ನವದೆಹಲಿ: ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಇಂದು ಹರ್ಯಾಣದಲ್ಲಿ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಒಳಪಡಲಿರುವ ರಾಜ್ಯಕ್ಕೆ ದೆಹಲಿ ಮುಖ್ಯಮಂತ್ರಿಯ ಭರವಸೆಯನ್ನು ಘೋಷಿಸಿದ್ದಾರೆ. ಪತಿ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವುದರಿಂದ ಅವರ ಪತ್ನಿ ಹರಿಯಾಣದಲ್ಲಿ ಆಮ್ ಆದ್ಮಿ ಪಕ್ಷದ ಗೆಲುವಿನ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
ಹರಿಯಾಣದ ಪಂಚಕುಲದಲ್ಲಿ ಇಂದು ನಡೆದ ಸಭೆಯಲ್ಲಿ ಮಾತನಾಡಿದ ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್ “ಕೇಜ್ರಿವಾಲ್ ಕಿ ಗ್ಯಾರಂಟಿ” ಎಂದು ಘೋಷಿಸಿದರು. ಆಕೆಯೊಂದಿಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಎಎಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಸಂದೀಪ್ ಪಾಠಕ್ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಇದ್ದರು. ಎಎಪಿ ಉಚಿತ ಮತ್ತು 24 ಗಂಟೆಗಳ ವಿದ್ಯುತ್, ಉಚಿತ ವೈದ್ಯಕೀಯ ಚಿಕಿತ್ಸೆ, ಉಚಿತ ಶಿಕ್ಷಣ, ಎಲ್ಲಾ ತಾಯಂದಿರು ಮತ್ತು ಸಹೋದರಿಯರಿಗೆ ತಿಂಗಳಿಗೆ 1,000 ರೂ., ಪ್ರತಿ ಯುವಕನಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದೆ.
#WATCH | Panchkula: Delhi CM and AAP national convenor Arvind Kejriwal’s wife Sunita Kejriwal says, “…No one could have imagined it even in the dreams that this boy (Arvind Kejriwal) will rule the country’s capital. It is not a small thing; it is no less than a miracle…I feel… pic.twitter.com/VHS0k9GHSz
— ANI (@ANI) July 20, 2024
ಇದನ್ನೂ ಓದಿ: ‘ಸಿಎಂಗೆ ಮನೆಯಲ್ಲಿ ಮಾಡಿದ ಅಡುಗೆಯನ್ನೇ ಬಡಿಸಲಾಗಿತ್ತು; ಕೇಜ್ರಿವಾಲ್ ಆರೋಗ್ಯದ ಕುರಿತು ದೆಹಲಿ ಎಲ್‌ಜಿ ಪತ್ರ
ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಸಿಎಂ ಪ್ರಸ್ತುತ ಅಬಕಾರಿ ನೀತಿ ಸಂಬಂಧಿತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈಗಾಗಲೇ ಹರಿಯಾಣದ ಎಲ್ಲಾ 90 ವಿಧಾನಸಭಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಎಎಪಿ ಹೇಳಿದೆ. ಈ ವರ್ಷದ ಕೊನೆಯಲ್ಲಿ ಹರಿಯಾಣ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಆಪ್ ಪ್ರಬಲವಾಗಿ ಹೋರಾಡಲಿದೆ ಎಂದು ಆಪ್ ನಾಯಕ ಸಂಜಯ್ ಸಿಂಗ್ ಹೇಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ