ಕೇರಳದಲ್ಲಿ ಕೋವಿಡ್-19 ಲಸಿಕೆ ಉಚಿತ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 13, 2020 | 12:47 PM

ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು ಎಂದು ಹೇಳಿರುವ ಪಿಣರಾಯಿ ವಿಜಯನ್, ಇದು ಸರ್ಕಾರದ ನಿಲುವು ಎಂದು ಹೇಳಿದ್ದಾರೆ.

ಕೇರಳದಲ್ಲಿ ಕೋವಿಡ್-19 ಲಸಿಕೆ ಉಚಿತ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ
ಪಿಣರಾಯಿ ವಿಜಯನ್
Follow us on

ತಿರುವನಂತಪುರಂ: ಕೇರಳದಲ್ಲಿ ಎಲ್ಲರಿಗೂ ಉಚಿತವಾಗಿ ಕೋವಿಡ್-19 ಲಸಿಕೆ ಲಭ್ಯವಾಗುವಂತೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ. ಕಣ್ಣೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಪಿಣರಾಯಿ ವಿಜಯನ್ ಕೋವಿಡ್ ಲಸಿಕೆ ಉಚಿತವಾಗಿ ನೀಡಲಾಗುವುದು. ಇದು ಸರ್ಕಾರದ ನಿಲುವು ಎಂದು ಹೇಳಿದ್ದಾರೆ. ತಮಿಳುನಾಡು ಮತ್ತು ಮಧ್ಯಪ್ರದೇಶ ಈಗಾಗಲೇ ಉಚಿತ ಕೋವಿಡ್ ಲಸಿಕೆ ನೀಡುವುದಾಗಿ ಘೋಷಿಸಿವೆ.

ಭಾರತ್ ಬಯೋಟೆಕ್, ಸೆರಂ ಇನ್ಸಿಟ್ಯೂಟ್ ಆಫ್ ಇಂಡಿಯಾ ಮತ್ತು ಫೈಜರ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವಿಡ್ ಲಸಿಕೆಗಳು ಭಾರತದ ಔಷಧ ನಿಯಂತ್ರಣ ಸಂಸ್ಥೆಯ ಪರಿಗಣನೆಯಲ್ಲಿದೆ. ದೇಶದಲ್ಲಿ 5 ಲಸಿಕೆಗಳು ಕ್ಲಿನಿಕಲ್ ಟ್ರಯಲ್​ನ ವಿವಿಧ ಹಂತದಲ್ಲಿವೆ.

ಆದಾಗ್ಯೂ, ಕೇಂದ್ರ ಸರ್ಕಾರ ಕೇರಳಕ್ಕೆ ಎಷ್ಟು ಪ್ರಮಾಣದಲ್ಲಿ ಲಸಿಕೆ ನೀಡಲಿದೆ ಎಂಬುದು ತಿಳಿದಿಲ್ಲ ಎಂದು ಪಿಣರಾಯಿ ಹೇಳಿದ್ದಾರೆ. ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬರುತ್ತಿರುವುದು ಸಮಾಧಾನದ ಸಂಗತಿ. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಎರಡನೇ ಹಂತದ ಮತದಾನ ಮುಗಿಸಿದೆ. ಈ ವೇಳೆ ಕೋವಿಡ್ ಪ್ರಕರಣಗಳ ಎಷ್ಟು ಜಾಸ್ತಿಯಾಗಿವೆ ಎಂಬುದು ಮುಂದಿನ ದಿನಗಳಲ್ಲಿ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಕೇರಳದಲ್ಲಿ ಶನಿವಾರ 5,949 ಹೊಸ ಪ್ರಕರಣಗಳು ವರದಿಯಾಗಿದ್ದು 32 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೆ 6.64 ಲಕ್ಷ ಮಂದಿಗೆ ಸೋಂಕು ತಗಲಿದ್ದು ಸಾವಿನ ಸಂಖ್ಯೆ 2,594 ತಲುಪಿದೆ.

ಮತ್ತೊಂದು ಹೊಸ ಸೋಂಕು: ಕೇರಳದಲ್ಲಿ ಪತ್ತೆಯಾಯ್ತು ‘ಆಫ್ರಿಕಾ’ ಮಲೇರಿಯಾ