Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ

ಸಾರ್ವಜನಿಕ ವಿತರಣಾ ವ್ಯವಸ್ಥೆ (ಪಿಡಿಎಸ್) ಅಡಿಯಲ್ಲಿ ಪಡಿತರ ಚೀಟಿ ಹೊಂದಿರುವವರಿಗೆ 5 ಕೆಜಿಯ ಉಚಿತ ಪಡಿತರ ಹಂಚಿಕೆ ಮುಂದಿನ 5 ವರ್ಷಗಳವರೆಗೆ ಮುಂದುವರಿಯುತ್ತದೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ ಎಂದು ಪ್ರಲ್ಹಾದ್ ಜೋಶಿ ಮಾಹಿತಿ ನೀಡಿದ್ದಾರೆ.

Pralhad Joshi: ಕೇಂದ್ರ ಸರ್ಕಾರದ ಉಚಿತ ಪಡಿತರ ಯೋಜನೆ ಮುಂದುವರಿಯಲಿದೆ; ಪ್ರಲ್ಹಾದ್ ಜೋಶಿ ಸ್ಪಷ್ಟನೆ
ಪ್ರಲ್ಹಾದ್ ಜೋಶಿ
Follow us
|

Updated on: Jul 11, 2024 | 6:47 PM

ನೊಯ್ಡಾ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ 2013 (NFSA) ಪ್ರಕಾರ, ಪ್ರತಿ ಮನೆಗೆ 5 ಕೆಜಿ ಧಾನ್ಯವನ್ನು ಉಚಿತವಾಗಿ ನೀಡಲಾಗುತ್ತದೆ. ಇದರಿಂದ ದೇಶಾದ್ಯಂತ 80 ಕೋಟಿ ಜನರಿಗೆ ಪ್ರಯೋಜನವಾಗಲಿದೆ ಎಂದು ಎಂದು ಅವರು ತಿಳಿಸಿದ್ದಾರೆ.

“ನಾವು 80 ಕೋಟಿ ಜನರಿಗೆ ಪ್ರತಿ ತಿಂಗಳು 5 ಕೆಜಿಗಳಷ್ಟು ಧಾನ್ಯವನ್ನು ನೀಡುತ್ತೇವೆ. ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು ಹಿಂದಿನ ಸರ್ಕಾರವು ‘ಗರೀಬಿ ಹಟಾವೋ’ ಮತ್ತು ‘ರೋಟಿ ಕಪ್ಡಾ ಮಕಾನ್’ ಎಂಬ ಘೋಷಣೆಗಳನ್ನು ಹೊಂದಿತ್ತು. ಆದರೆ ಈ ದೇಶದಲ್ಲಿ ಈಗಲೂ ಪ್ರತಿಯೊಬ್ಬ ವ್ಯಕ್ತಿಯು 5 ಕೆಜಿಗಳಷ್ಟು ಧಾನ್ಯವನ್ನು ಪಡೆಯುತ್ತಿದ್ದಾನೆ. ಮೋದಿ ಸರ್ಕಾರ ಕೈಗೊಂಡ ಐತಿಹಾಸಿಕ ನಿರ್ಧಾರದಿಂದಾಗಿ ದೇಶಾದ್ಯಂತ 13.5 ಕೋಟಿ ಜನರು ಬಡತನದಿಂದ ಹೊರಬರಲು ಸಾಧ್ಯವಾಗಿದೆ” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿ ಜನರ ಕೈಗೆ ಚೊಂಬು ಕೊಟ್ಟ ಕಾಂಗ್ರೆಸ್: ಪ್ರಲ್ಹಾದ್ ಜೋಶಿ ಕಿಡಿ

ಏಪ್ರಿಲ್ 2020ರಲ್ಲಿ ಆರ್ಥಿಕ ಬಿಕ್ಕಟ್ಟಿನ ಕಾರಣದಿಂದಾಗಿ ಕೇಂದ್ರ ಸರ್ಕಾರವು ಪ್ರತಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಆಹಾರ ಧಾನ್ಯಗಳನ್ನು ಸಬ್ಸಿಡಿ ಬೆಲೆಯಲ್ಲಿ ಒದಗಿಸಲು PMGKAY ಅನ್ನು ಪರಿಚಯಿಸಿತು. ಪಡಿತರ ಚೀಟಿದಾರರಿಗೆ 5 ಕೆಜಿ ಆಹಾರ ಧಾನ್ಯ ನೀಡಲು ಮೋದಿ ಸರ್ಕಾರ ನಿರ್ಧರಿಸಿದೆ. ಏಪ್ರಿಲ್ 2020ರಿಂದ ಪಡಿತರ ಚೀಟಿದಾರರು ತಲಾ 10 ಕೆಜಿ ಪಡಿತರವನ್ನು ಪಡೆಯುತ್ತಿದ್ದಾರೆ. NFSA ಅಡಿಯಲ್ಲಿ ಸಬ್ಸಿಡಿ ದರದಲ್ಲಿ 5 ಕೆಜಿ ಮತ್ತು PMGKAY ಅಡಿಯಲ್ಲಿ 5 ಕೆಜಿ ಉಚಿತವಾಗಿ ಪಡಿತರ ನೀಡಲಾಗುತ್ತಿದೆ. ಅದರ ನಂತರ, ಜನವರಿ 2022ರಿಂದ ಕೇಂದ್ರ ಸರ್ಕಾರವು ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಎಂದು ಬದಲಾಯಿಸಿತು. ಈ ಯೋಜನೆಯಡಿ ಪ್ರತಿ ಪಡಿತರ ಚೀಟಿದಾರರಿಗೆ 5 ಕೆಜಿ ಪಡಿತರವನ್ನು ಉಚಿತವಾಗಿ ನೀಡಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ