ಉಚಿತ ವಿದ್ಯುತ್, ಶಿಕ್ಷಣ; ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸುನೀತಾ ಕೇಜ್ರಿವಾಲ್ ಚಾಲನೆ

ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ದೆಹಲಿ, ಹರಿಯಾಣ ಮತ್ತು ಗುಜರಾತ್‌ನಲ್ಲಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಸಕ್ರಿಯವಾಗಿ ಪ್ರಚಾರ ಮಾಡಿದ್ದರು. ಇದೀಗ ಹರಿಯಾಣದ ವಿಧಾನಸಭಾ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ.

ಉಚಿತ ವಿದ್ಯುತ್, ಶಿಕ್ಷಣ; ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಸುನೀತಾ ಕೇಜ್ರಿವಾಲ್ ಚಾಲನೆ
ಸುನೀತಾ ಕೇಜ್ರಿವಾಲ್
Follow us
ಸುಷ್ಮಾ ಚಕ್ರೆ
|

Updated on: Jul 20, 2024 | 6:44 PM

ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರ್ಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಒಳಪಡಲಿರುವ ರಾಜ್ಯಕ್ಕೆ ದೆಹಲಿ ಮುಖ್ಯಮಂತ್ರಿಯ ಭರವಸೆಯನ್ನು ಘೋಷಿಸಿದ್ದಾರೆ. ಪತಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಹರಿಯಾಣದ ಪಂಚಕುಲದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್ “ಕೇಜ್ರಿವಾಲ್ ಕಿ ಗ್ಯಾರಂಟಿ” ಎಂದು ಘೋಷಿಸಿದರು. ಆಕೆಯೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಇದ್ದರು. ಎಎಪಿ ಉಚಿತ ಮತ್ತು 24 ಗಂಟೆಗಳ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಉಚಿತ ಶಿಕ್ಷಣ, ಎಲ್ಲಾ ತಾಯಂದಿರು ಮತ್ತು ಸಹೋದರಿಯರಿಗೆ ತಿಂಗಳಿಗೆ 1,000 ರೂ., ಪ್ರತಿ ಯುವಕನಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ.

ಇದನ್ನೂ ಓದಿ: ‘ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಸಿಎಂ ಪ್ರಸ್ತುತ ಅಬಕಾರಿ ನೀತಿ ಸಂಬಂಧಿತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗಾಗಲೇ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎಎಪಿ ಹೇಳಿದೆ. ಈ ವರ್ಷದ ಕೊನೆಯಲ್ಲಿ ಹರಿಯಾಣ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪ್ರಬಲವಾಗಿ ಹೋರಾಡಲಿದೆ ಎಂದು ಆಪ್ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು