ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ತಮಿಳುನಾಡು ವಿದ್ಯಾರ್ಥಿಗಳಿಗೆ 2 ಜಿಬಿ ಡಾಟಾ ಉಚಿತ
ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ಉಚಿತವಾಗಿ 2 ಜಿಬಿ ಡಾಟಾ ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.
ತಮಿಳುನಾಡು: ಏಪ್ರಿಲ್‌ನಲ್ಲಿ ಪರೀಕ್ಷೆಗಳು ನಡೆಯಲಿರುವ ಹಿನ್ನೆಲೆಯಲ್ಲಿ ಆನ್‌ಲೈನ್ ಕ್ಲಾಸ್‌ಗೆ ಅನುಕೂಲವಾಗಲು ಪ್ರತಿನಿತ್ಯ ವಿದ್ಯಾರ್ಥಿಗಳಿಗೆ ಉಚಿತವಾಗಿ 2 ಜಿಬಿ ಡಾಟಾ ನೀಡಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ. 4 ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್ ನೀಡಲಾಗುತ್ತದೆ ಎಂದು ಘೋಷಿಸಿದೆ.
ಮಹಾಮಾರಿ ಕೊರೊನಾದಿಂದಾಗಿ ರಾಜ್ಯಾದ್ಯಂತ ಲಾಕ್ಡೌನ್ ವಿಧಿಸಲಾಗಿತ್ತು. ಈ ವೇಳೆ ಜನ ಕೆಲಸ ಕಳೆದುಕೊಂಡು ಬಹಳಷ್ಟು ಸಂಕಷ್ಟಗಳನ್ನು ಎದುರಿಸಿದ್ದರು. ಸದ್ಯ ನಿಧಾನವಾಗಿ ಆ ಸಂಕಷ್ಟಗಳಿಂದ ಹೊರಬರುತ್ತಿದ್ದಾರೆ. ಆದರೂ ಜನರಲ್ಲಿ ಸಮಸ್ಯೆಗಳು ಕಡಿಮೆಯಾಗಿಲ್ಲ. ಇದರ ನಡುವೆ ತಮ್ಮ ಮಕ್ಕಳ ಭವಿಷ್ಯ ಪೋಷಕರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ. ಇದರ ಜೊತೆಗೆ ಏಪ್ರಿಲ್‌ನಲ್ಲಿ ಪರೀಕ್ಷೆಗಳು ನಡೆಯಲಿವೆ. ಹೀಗಾಗಿ ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಆನ್‌ಲೈನ್ ಅಧ್ಯಯನವನ್ನು ಮುಂದುವರಿಸಲು ಅನುಕೂಲವಾಗುವಂತೆ ತಮಿಳುನಾಡು ಸರ್ಕಾರ ಉಚಿತ ಇಂಟರ್‌ನೆಟ್ ನೀಡಲು ಮುಂದಾಗಿದೆ.
ಈ ಯೋಜನೆಯ ಪ್ರಕಾರ, ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ಉಚಿತವಾಗಿ 2 ಜಿಬಿ ಡಾಟಾ ನೀಡಲಾಗುವುದು. ಇದರಿಂದ ಅವರು ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಮತ್ತು ಆನ್‌ಲೈನ್ ಅಧ್ಯಯನಕ್ಕೆ ಅಗತ್ಯವಾಗಿರುವಂಥದ್ದನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. 4 ತಿಂಗಳ ಕಾಲ ವಿದ್ಯಾರ್ಥಿಗಳಿಗೆ ಈ ಸೇವೆ ಲಭಿಸಲಿದೆ.
ಕುರುಕ್ಷೇತ್ರ ವಿಶ್ವ ವಿದ್ಯಾಲಯ ಆನ್‌ಲೈನ್ ಕ್ಲಾಸ್ ವೇಳೆ ಬ್ಲೂ ಫಿಲಂ ಪ್ರಸಾರ; ಬೆಚ್ಚಿಬಿದ್ದ ವಿದ್ಯಾರ್ಥಿನಿಯರು