60 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ; ದೆಹಲಿಯಲ್ಲಿ ಕೇಜ್ರಿವಾಲ್ ಸಂಜೀವಿನಿ ಯೋಜನೆ ಘೋಷಣೆ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಈಗಾಗಲೇ ವಿಧಾನಸಭಾ ಚುನಾವಣೆಯ ಪ್ರಚಾರವನ್ನು ಬಿರುಸುಗೊಳಿಸಿದ್ದಾರೆ. ಈಗಾಗಲೇ ಹಲವು ಘೋಷಣೆಗಳನ್ನು ಮಾಡಿರುವ ಅರವಿಂದ್ ಕೇಜ್ರಿವಾಲ್ ಇದೀಗ ಹಿರಿಯ ನಾಗರಿಕರಿಗೆ ಮತ್ತೊಂದು ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆ ದೆಹಲಿಯ ಹಿರಿಯ ಜನರಿಗೆ ಕೈಗೆಟುಕುವ ಆರೋಗ್ಯವನ್ನು ಒದಗಿಸುವ ಗುರಿಯನ್ನು ಹೊಂದಿದೆ.

60 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆ; ದೆಹಲಿಯಲ್ಲಿ ಕೇಜ್ರಿವಾಲ್ ಸಂಜೀವಿನಿ ಯೋಜನೆ ಘೋಷಣೆ
Aap Leader Arvind Kejriwal
Follow us
ಸುಷ್ಮಾ ಚಕ್ರೆ
|

Updated on: Dec 18, 2024 | 3:45 PM

ನವದೆಹಲಿ: ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ದೆಹಲಿ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷ (ಎಎಪಿ) ಇಂದು ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವುದಾಗಿ ಘೋಷಿಸಿದೆ. ಈ ಮೂಲಕ ಮಹತ್ವದ ಪ್ರಕಟಣೆಯಲ್ಲಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ದೆಹಲಿಯಲ್ಲಿ 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲಾ ಹಿರಿಯ ನಾಗರಿಕರಿಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಘೋಷಿಸಿದ್ದಾರೆ.

ದೆಹಲಿಯಲ್ಲಿರುವ ನಮ್ಮ ಎಲ್ಲಾ ಹಿರಿಯ ನಿವಾಸಿಗಳಿಗೆ ಅರವಿಂದ್ ಕೇಜ್ರಿವಾಲ್ ಸರ್ಕಾರದಿಂದ ಇದು ಗ್ಯಾರಂಟಿ ಯೋಜನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇಂದು ನಾನು ಹಿರಿಯ ನಾಗರಿಕರಿಗಾಗಿ ಸಂಜೀವನಿ ಯೋಜನೆಯನ್ನು ಘೋಷಿಸುತ್ತಿದ್ದೇನೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತ ಆರೋಗ್ಯ ಸೇವೆ ಸಿಗಲಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಮಹಿಳೆಯರಿಗೆ ಆಮ್ ಆದ್ಮಿ ಗುಡ್ ನ್ಯೂಸ್; ತಿಂಗಳಿಗೆ 2,100 ರೂ. ನೀಡುವುದಾಗಿ ಕೇಜ್ರಿವಾಲ್ ಘೋಷಣೆ

“ಚಿಕಿತ್ಸೆಯ ವೆಚ್ಚದ ಮೇಲೆ ಯಾವುದೇ ಹೆಚ್ಚಿನ ಮಿತಿ ಇರುವುದಿಲ್ಲ. ಇದಕ್ಕೆ ನೋಂದಣಿ ಒಂದು ಅಥವಾ ಎರಡು ದಿನದಲ್ಲಿ ಪ್ರಾರಂಭವಾಗುತ್ತದೆ. ಆಪ್ ಕಾರ್ಯಕರ್ತರು ನೋಂದಣಿಗಾಗಿ ನಿಮ್ಮ ಮನೆಗೆ ಬರುತ್ತಾರೆ. ಅವರು ನಿಮಗೆ ಕಾರ್ಡ್ ನೀಡುತ್ತಾರೆ, ಅದನ್ನು ಸುರಕ್ಷಿತವಾಗಿ ಇರಿಸಿ. ನಾವು ಅಧಿಕಾರಕ್ಕೆ ಬಂದ ನಂತರ ಚುನಾವಣೆಯ ನಂತರ ಈ ನೀತಿಯನ್ನು ಜಾರಿಗೆ ತರಲಾಗುವುದು ಎಂದು ಕೇಜ್ರಿವಾಲ್ ಹೇಳಿದ್ದಾರೆ.

“ನಿಮ್ಮನ್ನು ನೋಡಿಕೊಳ್ಳುವುದು ಈಗ ನಮ್ಮ ಕರ್ತವ್ಯವಾಗಿದೆ. ನೀವು ದೇಶವನ್ನು ಮುನ್ನಡೆಸಲು ಶ್ರಮಿಸಿದ್ದೀರಿ” ಎಂದು ಹಿರಿಯ ನಾಗರಿಕರನ್ನು ಉದ್ದೇಶಿಸಿ ದೆಹಲಿಯ ಮಾಜಿ ಮುಖ್ಯಮಂತ್ರಿ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿ ವಿಧಾನಸಭೆಯ ಎಲ್ಲಾ 70 ಸ್ಥಾನಗಳಿಗೆ ಆಪ್ ತನ್ನ ಅಭ್ಯರ್ಥಿಗಳ ಹೆಸರನ್ನು ಬಿಡುಗಡೆ ಮಾಡಿದೆ. ಮುಂಬರುವ ಚುನಾವಣೆಯಲ್ಲಿ ತಮ್ಮ ನವದೆಹಲಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಕೇಜ್ರಿವಾಲ್ ಖಚಿತಪಡಿಸಿದ್ದು, ಮುಖ್ಯಮಂತ್ರಿ ಅತಿಶಿ ಅವರ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ದೆಹಲಿ ಚುನಾವಣೆ: 38 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಎಎಪಿ, ಕೇಜ್ರಿವಾಲ್, ಅತಿಶಿ ಎಲ್ಲಿಂದ ಸ್ಪರ್ಧೆ?

ಭಾರತ ಚುನಾವಣಾ ಆಯೋಗ (ಇಸಿಐ) ಈ ವಾರ ಪೂರ್ವಸಿದ್ಧತಾ ಸಭೆಗೆ ಕರೆದಿರುವುದರಿಂದ ಬಹು ನಿರೀಕ್ಷಿತ ದೆಹಲಿ ಚುನಾವಣೆಯ ದಿನಾಂಕಗಳು ಶೀಘ್ರದಲ್ಲೇ ಹೊರಬೀಳಬಹುದು. ಸಭೆಯ ನಂತರ ದಿನಾಂಕಗಳನ್ನು ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.

ಈ ಹಿಂದೆ, ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ಸರ್ಕಾರದ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಯನ್ನು ಘೋಷಿಸಿದ್ದರು. ಅವರ ಪಕ್ಷವು ಅಧಿಕಾರಕ್ಕೆ ಬಂದರೆ ಮಾಸಿಕ ಸಹಾಯವನ್ನು 1,000 ರೂ.ನಿಂದ 2,100 ರೂ.ಗೆ ಹೆಚ್ಚಿಸುವುದಾಗಿ ಭರವಸೆ ನೀಡಿದ್ದರು.

2020ರ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ದೆಹಲಿಯ 70 ಸ್ಥಾನಗಳಲ್ಲಿ 62 ಸ್ಥಾನಗಳನ್ನು ಪಡೆದುಕೊಂಡಿತು. ಈ ಮೂಲಕ ರಾಜಧಾನಿಯ ರಾಜಕೀಯದಲ್ಲಿ ತನ್ನ ಪ್ರಾಬಲ್ಯವನ್ನು ಗಟ್ಟಿಗೊಳಿಸಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್