Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್

ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ.

Bomb Threat: ವಿಧಾನಸಭಾ ಸ್ಪೀಕರ್​ಗೆ ಬಾಂಬ್ ಬೆದರಿಕೆ, ಮೆಟ್ರೋ ನಿಲ್ದಾಣವನ್ನೂ ಸ್ಫೋಟಿಸುವುದಾಗಿ ಬಂತು ಇ-ಮೇಲ್
ವಿಜೇಂದರ್
Image Credit source: Education News

Updated on: Mar 24, 2026 | 11:18 AM

ನವದೆಹಲಿ, ಮಾರ್ಚ್​ 24: ದೆಹಲಿ ವಿಧಾನಸಭಾ ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬಾಂಬ್ ಬೆದರಿಕೆ(Bomb Threat) ಇ-ಮೇಲ್ ಬಂದಿದೆ. ವಿಧಾನಸಭೆ ಕಟ್ಟಡ ಮತ್ತು ದೆಹಲಿ ಮೆಟ್ರೋ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ದೆಹಲಿ ವಿಧಾನಸಭಾ ಸ್ಪೀಕರ್ ಕಚೇರಿಯ ಪ್ರಕಾರ, ಲೆಫ್ಟಿನೆಂಟ್ ಗವರ್ನರ್ ತರಂಜಿತ್ ಸಿಂಗ್ ಸಂಧು ಅವರಿಗೂ ಬೆದರಿಕೆ ಹಾಕಲಾಗಿದೆ. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮತ್ತು ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೂ ಬೆದರಿಕೆ ಹಾಕಲಾಗಿದೆ.

ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರಿಗೂ ಬೆದರಿಕೆ ಹಾಕಲಾಗಿದೆ. ಸ್ಪೀಕರ್ ವಿಜೇಂದರ್ ಗುಪ್ತಾ ಅವರಿಗೆ ಬೆಳಗ್ಗೆ 7.49 ಕ್ಕೆ ಇಮೇಲ್ ಬಂದಿದ್ದು, ವಿಧಾನಸಭೆಗೆ ಬೆಳಗ್ಗೆ 7.28 ಕ್ಕೆ ಇಮೇಲ್ ಬಂದಿತು.ಬೆದರಿಕೆ ಕರೆ ಬಂದ ನಂತರ, ಭದ್ರತಾ ಸಿಬ್ಬಂದಿ ವಿಧಾನಸಭೆ ಸ್ಪೀಕರ್ ಕೊಠಡಿಗೆ ತೆರಳಿ ತನಿಖೆ ನಡೆಸಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ಇಮೇಲ್‌ ನಲ್ಲಿ ಸರಣಿ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು. ದೆಹಲಿ ವಿಧಾನಸಭೆ ದೆಹಲಿ ಅಸೆಂಬ್ಲಿ, ಸಚಿವಾಲಯ, ಕೆಂಪುಕೋಟೆ ಮತ್ತು ಎರಡು ಶಾಲೆಗಳು ಸೇರಿದಂತೆ ಹಲವು ಸಂಸ್ಥೆಗಳಿಗೆ ಇಂದು ಬೆಳಗ್ಗೆ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಭದ್ರತಾ ಪಡೆಗಳು ತೀವ್ರ ತಪಾಸಣೆ ನಂತರ ಅದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ದೃಢಪಟ್ಟಿತ್ತು.

ಮತ್ತಷ್ಟು ಓದಿ: ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ

ಕೆಲವು ದುಷ್ಕರ್ಮಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿಸಲು ಬಳಸಿದ ಐಪಿ ವಿಳಾಸ ಪತ್ತೆಗಾಗಿ ಸೈಬರ್ ತಂಡಗಳು ಪ್ರಯತ್ನಿಸುತ್ತಿವೆ. ಅಂತಹ ಅಪರಾಧಿಗಳು ಪೋಲೀಸ್ ತನಿಖೆಯನ್ನು ದಾರಿ ತಪ್ಪಿಸಲು ಇಮೇಲ್‌ ಕಳುಹಿಸಲು ವರ್ಚುವಲ್ ಪ್ರೈವೇಟ್ ನೆಟ್‌ವರ್ಕ್ (VPN) ಬಳಸುತ್ತಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us