ನಿಲ್ಲಿಸಿದರು.

ಸುಮಾರು ಆರು ವರ್ಷಗಳ ಹಿಂದೆ ಸೇತುವೆ ನಿರ್ಮಿಸಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಸ್ತೆ ಇಲಾಖೆ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.

ಜಿಲ್ಲಾ ಮ್ಯಾಜಿಸ್ಟ್ರೇಟ್ ತುಷಾರ್ ಸಿಂಗ್ಲಾ ಮಾತನಾಡಿ, ಕಂಕೈ ನದಿಯನ್ನು ಮಹಾನಂದಾಗೆ ಸಂಪರ್ಕಿಸುವ ಸಣ್ಣ ಉಪನದಿಯಾದ ಮಡಿಯ ಮೇಲೆ 2011 ರಲ್ಲಿ ಸೇತುವೆಯನ್ನು ನಿರ್ಮಿಸಲಾಗಿದೆ. “ನೇಪಾಳದ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯು ನೀರಿನ ಮಟ್ಟದಲ್ಲಿ ಹಠಾತ್ ಏರಿಕೆಗೆ ಕಾರಣವಾಗಿದೆ. ಸೇತುವೆಯ ಒಂದು ಕಂಬವು ಬಲವಾದ ಪ್ರವಾಹವನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.  ಕಳೆದ ವಾರ ಸಿವಾನ್ ಮತ್ತು ಅರಾರಿಯಾ ಜಿಲ್ಲೆಗಳಲ್ಲಿ ಸೇತುವೆ ಕುಸಿತದ ಮೂರು ಘಟನೆಗಳು ವರದಿಯಾಗಿವೆ.

ಇದನ್ನೂ ಓದಿ: LK Advani: ಬಿಜೆಪಿ ಹಿರಿಯ ನಾಯಕ ಎಲ್​ಕೆ ಅಡ್ವಾಣಿ ಆರೋಗ್ಯ ಸ್ಥಿರ; ಏಮ್ಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಜೂನ್ 19 ರಂದು, ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬಕ್ರಾ ನದಿಯ ಮೇಲೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಒಂದು ಭಾಗವು ಉದ್ಘಾಟನೆಗೊಳ್ಳುವ ಮೊದಲೇ ಕುಸಿದಿದೆ. ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ ಆಗಿತ್ತು ಇದು. ಕಳೆದ ಕೆಲವು ವರ್ಷಗಳಿಂದ ರಾಜ್ಯದ ನಾನಾ ಭಾಗಗಳಲ್ಲಿ ಇದೇ ರೀತಿಯ ಹಲವಾರು ಘಟನೆಗಳು ನಡೆದಿದ್ದು, ರಾಜ್ಯದಲ್ಲಿನ ಸಾರ್ವಜನಿಕ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಪ್ರಶ್ನೆಗಳು ಮೂಡುತ್ತಿವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು